ರಾಜ್ಯಗಳಿಗೆ ಕೇಂದ್ರದಿಂದ ಕೋವಿಡ್ ಲಸಿಕೆ ವಿತರಣೆ : ತಾಲೂಕು ಆಸ್ಪತ್ರೆಗಳಲ್ಲಿ ಮತ್ತೆ ಲಭ್ಯ : ಈ ಡೋಸ್ ಯಾರಿಗೆಲ್ಲಾ ಸಿಗಲಿದೆ..?

January 2, 2024
11:02 AM
ಕೊರೋನಾ ಮತ್ತೆ ಸದ್ದು ಮಾಡುತ್ತಿರುವಂತೆಯೇ ಲಸಿಕೆ ವಿತರಣಾ ಕಾರ್ಯ ಆರಂಭವಾಗಿದೆ.

ಕಳೆದ ಎರಡು ವರ್ಷಗಳ ಹಿಂದೆ ಭಾರತದಲ್ಲಿ(India) ಕೊರೋನೋ(Corona) ಹಾವಳಿಯನ್ನು ನಿಯಂತ್ರಣಕ್ಕೆ ತಂದಿದ್ದು ಕೊವಿಡ್‌ ಲಸಿಕೆ. ಇದೀಗ ಮತ್ತೆ ಕೊರೋನಾ ಆರಂಭವಾಗಿದೆ. ಹಾಗಾಗಿ ಕೋವಿಶೀಲ್ಡ್ (Covishield) ಅಥವಾ ಕೊವ್ಯಾಕ್ಸಿನ್ (Covaxin) 2ನೇ ಲಸಿಕೆ ಪಡೆದವರಿಗೆ ನೀಡಲು ಕೇಂದ್ರ ಸರ್ಕಾರವು(Central Govt) ರಾಜ್ಯಕ್ಕೆ(State) 30,000 ಡೋಸ್ ಕಾರ್ಬೆವ್ಯಾಕ್ಸ್ (Corbevax) ಲಸಿಕೆಯನ್ನು ಸರಬರಾಜು ಮಾಡಿದೆ.

Advertisement
Advertisement
Advertisement

ಈ ಲಸಿಕೆಯನ್ನು ವಿಜಾತಿ (ಹೆಟೆರೊಲಾಗಸ್) ಮುನ್ನೆಚ್ಚರಿಕೆಯಾಗಿ ನೀಡಬಹುದು. ತಾಂತ್ರಿಕ ಸಲಹಾ ಸಮಿತಿಯ ಶಿಫಾರಸಿನಂತೆ ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್ ಲಸಿಕೆಯ 2ನೇ ಡೋಸ್ ಪಡೆದು ಆರು ತಿಂಗಳು ಅಥವಾ 26 ತಿಂಗಳು ಪೂರೈಸಿದ ಬಳಿಕವೂ ಮುನ್ನೆಚ್ಚರಿಕೆ ಡೋಸ್ ಪಡೆಯದವರಿಗೆ ಈ ಲಸಿಕೆ ನೀಡಬಹುದು.

Advertisement

60 ವರ್ಷ ದಾಟಿದವರು, ರೋಗ ನಿರೋಧಕ ಶಕ್ತಿ ಕಡಿಮೆ ಇರುವವರು ಈ ಲಸಿಕೆಯನ್ನು ಪಡೆಯಬಹುದು. ಕೋವಿಡ್-19 ಲಸಿಕಾಕರಣದ ಮಾರ್ಗಸೂಚಿಯಂತೆಯೇ ಈ ಲಸಿಕೆಯನ್ನು ನೀಡಲಾಗುವುದು. ಜಿಲ್ಲಾ ಆಸ್ಪತ್ರೆಗಳು ಮತ್ತು ಜಿಲ್ಲಾ ಮಟ್ಟದಲ್ಲಿ ನಿರ್ಣಯಿಸಲಾದ ತಾಲೂಕು ಆಸ್ಪತ್ರೆಗಳಿಗೆ ಮಾತ್ರ ಹಂಚಿಕೆ ಮಾಡಿ ಲಸಿಕಾಕರಣ ಹಮ್ಮಿಕೊಳ್ಳಲಾಗಿದೆ.

ಯಾವ ಜಿಲ್ಲೆಗೆ ಎಷ್ಟು ಕಾರ್ಬೆವ್ಯಾಕ್ಸ್ ಡೋಸ್ ಹಂಚಿಕೆ? : ಬೆಂಗಳೂರು ನಗರ-840, ಬೆಂಗಳೂರು ಗ್ರಾಮಾಂತರ-480, ಬಿಬಿಎಂಪಿ-5,680, ಚಿಕ್ಕಬಳ್ಳಾಪುರ-520, ಕೋಲಾರ-680, ರಾಮನಗರ-440, ತುಮಕೂರು-1,300, ಬೆಳಗಾವಿ-2,280, ಧಾರವಾಡ-920, ಹಾವೇರಿ-780, ಉತ್ತರ ಕನ್ನಡ-660, ಬಳ್ಳಾರಿ-640, ಚಿತ್ರದುರ್ಗ-720, ದಾವಣಗೆರೆ-740, ಶಿವಮೊಗ್ಗ-820,ವಿಜಯನಗರ-560, ಬಾಗಲಕೋಟೆ-900, ವಿಜಯಪುರ-1,000, ಗದಗ-500, ಕೊಪ್ಪಳ-520, ಚಾಮರಾಜನಗರ-440, ಹಾಸನ-720, ಕೊಡಗು-220, ಮಂಡ್ಯ-720, ಮೈಸೂರು-1,360, ಚಿಕ್ಕಮಗಳೂರು-480, ದಕ್ಷಿಣ ಕನ್ನಡ-1,140, ಉಡುಪಿ-520, ಬೀದರ್-840, ಕಲಬುರಗಿ-1,280, ರಾಯಚೂರು-820, ಯಾದಗಿರಿ-480 ಡೋಸ್ ಹಂಚಲಾಗಿದೆ. ಒಟ್ಟು 30,000 ಡೋಸ್ ಲಸಿಕೆಯನ್ನು ಸರಬರಾಜು ಮಾಡಲಾಗಿದೆ.

Advertisement

– ಅಂತರ್ಜಾಲ ಮಾಹಿತಿ

The Central Govt has supplied 30,000 doses of Corbevax vaccine to the State to give to the 2nd vaccine recipients of Covishield or Covaxin.

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಮೇಲೆ ಕ್ಯಾನ್ಸರ್‌ ತೂಗುಗತ್ತಿಯ ಭಯ ಏಕೆ ? | ಅಡಿಕೆಯ ಔಷಧೀಯ ಅಧ್ಯಯನ ಸಾಕಷ್ಟಿದೆ | ಈಗ ಸಂಘಟಿತ ಹೋರಾಟ ಅಗತ್ಯ |
November 22, 2024
9:02 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಕ್ಯಾನ್ಸರ್‌ಕಾರಕವಲ್ಲ | WHO ವರದಿ ಸತ್ಯಕ್ಕೆ ದೂರವಾದುದು | ಅಧ್ಯಯನದ ನೆರವಿಗೆ ಕೇಂದ್ರ ಸರ್ಕಾರಕ್ಕೆ ಮನವಿ | ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಹೇಳಿಕೆ |
November 22, 2024
4:02 PM
by: ದ ರೂರಲ್ ಮಿರರ್.ಕಾಂ
ನ.23 | ಗುತ್ತಿಗಾರು ಸಹಕಾರಿ ಸಂಘದ ಶತಮಾನೋತ್ಸವ | ಕೃಷಿ ವಿಚಾರಗೋಷ್ಠಿ | ಅಡಿಕೆ ರೋಗಗಳ ಬಗ್ಗೆ ಮಾಹಿತಿ ವಿನಿಮಯ |
November 22, 2024
2:32 PM
by: ದ ರೂರಲ್ ಮಿರರ್.ಕಾಂ
ಕೋಲಾರದಲ್ಲಿ ಅತೀ ಹೆಚ್ಚು ನಕಲಿ ವೈದ್ಯರು…! | ನಕಲಿ ವೈದ್ಯರ ಕಡಿವಾಣಕ್ಕೆ ಕಟ್ಟುನಿಟ್ಟಿನ ಕ್ರಮ
November 21, 2024
7:36 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror