ಯಾದಗಿರಿಯಲ್ಲಿ ಹೆಸರು ಬೆಳೆಗೆ ಹಳದಿ ನಂಜಾಣು ರೋಗ ಬಾಧೆ

July 17, 2025
9:02 PM

ಯಾದಗಿರಿಯಲ್ಲಿ ಹೆಸರು ಬೆಳೆಗೆ ಹಳದಿ ನಂಜಾಣು ರೋಗದ ಭಾದೆ ಕಾಣಿಸಿಕೊಂಡಿದ್ದು, ಇದರ ತಡೆಗೆ ರೈತರು ಕೃಷಿ ಇಲಾಖೆ ಸೂಚಿಸಿದ ನಿರ್ವಹಣಾ ಕ್ರಮ ಪಾಲಿಸಬೇಕು ಎಂದು ಸಹಾಯಕ ಕೃಷಿ ನಿರ್ದೇಶಕ ಸುರೇಶ ಬಿ. ತಿಳಿಸಿದ್ದಾರೆ.

2025-26 ನೇ ಸಾಲಿನಲ್ಲಿ ಯಾದಗಿರಿ ಮತ್ತು ಗುರುಮಠಕಲ್ ತಾಲ್ಲೂಕಿನಲ್ಲಿ ಒಟ್ಟಾರೆಯಾಗಿ 9 ಸಾವಿರದ 674  ಹೆಕ್ಟೇರ್ ಪ್ರದೇಶದಲ್ಲಿ ಹೆಸರು ಬಿತ್ತನೆಯಾಗಿದೆ. ಅಲ್ಲಲ್ಲಿ ಹಳದಿ ನಂಜಾಣು ರೋಗದ ಭಾದೆ ಕಂಡುಬರುತ್ತಿದೆ. ರೋಗಗ್ರಸ್ತ ಗಿಡಗಳನ್ನು ಕಿತ್ತು ಎಸೆಯಬೇಕು. ನಂಜಾಣು ರೋಗವು ಬಿಳಿ ನೋಣ ಎಂಬ ಕೀಟದಿಂದ ಹರಡುವುದರಿಂದ ಕೀಟ ನಿರ್ವಹಣಾ ಕ್ರಮ ಹಮ್ಮಿಕೊಳ್ಳಬೇಕು. ಪ್ರತಿ ಲೀಟರ್ ನೀರಿಗೆ ಬೇವಿನ ಎಣ್ಣೆ 2 ಎಂ.ಎಲ್. ಬೆರೆಸಿ ಸಿಂಪಡಣೆ ಮಾಡಬೇಕು ಎಂದು ತಿಳಿಸಿದ್ದಾರೆ. ಇಮಿಡಾಕ್ಲೋಪ್ರೀಡ್ ಕೀಟನಾಶಕ ಪ್ರತಿ ಲೀಟರ್ ನೀರಿಗೆ 5 ಎಂ.ಎಲ್ ಬೆರೆಸಿ ಸಿಂಪಡಣೆ ಮಾಡಬೇಕು. ಫಿಮಿತ್ರೋಜನ್ 0.5 ಗ್ರಾಂ, ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಬೇಕು. ಹೆಚ್ಚಿನ ಮಾಹಿತಿಗೆ ರೈತ ಸಂಪರ್ಕ ಕೇಂದ್ರ, ಕೃಷಿ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಕೋರಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!
May 3, 2026
10:27 AM
by: ದ ರೂರಲ್ ಮಿರರ್.ಕಾಂ
2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು
May 3, 2026
8:17 AM
by: ದ ರೂರಲ್ ಮಿರರ್.ಕಾಂ
ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ
May 3, 2026
7:10 AM
by: ಮಿರರ್‌ ಡೆಸ್ಕ್
ಗ್ರಾಮೀಣ ಜಾಲಕ್ಕೆ ನೆಟ್ವರ್ಕ್ ಬೂಸ್ಟ್‌ – ಬಿಎಸ್ಎನ್ಎಲ್ ಸುಧಾರಣೆಗೆ ಕೇಂದ್ರದ ಆದ್ಯತೆ
May 3, 2026
7:02 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror