ದೀಪಾವಳಿ ಹಬ್ಬದ ವೇಳೆ ಪಟಾಕಿ ಸಿಡಿತದಿಂದ ಸಂಭವಿಸುವ ಕಣ್ಣಿನ ಗಾಯ ಪ್ರಕರಣಗಳನ್ನು ನಿರ್ವಹಿಸಲು ಬೆಂಗಳೂರಿನ ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಮುಂಜಾಗ್ರತಾ ಕ್ರಮವಾಗಿ 35 ಹಾಸಿಗೆಗಳನ್ನು ಸಜ್ಜುಗೊಳಿಸಲಾಗಿದೆ. ಆಸ್ಪತ್ರೆಯ ತುರ್ತು ವಿಭಾಗ ದಿನದ 24 ತಾಸುಗಳ ಕಾಲ ಕಾರ್ಯ ನಿರ್ವಹಿಸಲಿದೆ. ಅಗತ್ಯ ಔಷಧ ದಾಸ್ತಾನಿನೊಂದಿಗೆ ಚಿಕಿತ್ಸೆ, ಶಸ್ತ್ರ ಚಿಕಿತ್ಸೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ವಿಶೇಷ ತಜ್ಞರನ್ನು ಒಳಗೊಂಡ ವೈದ್ಯರ ತಂಡ ಸೇವೆ ನೀಡಲು ಸಜ್ಜಾಗಿವೆ.
ಮಹಿಳೆಯರು ಹಾಗೂ ಪುರುಷರಿಗೆ ತಲಾ 10 ಹಾಗೂ ಮಕ್ಕಳಿಗೆ 15 ಹಾಸಿಗೆಗಳು ಸೇರಿ ಒಟ್ಟು 35 ಹಾಸಿಗೆಗಳನ್ನು ಗಾಯಾಳುಗಳ ಚಿಕಿತ್ಸೆಗೆ ಮೀಸಲಿಡಲಾಗಿದೆ. ಪಟಾಕಿ ಸಿಡಿಸುವಾಗ ಎಲ್ಲರೂ ಎಚ್ಚರಿಕೆ ವಹಿಸಬೇಕು. ಅದರಲ್ಲೂ ಮಕ್ಕಳು ಪಟಾಕಿ ಸಿಡಿಸುವಾಗ ಹೆಚ್ಚು ಎಚ್ಚರಿಕೆಯಿಂದ ಇರಬೇಕು ಎಂದು ಆಸ್ಪತ್ರೆಯ ನಿರ್ದೇಶಕ ಡಾ. ಜಿ.ನಾಗರಾಜು ತಿಳಿಸಿದ್ದಾರೆ. ಮಿಂಟೋ ಆಸ್ಪತ್ರೆಯಲ್ಲಿ ಅಗತ್ಯ ವೈದ್ಯರು, ಶುಶ್ರೂಷಕರು ಹಾಗೂ ಸಹಾಯಕ ಸಿಬ್ಬಂದಿ ನಿಯೋಜಿಸಲಾಗಿದ್ದು, ದಿನದ 24 ಗಂಟೆ ತುರ್ತು ವೈದ್ಯಕೀಯ ಸೇವೆ ಲಭ್ಯವಿರಲಿದೆ. ತುರ್ತು ಚಿಕಿತ್ಸೆಗೆಗಾಗಿ ಮಿಂಟೋ ಆಸ್ಪತ್ರೆಯ ತುರ್ತು ಸಹಾಯವಾಣಿ ಸಂಖ್ಯೆ 7498809105, 9994584495 ಗೆ ಕರೆ ಮಾಡಬಹುದಾಗಿದೆ.
ದ ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ…
15.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್ಗೆ ಸಮಾನವಾದ ಮೀಥೇನ್…
ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…
ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…
ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …