ದೀಪಾವಳಿ | ಪಟಾಕಿ ಅವಘಡದಿಂದ ಗಾಯಗೊಂಡವರಿಗೆ ಚಿಕಿತ್ಸೆ ನೀಡಲು ಬೆಂಗಳೂರಿನ ಮಿಂಟೋ ಆಸ್ಪತ್ರೆ ಸಜ್ಜು

October 31, 2024
6:45 AM
ದೀಪಾವಳಿಯ ವೇಳೆ ಪಟಾಕಿ ಸಿಡಿಸುವಾಗ ಇರಲಿ ಎಚ್ಚರ.

ದೀಪಾವಳಿ ಹಬ್ಬದ ವೇಳೆ ಪಟಾಕಿ ಸಿಡಿತದಿಂದ ಸಂಭವಿಸುವ ಕಣ್ಣಿನ ಗಾಯ ಪ್ರಕರಣಗಳನ್ನು ನಿರ್ವಹಿಸಲು ಬೆಂಗಳೂರಿನ ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಮುಂಜಾಗ್ರತಾ ಕ್ರಮವಾಗಿ 35 ಹಾಸಿಗೆಗಳನ್ನು ಸಜ್ಜುಗೊಳಿಸಲಾಗಿದೆ. ಆಸ್ಪತ್ರೆಯ ತುರ್ತು ವಿಭಾಗ ದಿನದ 24 ತಾಸುಗಳ ಕಾಲ ಕಾರ್ಯ ನಿರ್ವಹಿಸಲಿದೆ. ಅಗತ್ಯ ಔಷಧ ದಾಸ್ತಾನಿನೊಂದಿಗೆ ಚಿಕಿತ್ಸೆ, ಶಸ್ತ್ರ ಚಿಕಿತ್ಸೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ವಿಶೇಷ ತಜ್ಞರನ್ನು ಒಳಗೊಂಡ ವೈದ್ಯರ ತಂಡ ಸೇವೆ ನೀಡಲು ಸಜ್ಜಾಗಿವೆ. 

Advertisement
Advertisement

ಮಹಿಳೆಯರು ಹಾಗೂ ಪುರುಷರಿಗೆ ತಲಾ 10 ಹಾಗೂ ಮಕ್ಕಳಿಗೆ 15 ಹಾಸಿಗೆಗಳು ಸೇರಿ ಒಟ್ಟು 35 ಹಾಸಿಗೆಗಳನ್ನು ಗಾಯಾಳುಗಳ ಚಿಕಿತ್ಸೆಗೆ ಮೀಸಲಿಡಲಾಗಿದೆ. ಪಟಾಕಿ ಸಿಡಿಸುವಾಗ ಎಲ್ಲರೂ ಎಚ್ಚರಿಕೆ ವಹಿಸಬೇಕು. ಅದರಲ್ಲೂ ಮಕ್ಕಳು ಪಟಾಕಿ ಸಿಡಿಸುವಾಗ ಹೆಚ್ಚು ಎಚ್ಚರಿಕೆಯಿಂದ ಇರಬೇಕು ಎಂದು  ಆಸ್ಪತ್ರೆಯ ನಿರ್ದೇಶಕ ಡಾ.  ಜಿ.ನಾಗರಾಜು ತಿಳಿಸಿದ್ದಾರೆ. ಮಿಂಟೋ ಆಸ್ಪತ್ರೆಯಲ್ಲಿ ಅಗತ್ಯ ವೈದ್ಯರು, ಶುಶ್ರೂಷಕರು ಹಾಗೂ ಸಹಾಯಕ ಸಿಬ್ಬಂದಿ ನಿಯೋಜಿಸಲಾಗಿದ್ದು, ದಿನದ 24 ಗಂಟೆ ತುರ್ತು ವೈದ್ಯಕೀಯ ಸೇವೆ ಲಭ್ಯವಿರಲಿದೆ. ತುರ್ತು ಚಿಕಿತ್ಸೆಗೆಗಾಗಿ ಮಿಂಟೋ ಆಸ್ಪತ್ರೆಯ ತುರ್ತು ಸಹಾಯವಾಣಿ ಸಂಖ್ಯೆ  7498809105,  9994584495 ಗೆ ಕರೆ ಮಾಡಬಹುದಾಗಿದೆ.

 

 

 

Advertisement
Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಜಾನುವಾರುಗಳನ್ನು ಅರಣ್ಯದಲ್ಲಿ ಮೇವು | ಆದೇಶವನ್ನು ಹಿಂಪಡೆಯುವಂತೆ ರೈತರು ಒತ್ತಾಯ
July 28, 2025
10:30 PM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ಅರಣ್ಯ ಇಲಾಖೆಯಿಂದ 11.50 ಕೋಟಿ ಸಸಿ ನೆಡುವ ಗುರಿ
July 28, 2025
10:23 PM
by: ದ ರೂರಲ್ ಮಿರರ್.ಕಾಂ
ರಾಮನ ಆದರ್ಶ ಸರ್ವಕಾಲಿಕ : ರಾಘವೇಶ್ವರ ಶ್ರೀ
July 28, 2025
8:34 PM
by: The Rural Mirror ಸುದ್ದಿಜಾಲ
ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು
July 28, 2025
8:24 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group