Advertisement
ಸುದ್ದಿಗಳು

ಪುತ್ತೂರಿನಲ್ಲಿ ವಿವೇಕಾನಂದ ಜ್ಯೂನಿಯರ್ ಚೆಸ್ ಪಂದ್ಯಾಟ | ವಿವೇಕಾನಂದ-ಕುಮಾರಸ್ವಾಮಿ-ಎಸ್‌ಡಿಎಂ ಶಾಲೆಗೆ ಬಹುಮಾನ |

Share

ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಕಾಲೇಜಿನ ದೈಹಿಕ ಶಿಕ್ಷಣ ಮತ್ತು ಐಕ್ಯುಎಸಿ ಘಟಕ ಹಾಗೂ ಸುಳ್ಯದ ಕಲ್ಮಡ್ಕದ ಬಾಬಿ ಫಿಶರ್ಸ್ ಚೆಸ್ ಅಸೋಸಿಯೇಶನ್ ನ ಆಶ್ರಯದಲ್ಲಿ ಜಿಲ್ಲಾ ಮಟ್ಟದ “ವಿವೇಕಾನಂದ ಜ್ಯೂನಿಯರ್ ಚೆಸ್ ಪಂದ್ಯಾಟ” ನಡೆಯಿತು. ಪಂದ್ಯಾಟದಲ್ಲಿ  ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ವಿವೇಕಾನಂದ ಇಂಗ್ಲಿಷ್‌ ಮೀಡಿಯಂ ಶಾಲೆ ವಿದ್ಯಾರ್ಥಿನಿ ಸಾನಿಧ್ಯ ಎಸ್ ರಾವ್ , ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ  ಅಭಿನವ. ಪಿ ,  ಪ್ರೌಢ ಮತ್ತು ಪದವಿ ಪೂರ್ವ ವಿಭಾಗದಲ್ಲಿ ಎಸ್ ಡಿ ಎಂ ಪಿಯುಸಿ ಕಾಲೇಜಿನ ಶ್ರೇಯಸ್ ಎಂ.ಎಸ್ ವಿಜೇತರಾದರು. 

ಸಮಾರೋಪ ಸಮಾರಂಭದಲ್ಲಿ ಮಾತನಾಡಿದ, ಕಲ್ಮಡದ ಬಿ ಎಫ್ ಸಿ ಎ ನಿರ್ದೇಶಕ ಪಿ. ಜಿ. ಎಸ್‌ ಎನ್‌ ಪ್ರಸಾದ್,  ಚದುರಂಗದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಹಲವಾರು ಮಂದಿ ಸಾಧನೆಯನ್ನು ಮೆರೆದಿದ್ದಾರೆ. ಇದಕ್ಕೆ ಡಿ. ಗುಕೇಶ್ ಅವರು ಜಲ್ವಂತ ಸಾಕ್ಷಿಯಾಗಿದ್ದಾರೆ. ಸಾಧಕರನ್ನು ಆದರ್ಶವಾಗಿಟ್ಟುಕೊಂಡು ವಿದ್ಯಾರ್ಥಿಗಳು ಚದುರಂಗಾಟದಲ್ಲಿ ಮುನ್ನಡೆಯಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಮುರಳಿಕೃಷ್ಣ ಕೆ. ಎನ್ ಮಾತನಾಡಿ,
ವಿದ್ಯಾರ್ಥಿಗಳು ಪುಸ್ತಕಕ್ಕೆ ಮಾತ್ರ ಸೀಮಿತರಾಗದೆ, ಕ್ರೀಡೆಯಲ್ಲೂ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು. ಆಗ ಮಾತ್ರ ಮಕ್ಕಳು ಸರ್ವಾಂಗೀಣವಾಗಿ  ಬೆಳೆಯಲು ಸಾಧ್ಯ ಎಂದರು.

ಚೆಸ್ ಪಂದ್ಯಾಟದಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಬಾಬಿ ಫಿಶರ್ಸ್ ಚೆಸ್ ಅಸೋಸಿಯೇಶನ್ ನ ಹಿರಿಯ ಸದಸ್ಯ, ಚದುರಂಗ ಆಟಗಾರ ಮೋಹನ್ ಕುಮಾರ್ ಕಲ್ಮಡ್ಕ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಣ ನಿರ್ದೇಶಕ ಯತೀಶ್ ಸ್ವಾಗತಿಸಿ, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರವಿಶಂಕರ್ ವಿ. ಎಸ್. ವಂದಿಸಿದರು. ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕಿ ಹವ್ಯಾ ಕಾರ್ಯಕ್ರಮವನ್ನು ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

8 hours ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

8 hours ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

1 day ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

1 day ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

1 day ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

1 day ago