ಬಂಟ್ವಾಳ ತಾಲೂಕಿನ ನಾವೂರು ಪೋಯಿಲೊಡಿಯಲ್ಲಿ ಭಾರತ್ ಕೃಷಿ ಅಭಿವೃದ್ಧಿ ಸಂಸ್ಥೆ ನಿಯಮಿತ ಹಾಗೂ ಬಂಟ್ವಾಳ ಎನ್ ಆರ್ ಎಲ್ ಎಂ ಸಂಜೀವಿನಿ ಮಹಿಳಾ ಕಿಸಾನ್ ಪ್ರೊಡ್ಯೂಸರ್ ಕಂಪನಿ ಲಿಮಿಟೆಡ್ ಜಂಟಿ ಆಶ್ರಯದಲ್ಲಿ ಆಯ್ದ 20 ರೈತರಿಗೆ ರಿಯಾಯಿತಿ ದರದಲ್ಲಿ ಏಣಿ ವಿತರಣೆ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮಕ್ಕೆ ಕಂಪನಿ ಅಧ್ಯಕ್ಷೆ ಶೋಭಾ ಅಧ್ಯಕ್ಷತೆ ವಹಿಸಿದರು. ಮುಖ್ಯ ಅತಿಥಿಗಳಾದ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಪ್ರಸಾದ್ ಶೆಟ್ಟಿ ಅವರು ಸದಸ್ಯತ್ವದ ಪ್ರಯೋಜನಗಳು ಹಾಗೂ ಸಹಾಯಧನ ಆಧಾರಿತ ಕೃಷಿ ಉಪಕರಣಗಳ ಕುರಿತು ರೈತರಿಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ DAY–NRLM ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು, ನಿರ್ದೇಶಕರು ಹಾಗೂ ಲೆಕ್ಕಿಗರು ಗುಣವತಿ ಉಪಸ್ಥಿತರಿದ್ದರು. ಕಾರ್ಯಕ್ರಮ ನಿರೂಪಣೆಯನ್ನು NRLM ತಾಲೂಕು ಕೃಷಿಯೇತರ ಚಟುವಟಿಕೆ ವ್ಯವಸ್ಥಾಪಕ ಪ್ರದೀಪ್ ಕಾಮತ್ ನಿರ್ವಹಿಸಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

