ಬೆಳಕಿನ ಹಬ್ಬ ದೀಪಾವಳಿ | ಮಾರುಕಟ್ಟೆಯಲ್ಲಿ ವಿವಿಧ ವಿನ್ಯಾಸದ ಹಣತೆ | ಗ್ರಾಹಕರ ಮನಸೆಳೆಯುತ್ತಿರುವ ಮಣ್ಣಿನ ಹಣತೆ |

October 31, 2024
7:14 AM
ಕತ್ತಲಿನಿಂದ ಬೆಳಕಿನೆಡೆಗೆ ಸಾಗುವ  ದೀಪಾವಳಿಗೆ ದೀಪವೇ ವಿಶೇಷ. ವಿವಿಧ ವಿನ್ಯಾಸದ ಬಣ್ಣದ ದೀಪಗಳನ್ನು ಮನೆಯಲ್ಲಿ ಬೆಳಗಿಸುವ ಮೂಲಕ ಹಬ್ಬದ ಸಂಭ್ರಮವನ್ನು ಆಚರಿಸಲಾಗುತ್ತದೆ.

ಬೆಳಕಿನ ಹಬ್ಬ ದೀಪಾವಳಿ  ಹಿನ್ನೆಲೆಯಲ್ಲಿ ದೀಪಗಳಿಗೆ ಬೇಡಿಕೆ ಹೆಚ್ಚಾಗಿದ್ದು, ಬೆಂಗಳೂರಿನ ಪಾಟರಿ ಟೌನ್‌ನಲ್ಲಿ ವಿವಿಧ ವಿನ್ಯಾಸದ ಬಣ್ಣಬಣ್ಣದ ಮಣ್ಣಿನ ಹಣತೆ ತಯಾರಾಗುತ್ತಿದ್ದು ಗ್ರಾಹಕರ ಮನಸೆಳೆಯುತ್ತಿವೆ. 

Advertisement

ಕತ್ತಲಿನಿಂದ ಬೆಳಕಿನೆಡೆಗೆ ಸಾಗುವ  ದೀಪಾವಳಿಗೆ ದೀಪವೇ ವಿಶೇಷ. ವಿವಿಧ ವಿನ್ಯಾಸದ ಬಣ್ಣದ ದೀಪಗಳನ್ನು ಮನೆಯಲ್ಲಿ ಬೆಳಗಿಸುವ ಮೂಲಕ ಹಬ್ಬದ ಸಂಭ್ರಮವನ್ನು ಆಚರಿಸಲಾಗುತ್ತದೆ.  ಬೆಂಗಳೂರಿನ ಪಾಟರಿ ಟೌನ್ ಕುಂಬಾರಿಕೆಗೆ ಹೆಚ್ಚು ಪ್ರಸಿದ್ದಿ, ಇಲ್ಲಿ ಋತುಮಾನಕ್ಕೆ ತಕ್ಕಂತೆ ವಸ್ತುಗಳನ್ನು ತಯಾರಿಸಲಾಗುತ್ತದೆ. ಕಳೆದ  ಹಲವಾರು ವರ್ಷಗಳಿಂದ ಇಲ್ಲಿ ಕುಂಬಾರಿಕೆ ಮಾಡಲಾಗುತ್ತಿದ್ದು, ದೀಪಾವಳಿ ಹಿನ್ನೆಲೆ ವಿಶೇಷ ಹಣತೆಗಳನ್ನು ತಯಾರಿಸಲಾಗುತ್ತಿದೆ. ಇಲ್ಲಿ ತಯಾರಾಗುವ ದೀಪಗಳಿಗೆ ಹೆಚ್ಚು ಬೇಡಿಕೆ ಇದ್ದು, ಖರೀದಿ ಭರಾಟೆ ಜೋರಾಗಿದೆ. ಆನ್ ಲೈನ್ ಮಾರುಕಟ್ಟೆ ಮೂಲಕವೂ ಇಲ್ಲಿನ ದೀಪಗಳನ್ನು ಪೂರೈಸಲಾಗುತ್ತಿದೆ.

ಮೈಸೂರು ಮಹಾರಾಜರ ಕಾಲದಿಂದಲೂ ಕುಂಬಾರಿಕೆ ವೃತ್ತಿ ಮಾಡಿಕೊಂಡು ಬರುತ್ತಿದ್ದು, ಗ್ರಾಹಕರ ಅಭಿರುಚಿಗೆ ತಕ್ಕಂತೆ ದೀಪಗಳನ್ನು ತಯಾರಿಸಲಾಗುತ್ತದೆ ಎಂದು ಹಣತೆ ತಯಾರಕ ರಾಜಶೇಖರ ಹೇಳುತ್ತಾರೆ. ಋತುಮಾನಕ್ಕೆ ತಕ್ಕಂತೆ ವಿವಿಧ ಬಗೆಯ  ದೀಪಗಳನ್ನು  ತಯಾರಿಸಲಾಗುತ್ತಿದೆ. ಕಳೆದ 6 ತಿಂಗಳಿನಿಂದ ಬೇಡಿಕೆಗನುಗುಣವಾಗಿ ದೀಪ ತಯಾರಿಕೆಯಲ್ಲಿ ನಿರತರಾಗಿದ್ದೇವೆ  ಎನ್ನುತ್ತಾರೆ ಸುಮಿತ್ರಾ.

ಇಂದು ಪಟಾಕಿ-ಬೆಳಕು ಇತ್ಯಾದಿ ಚರ್ಚೆಗಳ ನಡುವೆ ಸದ್ದಿಲ್ಲದೆ ಹಣತೆ ಖರೀದಿ ಜೋರಾಗಿ ನಡೆಯುತ್ತಿದೆ. ಈ ಮೂಲಕ ಕುಂಬಾರಿಕೆಗೂ ಬೆಲೆ ನೀಡುವ ಕೆಲಸ ನಡೆಯುತ್ತಿದೆ.

Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹೆದ್ದಾರಿಗಳಲ್ಲಿ ಹಸಿರು ಅಭಿಯಾನ | 4.78 ಕೋಟಿಗೂ ಹೆಚ್ಚು ಗಿಡಗಳ ನಾಟಿ
July 9, 2025
10:27 PM
by: The Rural Mirror ಸುದ್ದಿಜಾಲ
ಪ್ರತಿಯೊಂದು  ಗ್ರಾಮ ಪಂಚಾಯಿತಿಯಲ್ಲಿ  ಕರ್ನಾಟಕ ಪಬ್ಲಿಕ್ ಶಾಲೆ ನಿರ್ಮಾಣ
July 9, 2025
9:19 PM
by: The Rural Mirror ಸುದ್ದಿಜಾಲ
ದಾವಣಗೆರೆ ನಗರ ಸೇರಿದಂತೆ ಜಿಲ್ಲೆಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆ ನಿಷೇಧ
July 9, 2025
9:16 PM
by: The Rural Mirror ಸುದ್ದಿಜಾಲ
ಹೃದಯಾಘಾತದ ಬಗ್ಗೆ ಅನಗತ್ಯ ಆತಂಕ ಪಡುವ ಅಗತ್ಯ ಇಲ್ಲ
July 9, 2025
9:07 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group