ರಾಜ್ಯದಲ್ಲಿ ಕಳೆದ ವರ್ಷ 25 ಸಾವಿರಕ್ಕೂ ಅಧಿಕ ಕೃಷಿ ಹೊಂಡಗಳನ್ನು ನಿರ್ಮಾಣ ಮಾಡಲಾಗಿದೆ. ಬೃಹತ್ ಮತ್ತು ಸಣ್ಣ ನೀರಾವರಿಗೆ 25 ಸಾವಿರ ಕೋಟಿಗೂ ಅಧಿಕ ಹಣ ಖರ್ಚು ಮಾಡಲಾಗುತ್ತಿದೆ. ರಾಜ್ಯದ ಎಲ್ಲ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಸರ್ಕಾರ ಬದ್ಧವಾಗಿದೆ. ರೈತರಿಗೆ 400 ಕೋಟಿ ರೂಪಾಯಿ ವೆಚ್ಚದಲ್ಲಿ ಕೃಷಿ ಮತ್ತು ಯಂತ್ರೋಪಕರಣಗಳನ್ನು ವಿತರಿಸಲಾಗಿದೆ. ಕೃಷಿಭಾಗ್ಯವನ್ನು ಮಳೆ ಆಧಾರಿತ ಕೃಷಿ ಬೆಳೆಗಾರರಿಗೂ ಜಾರಿಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಬೆಳಗಾವಿ ವಿಭಾಗ ಮಟ್ಟದ ಕೃಷಿ ಇಲಾಖೆಯ ಸಹಾಯಧನದ ಅಡಿಯಲ್ಲಿ ರೈತರಿಗೆ ವಿವಿಧ ಯಂತ್ರೋಪಕರಣಗಳು ಮತ್ತು ಸವಲತ್ತುಗಳನ್ನು ವಿತರಿಸಿದರು.ರಾಜ್ಯ ಸರ್ಕಾರ ಕೃಷಿ ಮತ್ತು ನೀರಾವರಿ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಿದೆ. ರೈತರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು, ವಿವಿಧ ಯಂತ್ರೋಪಕರಣಗಳು ಹಾಗೂ ಸಲಕರಣೆಗಳನ್ನು ವಿತರಣೆ ಮಾಡಲಾಗಿದೆ. ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.
ಸಚಿವ ಚಲುವರಾಯಸ್ವಾಮಿ ಮಾತನಾಡಿ, ರಾಜ್ಯದಲ್ಲಿ ಈ ವರ್ಷ 12 ಸಾವಿರಕ್ಕೂ ಅಧಿಕ ಕೃಷಿ ಹೊಂಡಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಕೃಷಿಯಲ್ಲಿ ವಿಭಿನ್ನ ತಂತ್ರಜ್ಞಾನಗಳನ್ನು ಅಳವಡಿಸಲಾಗುತ್ತಿದೆ. ರೈತರು ಈ ಸೌಲಭ್ಯವನ್ನು ಉಪಯೋಗಿಸಿಕೊಳ್ಳಬೇಕು ಎಂದು ಹೇಳಿದರು.
ಈ ವೇಳೆ ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ಬೈರತಿ ಸುರೇಶ್ ಸೇರಿದಂತೆ ಬೆಳಗಾವಿ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ನಿನ್ನೆ ಮಧ್ಯರಾತ್ರಿ ಪಾಕಿಸ್ತಾನ ಜಮ್ಮು ಮತ್ತು ಕಾಶ್ಮೀರದ ಹಲವು ಭಾಗಗಳಲ್ಲಿ ನಾಗರಿಕರನ್ನು ಮತ್ತು…
ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಸಂಭವನೀಯ ದಾಳಿಯ ಬಗ್ಗೆ…
ಹಿಂದೂ ಧರ್ಮದ ವಿಶೇಷತೆ ಎಂದರೆ ಅದು ಸ್ವ ವಿಮರ್ಶೆಯ (self -criticism) ಸ್ವಾತಂತ್ರ್ಯ…
ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಹೊಸತನದ ಶೋರೂಮ್ ಅನಾವರಣದ ಅಂಗವಾಗಿ ಮೇ 9…
ಮುಳಿಯ ನೂತನ ನವೀಕೃತ ವಿಸ್ತೃತ ಆಭರಣ ಮಳಿಗೆಯ ಅನಾವರಣ ಪ್ರಯುಕ್ತ ಕೃಷಿ ಬೆಳವಣಿಗೆಗೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490