ಯಾದಗಿರಿಯಲ್ಲಿ ಹೆಸರು ಬೆಳೆಗೆ ಹಳದಿ ನಂಜಾಣು ರೋಗದ ಭಾದೆ ಕಾಣಿಸಿಕೊಂಡಿದ್ದು, ಇದರ ತಡೆಗೆ ರೈತರು ಕೃಷಿ ಇಲಾಖೆ ಸೂಚಿಸಿದ ನಿರ್ವಹಣಾ ಕ್ರಮ ಪಾಲಿಸಬೇಕು ಎಂದು ಸಹಾಯಕ ಕೃಷಿ ನಿರ್ದೇಶಕ ಸುರೇಶ ಬಿ. ತಿಳಿಸಿದ್ದಾರೆ.
2025-26 ನೇ ಸಾಲಿನಲ್ಲಿ ಯಾದಗಿರಿ ಮತ್ತು ಗುರುಮಠಕಲ್ ತಾಲ್ಲೂಕಿನಲ್ಲಿ ಒಟ್ಟಾರೆಯಾಗಿ 9 ಸಾವಿರದ 674 ಹೆಕ್ಟೇರ್ ಪ್ರದೇಶದಲ್ಲಿ ಹೆಸರು ಬಿತ್ತನೆಯಾಗಿದೆ. ಅಲ್ಲಲ್ಲಿ ಹಳದಿ ನಂಜಾಣು ರೋಗದ ಭಾದೆ ಕಂಡುಬರುತ್ತಿದೆ. ರೋಗಗ್ರಸ್ತ ಗಿಡಗಳನ್ನು ಕಿತ್ತು ಎಸೆಯಬೇಕು. ನಂಜಾಣು ರೋಗವು ಬಿಳಿ ನೋಣ ಎಂಬ ಕೀಟದಿಂದ ಹರಡುವುದರಿಂದ ಕೀಟ ನಿರ್ವಹಣಾ ಕ್ರಮ ಹಮ್ಮಿಕೊಳ್ಳಬೇಕು. ಪ್ರತಿ ಲೀಟರ್ ನೀರಿಗೆ ಬೇವಿನ ಎಣ್ಣೆ 2 ಎಂ.ಎಲ್. ಬೆರೆಸಿ ಸಿಂಪಡಣೆ ಮಾಡಬೇಕು ಎಂದು ತಿಳಿಸಿದ್ದಾರೆ. ಇಮಿಡಾಕ್ಲೋಪ್ರೀಡ್ ಕೀಟನಾಶಕ ಪ್ರತಿ ಲೀಟರ್ ನೀರಿಗೆ 5 ಎಂ.ಎಲ್ ಬೆರೆಸಿ ಸಿಂಪಡಣೆ ಮಾಡಬೇಕು. ಫಿಮಿತ್ರೋಜನ್ 0.5 ಗ್ರಾಂ, ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಬೇಕು. ಹೆಚ್ಚಿನ ಮಾಹಿತಿಗೆ ರೈತ ಸಂಪರ್ಕ ಕೇಂದ್ರ, ಕೃಷಿ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಕೋರಿದ್ದಾರೆ.
1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…
ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…
ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…
ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…
ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…