ಸಂಪಾಜೆ ಗ್ರಾಮ ಪಂಚಾಯತ್ ವಿಶೇಷ ಗ್ರಾಮಸಭೆ ಹಾಗೂ ಕೃಷಿ ಸಖಿಯರ ಮೂಲಕ ಕೃಷಿಕರಿಗೆ ಏಣಿ ಹಾಗೂ ಜೈವಿಕ ಗೊಬ್ಬರ ವಿತರಣೆ ಕಾರ್ಯಕ್ರಮ ನಡೆಯಿತು.
ದ.ಕ ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆದ ವಿಶೇಷ ಗ್ರಾಮಸಭೆಯಲ್ಲಿ ಕೃಷಿಕರಿಗೆ ಸಬ್ಸಿಡಿ ದರದಲ್ಲಿ ಏಣಿಗಳ ವಿತರಣೆ ಹಾಗೂ ಉಚಿತ ಜೈವಿಕ ಗೊಬ್ಬರ ವಿತರಣೆ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಮತಿ ಶಕ್ತಿವೇಲು ಅಧ್ಯಕ್ಷತೆ ವಹಿಸಿದರು. ಗ್ರಾಮ ಪಂಚಾಯತ್ ಸಂಪಾಜೆ ಕಲ್ಲುಗುಂಡಿ, ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ (ನಿ.) – ಕೇಂದ್ರ ವಿಟ್ಲ, ಐಸಿಎಆರ್ – ಐಐಹೆಚ್‌ಆರ್ ಬೆಂಗಳೂರು, ಕೃಷಿ ವಿಜ್ಞಾನ ಕೇಂದ್ರ ಮಂಗಳೂರು, ಫುಡ್ ಚೈನ್ ಕ್ಯಾಂಪೇನ್, ಶ್ರೀ ವಿಷ್ಣು ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಇವರುಗಳ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಿತು.
ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಹನೀಫ್ ಎಸ್.ಕೆ, ಸದಸ್ಯರು ಜಿ.ಕೆ ಹಮೀದ್, ಪಿಡಿಓ ಸರಿತಾ ಓಲ್ಗಾ ಡಿಸೋಜಾ, ನರೇಗಾ ಎಂಜಿನಿಯರ್ ಪ್ರಮೀಳಾ, ಸುಧನ ಕೃಷ್ಣ, ಸೆಕ್ರಟರಿ ತಿರುಮಲೇಶ್ವರ ಉಪಸ್ಥಿತರಿದ್ದರು.
ನರೇಗಾ ಯೋಜನೆ ಕುರಿತು ಮಾಹಿತಿ, ಚರ್ಚೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ರಸ್ತೆ–ಚರಂಡಿ ನಿರ್ಮಾಣ, ಬಾವಿ ಪುನಶ್ಚೇತನ, ಹೂಳೆತ್ತುವಿಕೆ, ರಬ್ಬರ್ ಗಿಡ ನೆಡುವ ಕಾರ್ಯಗಳಿಗೆ ನರೇಗಾ ಯೋಜನೆಯಡಿ ಅವಕಾಶ ಕಲ್ಪಿಸಲು ಮನವಿ ನೀಡಲು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಅರ್ಕಾ ಜೈವಿಕ ಗೊಬ್ಬರ – ಎ.ಎಂ.ಸಿ ಮಾಹಿತಿ, ಭಾರತ ಕೃಷಿ ಅಭಿವೃದ್ಧಿ ಸಂಸ್ಥೆಯ ವತಿಯಿಂದ ಸರ್ಕಾರದ ಕೃಷಿ ಯೋಜನೆಗಳ ಬಗ್ಗೆ ಮಾಹಿತಿ ನೀಡಲಾಯಿತು.
ಐಸಿಎಆರ್ – ಐಐಹೆಚ್‌ಆರ್ ಬೆಂಗಳೂರು ಸುಳ್ಯದ ಕೃಷಿ ಸಖಿಯರಿಗೆ ತರಬೇತಿ ನೀಡಿದ್ದು, ಪ್ರತಿಷ್ಠಿತ ಸಂಸ್ಥೆಯ ವಿಜ್ಞಾನಿಗಳು ಸಂಶೋಧಿಸಿ ಅಭಿವೃದ್ಧಿಪಡಿಸಿದ ವಿಶೇಷ ಸೂಕ್ಷ್ಮಾಣು ಜೀವಿಗಳ ಜೈವಿಕ ಗೊಬ್ಬರ ಅರ್ಕಾ ಎಎಂಸಿ ಬಗ್ಗೆ, ರೈತ ಉತ್ಪಾದಕರ ಸಂಸ್ಥೆ, ಇ-ಕೆ ವೈ ಸಿ, ಕೃಷಿ ಇಲಾಖೆ, ತೋಟಗಾರಿಕಾ ಇಲಾಖೆಯಿಂದ ಸಿಗುವ ಸೌಲಭ್ಯಗಳ ಬಗ್ಗೆ ಸಂಪಾಜೆ ಕೃಷಿ ಸಖಿ ಮೋಹಿನಿ ವಿಶ್ವನಾಥ್ (ನಿಶಾ) ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಸುಂದರಿ ಮುಂಡಡ್ಕ, ಸಂಜೀವಿನಿ ಎಂ.ಬಿ.ಕೆ ಕಾಂತಿ ಬಿ.ಎಸ್, ಎಲ್‌ಸಿಆರ್‌ಪಿ ಸೌಮ್ಯ, ಭಾರತಿ, ಪಂಚಾಯತ್ ಸಿಬ್ಬಂದಿಗಳಾದ ಗೋಪಮ್ಮ, ಸವಿತಾ, ಮಧುರಾ, ಉಮೇಶ್, ಬೋಜ, ಕೃಷಿಕರು ಹಾಗೂ ಫಲಾನುಭವಿಗಳು ಭಾಗವಹಿಸಿದರು.
ಕ್ಯಾನ್ಸರ್ ಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡ ನಂತರವೂ ವರ್ಷಗಳ ಬಳಿಕ ಮತ್ತೆ ರೋಗ ಕಾಣಿಸಿಕೊಳ್ಳುವುದಕ್ಕೆ…
ಪ್ರಕೃತಿಯಲ್ಲಿ ಇರುವ ಡಿಎನ್‌ಎ, ಪ್ರೋಟೀನ್‌ಗಳಂತೆ ಪ್ಲಾಸ್ಟಿಕ್‌ಗಳನ್ನೂ ಕೂಡಾ ನಿಗದಿತ ಅವಧಿಯಲ್ಲಿ ಸ್ವಯಂ ಕರಗುವಂತೆ…
2026ರಲ್ಲಿ ಕೃಷಿ ಕ್ಷೇತ್ರ ಸ್ಥಿರಗೊಳ್ಳುವ ನಿರೀಕ್ಷೆಯಿದ್ದರೂ, ವಿವಿಧ ಬೆಳೆಗಳ ನಡುವೆ ಅಸಮಾನ ಸ್ಥಿತಿಗಳು…
ವಿಶ್ವಾದ್ಯಂತ ಶಾಖದ ಅಲೆಗಳು ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲಿ, ಮ್ಯಾಸಚೂಸೆಟ್ಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MIT)…
ಗ್ರಾಮೀಣ ವಿದ್ಯುದ್ದೀಕರಣವನ್ನು ಬಲಪಡಿಸಲು ಮತ್ತು ಸಾರ್ವಜನಿಕ ಉಪಯುಕ್ತತೆ ಮೂಲಸೌಕರ್ಯಕ್ಕಾಗಿ ಭೂಮಿಯನ್ನು ಬಳಸಿದ ರೈತರಿಗೆ…
ದೇಹದಲ್ಲಿ ರಕ್ತದೊತ್ತಡ ಹೆಚ್ಚಾಗಿ ಬಿಟ್ಟರೆ ಅಂದರೆ ನಿಯಂತ್ರಣ ತಪ್ಪಿದರೆ ವಿವಿಧ ಸಮಸ್ಯೆ ಉಂಟಾಗುತ್ತದೆ. ಮನುಷ್ಯನ…