Advertisement
ಸುದ್ದಿಗಳು

ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಲು ಜಿಲ್ಲಾಧಿಕಾರಿ ಸೂಚನೆ

Share

ದ ಕ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಗಣೇಶೋತ್ಸವ ಶಾಂತಿ ಹಾಗೂ ಸೌಹಾರ್ದಯುತವಾಗಿ ಹಾಗೂ ಪರಿಸರ ಸ್ನೇಹಿಯಾಗಿ ಆಚರಿಸುವ ನಿಟ್ಟಿನಲ್ಲಿ ಶಾಂತಿ ಹಾಗೂ ಸೌಹಾರ್ದಯುತವಾಗಿ ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಸಕಲ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಂಘಟಕರಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಗಣೇಶೋತ್ಸವ ಸಂದರ್ಭ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಅಧಿಕಾರಿಗಳು ಹಾಗೂ ಸಾರ್ವಜನಿಕ ಗಣೇಶೋತ್ಸವ ಸಮಿತಿಗಳ ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಈ ಹಿಂದಿನಂತೆಯೇ ಜಿಲ್ಲೆಯಲ್ಲಿ ಶಾಂತಿ ಹಾಗೂ ಸೌಹಾರ್ದಯುತ ಗಣೇಶೋತ್ಸವ ಆಚರಣೆಗೆ ಎಲ್ಲರೂ ಸಹಕರಿಸಬೇಕು. ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮಗಳಿಗೆ ಏಕಗವಾಕ್ಷಿ(ಸಿಂಗಲ್ ವಿಂಡೋ) ಅಡಿ ಅನುಮತಿ ನೀಡಬೇಕು. ಉತ್ಸವಕ್ಕೆ ಸಂಘಟಕರು ಗ್ರಾಮೀಣ ಭಾಗದಲ್ಲಾದರೆ ಪಂಚಾಯಿತಿ ಅಥವಾ ಸ್ಥಳೀಯ ಸಂಸ್ಥೆಗಳು, ನಗರ ಭಾಗದಲ್ಲಾದರೆ ಮಹಾನಗರಪಾಲಿಕೆಗೆ ಅರ್ಜಿ ಸಲ್ಲಿಸಬೇಕು. ಧ್ವನಿವರ್ಧಕ ಅಳವಡಿಕೆಗೆ ಆಯಾಯ ಪೆÇಲೀಸ್ ಠಾಣೆಗಳು ಅನುಮತಿ ನೀಡಬೇಕು ಎಂದು ಹೇಳಿದರು.

ಪಿಒಪಿಯಿಂದ ತಯಾರಿಸಿದ ಗಣೇಶನ ಮೂರ್ತಿಗಳನ್ನು ಯಾವುದೇ ಕಾರಣಕ್ಕೂ ಬಳಸಲು ಅವಕಾಶವಿಲ್ಲ. ಉಳಿದಂತೆ ಶಬ್ಧ ಮಾಲಿನ್ಯವಾಗದಂತೆ ಕ್ರಮ ವಹಿಸುವುದು, ಗಣೇಶೋತ್ಸವದ ಸಂದರ್ಭ ಹೆಚ್ಚು ಜನ ಸೇರುವಲ್ಲಿ ಸಮರ್ಪಕ ಬೆಳಕಿನ ವ್ಯವಸ್ಥೆ, ಆ್ಯಂಬುಲೆನ್ಸ್‍ಗಳು ಸನ್ನದ್ಧವಾಗಿರುವಂತೆ ಹಾಗೂ ವಿಸರ್ಜನೆ ಸಂದರ್ಭ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಗಮನ ಹರಿಸುವಂತೆ ಆಯೋಜಕರು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಪ್ಲಾಸ್ಟರ್ ಪ್ಯಾರಿಸ್ ಮತ್ತು ಬಣ್ಣದ ವಿಗ್ರಹಗಳನ್ನು ಸ್ಥಾಪಿಸಿ ಪೂಜಿಸಿದ ನಂತರ ಕೆರೆ ಭಾವಿ ಹಾಗೂ ಇನ್ನಿತರೆ ನೈಸರ್ಗಿಕ ಜಲಮೂಲಗಳಿಗೆ ವಿಸರ್ಜಿಸುವುದು ಸಾಂಪ್ರದಾಯಕವಾಗಿದ್ದು, ಇದರಿಂದಾಗಿ ನೈಸರ್ಗಿಕ ಜಲ ಮೂಲಕ್ಕೆ ತೊಂದರೆಯಾಗುತ್ತದೆ. ಇವುಗಳ ಭೌತಿಕ ಹಾಗೂ ರಾಸಾಯನಿಕ ಗುಣಗಳು ಪರಿಸರದಲ್ಲಿ ಮೇಲೆ ದುಷ್ಪರಿಣಾಮ ಉಂಟಾಗುವುದಲ್ಲದೆ ಪ್ರಾಣಿ ಪಕ್ಷಿ, ಜಲಚರಗಳ ಜೀವಕ್ಕೆ ಅಪಾಯವನ್ನುಂಟು ಮಾಡಲಾಗುತ್ತದೆ. ಅಲ್ಲದೆ ಸಾರ್ವಜನಿಕರ ಆರೋಗ್ಯಕ್ಕೂ ಧಕ್ಕೆ ಉಂಟಾಗುತ್ತದೆ. ಕರ್ನಾಟಕ ರಾಜ್ಯ ಮಾಲಿನ ನಿಯಂತ್ರಣ ಮಂಡಳಿಯ ಸದರಿ ಹಬ್ಬದ ಆಚರಣೆಯಿಂದ ನೈಸರ್ಗಿಕ ಜಲಮೂಲಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ಇನ್ನು ಮುಂದೆ ರಾಜ್ಯದಲ್ಲಿ ಯಾವುದೇ ಕೆರೆ ಮತ್ತು ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಇದಕ್ಕೆ ಸಾರ್ವಜನಿಕರ ಸಹಕಾರವು ಅಗತ್ಯವಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಭಾಗವಹಿಸಿದ್ದ ಸಾರ್ವಜನಿಕರು ಈ ಸಂದರ್ಭ ಪ್ರತಿಕ್ರಿಯಿಸಿ, ಜಿಲ್ಲೆಯಲ್ಲಿ ಸಾರ್ವಜನಿಕವಾಗಿ ಗರಿಷ್ಟ 6.5 ಅಡಿ ಎತ್ತರದವರೆಗಿನ ಗಣೇಶ ಮೂರ್ತಿಗಳನ್ನು ಪೂಜಿಸಲಾಗುತ್ತಿದ್ದು, ಮಣ್ಣಿನಿಂದಲೇ ಈ ವಿಗ್ರಹಗಳನ್ನು ತಯಾರಿಸಲಾಗುತ್ತದೆ ಎಂದರು.

ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಹಲವು ವರ್ಷಗಳಿಂದಲೂ ಸಾರ್ವಜನಿಕವಾಗಿ ಪಿಒಪಿ ಗಣಪನ ಮೂರ್ತಿಗಳನ್ನು ಬಳಸುವುದು ಕಂಡು ಬಂದಿಲ್ಲ. ಹಾಗಿದ್ದರೂ ಸ್ಥಳೀಯಾಡಳಿತ ಈ ಬಗ್ಗೆ ನಿಗಾ ವಹಿಸುತ್ತಿವೆ ಎಂದರು.

ಗಣೇಶೋತ್ಸವದ ಮೆರವಣಿಗೆಯ ಸಂದರ್ಭದಲ್ಲಿ ಬಳಸುವ ವಾಹನಗಳು ಕಾರ್ಯಕ್ಷಮತೆಯನ್ನು ಪ್ರಾದೇಶಿಕ ಸಾರಿಗೆ ಇಲಾಖೆಯವರು ದೃಢೀಕರಿಸಿಕೊಳ್ಳುವಂತೆ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಸಲಹೆ ನೀಡಿದರು.

ನೇತ್ರಾವತಿ, ಫಲ್ಗುಣಿ ಸೇರಿದಂತೆ ಕೆರೆಗಳಲ್ಲಿ ಗಣಪತಿ ವಿಸರ್ಜನೆ ಮಾಡುವಲ್ಲಿ ಬೋಟ್, ಸುವ್ಯವಸ್ಥಿತ ಲೈಟಿಂಗ್, ಲೈವ್ ಜಾಕೆಟ್, ಅಗ್ನಿ ಸುರಕ್ಷತೆ ಸೇರಿದಂತೆ ಸುರಕ್ಷತೆ ಬಗ್ಗೆ ಹೆಚ್ಚಿನ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಸಭೆಯಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್, ಮನಪಾ ಆಯುಕ್ತ ಆನಂದ್, ಡಿಸಿಪಿ ಸಿದ್ಧಾರ್ಥ್ ಗೋಯಲ್ ಮೊದಲಾದವರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

9 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

1 day ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

2 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

2 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

3 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

3 days ago