ಗೌರಿ ಗಣೇಶ ಹಬ್ಬದ ಅಂಗವಾಗಿ ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ ದೇವಾಲಯ ಹಾಗು ನಾರುಕಂತೆ ಮಠಗಳಿಗೆ ಎರಡು ದಿನ ಸುಮಾರು 40 ಕ್ಕೂ ಹೆಚ್ಚು ಗ್ರಾಮಗಳ ಭಕ್ತರು ಆಗಮಿಸಿ ಪೂಜೆ ಸಲ್ಲಿಸುವ ಕಾರಣದಿಂದ ಮುಳ್ಳಯ್ಯನಗಿರಿ ಭಾಗದ ಪ್ರವಾಸಿ ತಾಣಗಳಿಗೆ ಎರಡು ದಿನಗಳ ಕಾಲ ಪ್ರವಾಸಿಗರ ಭೇಟಿಗೆ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದ್ದಾರೆ. ಈ ಭಾಗದ ರೆಸಾರ್ಟ್ ಹೋಂ ಸ್ಟೇಗಳಲ್ಲಿ ಕೂಡ ಈಗಾಗಲೆ ನೊಂದಣಿ ಮಾಡಿಕೊಂಡಿರುವವರನ್ನು ಹೊರತು ಪಡಿಸಿ 2 ದಿನ ಹೊಸ ನೊಂದಣಿ ಮಾಡಿಕೊಳ್ಳುವಂತಿಲ್ಲ. ಹೆಚ್ಚಾಗಿ ಗ್ರಾಮಸ್ಥರು ಆಗಮಿಸುವ ಕಾರಣ ಈ ರಸ್ತೆಗಳಲ್ಲಿ ವಾಹನ ದಟ್ಟಣೆ ಹೆಚ್ಚಾಗಲಿದ್ದು ಸಮಸ್ಯೆ ಉಂಟಾಗುವ ಸಾಧ್ಯತೆ ಇದ್ದು ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…