ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಸಂಸ್ಥೆ ವತಿಯಿಂದ ಕೃಷಿ ಮಾಹಿತಿ ಕಾರ್ಯಾಗಾರ ಹಾಗೂ ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕ ಸಂಸ್ಥೆಯ ಶೇರು ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮವು ಬೆಳ್ತಂಗಡಿ ಸಿವಿಸಿ ಸಭಾಂಗಣದಲ್ಲಿ ನಡೆಯಿತು.
ಮುಖ್ಯ ಅತಿಥಿಗಳಾಗಿ ರಾಷ್ಟ್ರ ಪ್ರಶಸ್ತಿ ವಿಜೇತ ಕೃಷಿಕ ಪ್ರಭಾಕರ ಮಯ್ಯ ಸೂರ್ಯ, ಸಂಪನ್ಮೂಲ ವ್ಯಕ್ತಿಯಾಗಿ ಕಾಸರಗೋಡಿನ ಸಿ.ಪಿ.ಸಿ.ಆರ್.ಹಿರಿಯ ವಿಜ್ಞಾನಿ , ಅತಿಥಿಯಾಗಿ ಬೆಳ್ತಂಗಡಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಚಂದ್ರಶೇಖರ ಕೆ.ಎಸ್, ಸಂಸ್ಥೆಯ ಅಧ್ಯಕ್ಷ ಕುಸುಮಾಧರ್ ಎಸ್.ಕೆ ಮುಖ್ಯಕಾರ್ಯನಿರ್ವಹಣಾಧಿಕಾರಿ ಚೇತನ್, ವಿವಿಧ ತಾಲೂಕಿನ ನಿರ್ದೇಶಕರುಗಳಾದ ತಿಮ್ಮಪ್ಪ ಹಾಗೂ ಲತಾ ಮತ್ತು ತೆಂಗು ಉತ್ಪಾದಕ ರೈತರು ಹಾಗೂ ಸದಸ್ಯರು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ತೆಂಗು ಉತ್ಪಾದ ರೈತರಿಗೆ ಶೇರು ಪ್ರಮಾಣ ಪತ್ರ ವಿತರಿಸಲಾಯಿತು.ಹಾಗೂ ಕೃಷಿ ಮಾಹಿತಿ ಬಗ್ಗೆ ರೈತರಿಗೆ ಸುಸಜ್ಜಿತವಾಗಿ ತಿಳಿಸಲಾಯಿತು
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel