MIRROR FOCUS

#DakshinaKannada | ಜೀವ ಹಾನಿ ತಡೆಗಟ್ಟಲು ಜಿಲ್ಲಾಡಳಿತ ಸನ್ನದ್ದ | ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಳೆಗಾಲದಲ್ಲಿ ಸಂಭವಿಸುವ ಪ್ರಾಕೃತಿಕ ವಿಕೋಪಗಳಿಂದ ಜೀವ ಹಾನಿಯನ್ನು ತಡೆಗಟ್ಟಲು ಜಿಲ್ಲಾಡಳಿತ ಸರ್ವ ರೀತಿಯಲ್ಲಿ ಸನ್ನದ್ದವಾಗಿದ್ದು, ಹಲವಾರು ಸುರಕ್ಷತಾ ಕ್ರಮಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ತಿಳಿಸಿದರು.

Advertisement
ಮುಲ್ಲೈ ಮುಗಿಲನ್, ದ ಕ ಜಿಲ್ಲಾಧಿಕಾರಿ

ಅವರು ಮಂಗಳೂರು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.   ಮಳೆಗಾಲದಲ್ಲಿ ಜನರ ಜೀವ ರಕ್ಷಿಸಲು ಜಿಲ್ಲೆಯಲ್ಲಿ ನಿರ್ಬಂಧ ಹೇರಲಾದ ಪ್ರದೇಶಗಳಿಗೆ ಪ್ರವಾಸಿಗರು ಸೇರಿದಂತೆ ಸಾರ್ವಜನಿಕರು ತೆರಳಬಾರದು, ಈಗಾಗಲೇ ಜಿಲ್ಲೆಯ ಸಮುದ್ರ ಕಿನಾರೆಗಳು, ದೇವಸ್ಥಾನದ ಹತ್ತಿರದ ನದಿಗಳು, ಸ್ನಾನ ಘಟ್ಟಗಳು, ಚಾರಣ ತಾಣಗಳಿಗೆ ತೆರಳದಂತೆ ನಿರ್ಬಂಧಿಸಲಾಗಿದೆ, ಅದನ್ನ ಉಲ್ಲಂಘಿಸಿದ್ದಲ್ಲೀ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಈಗಾಗಲೇ ಜಿಲ್ಲೆಯ ದೇವಸ್ಥಾನಗಳ ಆಡಳಿತ ಮಂಡಳಿಗಳಿಗೆ ನೀರು ಹರಿಯುತ್ತಿರುವ ಸ್ಥಳಗಳಿಗೆ ಪ್ರವೇಶ ನಿರ್ಬಂಧ ಬಗ್ಗೆ ಸೂಚನೆ ನೀಡುವಂತೆ ತಿಳಿಸಿದ್ದು, ಅದನ್ನು ಮೀರುವಂತಿಲ್ಲ. ಚಾರಣೀಗರು ನಿಷೇಧಿತ ಸ್ಥಳಗಳಲ್ಲಿ ಕಂಡುಬಂದಲ್ಲಿ ಅಂತವರ ವಿರುದ್ಧ ಸೂಕ್ತ ಕಾನೂನು ಕ್ರಮ ಜುರುಗಿಸಲಾಗುವುದು ಎಂದು ಎಚ್ಚರಿಸಿದರು.

ಜಿಲ್ಲೆಯಲ್ಲಿ ಸಾಕಷ್ಟು ಪ್ರದೇಶಗಳನ್ನು ಪ್ರಾಕೃತಿಕ ವಿಕೋಪಕ್ಕೆ ಒಳಗಾಗುವ ಅಪಾಯಕಾರಿ ಪ್ರದೇಶಗಳು ಎಂದು ಗುರುತಿಸಲಾಗಿದ್ದು, ಅದರೊಂದಿಗೆ ಜಿಲ್ಲೆಯೊಳಗೆ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ 87 ಸ್ಥಳಗಳನ್ನು ಅಪಾಯ ಸ್ಥಳಗಳೆಂದು ಗುರುತಿಸಲಾಗಿದೆ,  ಚಾರ್ಮಾಡಿ ಘಾಟಿಯಲ್ಲಿಗೆ 34 ಕಡೆಗಳಲ್ಲಿ ಅಪಾಯ ಸ್ಥಳಗಳನ್ನು ಗುರುತಿಸಲಾಗಿದೆ, ಅಪಾಯಕಾರಿ ಸಂದರ್ಭ ಎದುರಾಗುವಾಗ ಅಲ್ಲಿ ಸಾರ್ವಜನಿಕರು, ಪ್ರಯಾಣಿಕರು ತೆರಳಬಾರದು ಎಂದರು.

ಜಿಲ್ಲೆಯಲ್ಲಿ ಈಗಾಗಲೇ 25 ಎನ್‍ಡಿಆರ್‍ಎಫ್, 38 ಎಸ್‍ಡಿಆರ್‍ಎಫ್, 190 ಅಗ್ನಿಶಾಮಕ ದಳ ಹಾಗೂ 76 ಜನ ಗೃಹ ರಕ್ಷಕ ದಳ ಸಿಬ್ಬಂದಿಯನ್ನು ರಕ್ಷಣೆಗಾಗಿ ನಿಯೋಜಿಸಲಾಗಿದೆ, ಜಿಲ್ಲೆಯಲ್ಲಿ ಪ್ರತೀ ಗ್ರಾಮ ಮಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು, ಮಹಾನಗರ ಪಾಲಿಕೆಯಲ್ಲಿ ವಾರ್ಡ್ ಮಟ್ಟದಲ್ಲಿ ಪ್ರಾಕೃತಿಕ ವಿಕೋಪ ಕೇಂದ್ರಗಳನ್ನು ತೆರೆಯಲಾಗಿದೆ. ಅದಕ್ಕೆ ಓರ್ವ ನೋಡಲ್ ಅಧಿಕಾರಿಯನ್ನು ನೇಮಿಸಲಾಗಿದೆ. ಅಲ್ಲಿ ಏನಾದರೂ ಅಪಾಯ ಸಂಭವಿಸಿದಲ್ಲಿ ನೋಡಲ್ ಅಧಿಕಾರಿಗಳಿಗೆ ತಿಳಿಸಿದರೆ ಅವರು ಕ್ರಮ ಕೈಗೊಳ್ಳಲಿದ್ದಾರೆ. ಹೆಚ್ಚಿನ ಕ್ರಮ ಜರುಗಬೇಕಾಗಿದ್ದಲ್ಲಿ ತಹಶೀಲ್ದಾರರ್‍ಗೆ ಅವರು  ತಿಳಿಸಲಿದ್ದಾರೆ. ಇದಕ್ಕಾಗಿ ಜಿಲ್ಲೆಯಾಧ್ಯಂತ 34 ಕಂಟ್ರೋಲ್ ರೂಂ. ತೆರೆಯಲಾಗಿದ್ದು, ಅವರಿಗೆ ಕರೆ ಮಾಡುವಂತೆ ಕೋರಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿ.ಬಿ. ಅವರು ಮಾತನಾಡಿ, ಹೊರಗಿನಿಂದ ಜಿಲ್ಲೆಯ ದೇವಸ್ಥಾನಕ್ಕೆ ಬರುವವರು ಸಾಕಷ್ಟು ಜಾಗೃತಿ ವಹಿಸಬೇಕಾಗಿದೆ. ಅಗತ್ಯವಿದ್ದರೆ ಮಾತ್ರ ಬರುವುದು ಸೂಕ್ತ. ಈಗಾಗಲೇ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬರುವಂತಹ 2 ರಸ್ತೆಗಳು ಮುಚ್ಚಲಾಗಿದೆ. ರಸ್ತೆ ತಡೆ ಉಂಟಾದಲ್ಲಿ ಸಮಸ್ಯೆಯಾಗಲಿದೆ. ಹೊರಗಿನಿಂದ ಬರುವವರು ನೀರಿಗೆ ಇಳಿಯುವುದು, ಅಪಾಯಕಾರಿ ಸ್ಥಳಗಳಲ್ಲಿ ಸೆಲ್ಫಿ ತೆಗೆಯುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲ್‍ದೀಪ್ ಕುಮಾರ್ ಜೈನ್ ಮಾತನಾಡಿ, ಹೊರ ಜಿಲ್ಲೆಯಿಂದ ಇಲ್ಲಿಗೆ ಬರುವವರು ಮಳೆ ಸಂದರ್ಭದಲ್ಲಿ ಗೂಗಲ್ ಮ್ಯಾಪ್ ಬಳಸುವುದು ಸೂಕ್ತ. ಯಾವ ರಸ್ತೆಯನ್ನು ಮುಚ್ಚಿದೆ, ಎಷ್ಟು ಗಂಟೆಯಿಂದ ಎಷ್ಟು ಗಂಟೆಯ ತನಕ ಮುಚ್ಚಲಾಗುವುದು ಎಂಬ ಮಾಹಿತಿ ಲಭಿಸಲಿದೆ, ಇದರಿಂದ ಅವರ ಪ್ರಯಾಣಕ್ಕೆ ಅನುಕೂಲವಾಗುವುದು ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಚಟ್ಟಂಬಡೆ

ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಚಟ್ಟಂಬಡೆ..

8 hours ago

ಭಾರತದಿಂದ ‘ಆಪರೇಷನ್ ಸಿಂಧೂರ್’ | ಭಯೋತ್ಪಾದಕ ಮೂಲಸೌಕರ್ಯಗಳ ನೆಲೆಗಳ ನಾಶ | 9 ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ |

ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ನೆಲೆಗಳ…

8 hours ago

ಯುದ್ಧ ಆದರೆ ಕೃಷಿ ಉತ್ಪನ್ನಗಳ ಧಾರಣೆ ಏನಾಗಬಹುದು?

ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…

1 day ago

ಪ್ರೀತಿಯ ಹಂಬಲ ಇರುವ, ವಯಸ್ಸಾದ, ಅನುಭವ ಹೊಂದಿದ ವ್ಯಕ್ತಿಗಳನ್ನು ಗೌರವಿಸುವ 5 ರಾಶಿಯ ಹುಡುಗಿಯರು |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

1 day ago

ಮಂಗಳೂರು | ರಾಷ್ಟ್ರೀಯ ಚೆಸ್ ಪಂದ್ಯಾಟ ಇಂದು ಸಮಾರೋಪ

ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರದಿಂದ ನಡೆಯುತ್ತಿದ್ದ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್…

1 day ago