ಕೈ ಅಭ್ಯರ್ಥಿಯ ಬಿ ಫಾರಂಗೆ ತಡೆ | ಪದ್ಮನಾಭನಗರದಲ್ಲಿ ಅಶೋಕ್‌ ವಿರುದ್ಧ ಡಿಕೆ ಸುರೇಶ್‌ ಕಣಕ್ಕೆ?

April 19, 2023
10:39 AM

ನಾಮಪತ್ರ ಸಲ್ಲಿಕೆಗೆ ಎರಡೇ ದಿನ ಬಾಕಿ ಉಳಿದಿದೆ. ಹೀಗಾಗಿ ಚುನಾವಣಾ ಕಣ ರಂಗೇರುತ್ತಿದ್ದು ಪದ್ಮನಾಭನಗರದ  ಕಾಂಗ್ರೆಸ್‌  ಅಭ್ಯರ್ಥಿ ಯಾರು ಎನ್ನುವುದು ದೊಡ್ಡ ಪ್ರಶ್ನೆಯಾಗಿದೆ.ಕಾಂಗ್ರೆಸ್‌ ಈಗಾಗಲೇ ರಘುನಾಥ್ ನಾಯ್ಡು, ಅವರಿಗೆ ಫಾರಂ ಬಿ ನೀಡಿದೆ. ಆದರೆ ಈಗ ಬಿ ಫಾರಂಗೆ ತಡೆ ಹಿಡಿಯಲಾಗಿದ್ದು ಹಾಲಿ ಶಾಸಕ ಅಶೋಕ್‌ಗೆ ಠಕ್ಕರ್‌ ನೀಡಲು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಶಾಸಕ ಡಿಕೆ ಸುರೇಶ್‌ ಸ್ಪರ್ಧೆ ಮಾಡುತ್ತಾರಾ ಎನ್ನುವುದು ಸದ್ಯದ ಕುತೂಹಲ.

ಕನಕಪುರದಲ್ಲಿ ಬಿಜೆಪಿ ಅಚ್ಚರಿ ಎಂಬಂತೆ ಡಿಕೆ ಶಿವಕುಮಾರ್‌ ವಿರುದ್ಧ ಅಶೋಕ್‌ ಅವರನ್ನು ನಿಲ್ಲಿಸಿದೆ. ರಾಮನಗರದಲ್ಲಿ ಸಂಘಟನೆ ದೃಷ್ಟಿಯಿಂದ ಬಲಿಷ್ಠ ಅಭ್ಯರ್ಥಿ ಹಾಕಿದರೆ ಮುಂದೆ ಬಿಜೆಪಿಗೆ ಲಾಭ ಎಂಬ ದೃಷ್ಟಿಯಿಂದ ಅಶೋಕ್‌ ಅವರನ್ನು ಕಣಕ್ಕೆ ಇಳಿಸಿದೆ.

ಅಶೋಕ್‌ ಅವರನ್ನು ಕನಕಪುರದಲ್ಲಿ ಕಣಕ್ಕೆ ಇಳಿಸಿದ ಬೆನ್ನಲ್ಲೇ ಪದ್ಮನಾಭನಗರದಲ್ಲಿ ಅಶೋಕ್‌ಗೆ ಠಕ್ಕರ್‌ ನೀಡಲು ಡಿಕೆ ಸುರೇಶ್‌ ಅವರನ್ನು ಇಳಿಸಲಾಗುತ್ತದೆ ಎಂಬ ವದಂತಿ ಕೇಳಿ ಬಂದಿತ್ತು. ಈ ಮಾತಿಗೆ ಆರಂಭದಲ್ಲಿ ಡಿಕೆ ಸುರೇಶ್‌, ನಾನು ರಾಜ್ಯ ರಾಜಕೀಯಕ್ಕೆ ಬರುವುದಿಲ್ಲ. ಲೋಕಸಭಾ ಸದಸ್ಯನಾಗಿ ಇರುತ್ತೇನೆ ಎಂದು ಹೇಳಿದ್ದರು. ಆದರೆ ರಘುನಾಥ್ ನಾಯ್ಡು ಅವರಿಗೆ ನೀಡಿದ್ದ ಬಿ ಫಾರಂ ತಡೆ ಹಿಡಿದ ಪರಿಣಾಮ ಕಾಂಗ್ರೆಸ್‌ ಅಭ್ಯರ್ಥಿ ಯಾರು ಎನ್ನುವ ಪ್ರಶ್ನೆ ಎದುರಾಗಿದೆ.

ಪದ್ಮನಾಭನಗರದ ಅಭ್ಯರ್ಥಿ ರಘುನಾಥ್ ನಾಯ್ಡು ಡಿ.ಕೆ.ಸುರೇಶ್ ಬಂದು ಸ್ಪರ್ಧೆ ಮಾಡಿದರೆ ನಾನು ಸ್ಥಾನ ಬಿಟ್ಟುಕೊಡಲು ರೆಡಿ ಎಂದಿದ್ದಾರೆ. ಈ ಎಲ್ಲಾ ಬೆಳವಣಿಗೆಗಳು ಸಂಸದ ಡಿ.ಕೆ.ಸುರೇಶ್ ಪದ್ಮನಾಭನಗರದಿಂದ ಸ್ಪರ್ಧೆ ಮಾಡ್ತಾರಾ ಎಂಬ ಅನುಮಾನ ಮೂಡಿಸುವಂತಿದೆ. ಪದ್ಮನಾಭನಗರ ಸ್ಪರ್ಧೆಗೆ ಸಂಬಂಧಿಸಿದಂತೆ  ಎದ್ದಿರುವ ಎಲ್ಲಾ ಅಂತೆ ಕಂತೆ ಸುದ್ದಿಗಳಿಗೆ ಇಂದೇ  ತೆರೆ ಬೀಳಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಚಿನ್ನದ ಬೇಟೆ – ಒಂದೇ ದಿನ 4 ಚಿನ್ನ; ಪದಕಗಳ ಸಂಖ್ಯೆ 60ಕ್ಕೆ ಏರಿಕೆ
September 30, 2026
10:51 PM
by: ದ ರೂರಲ್ ಮಿರರ್.ಕಾಂ
ಅಡಿಕೆ ವಹಿವಾಟಿನ ಮೇಲೆ ಹೆಚ್ಚಿದ ಕಣ್ಗಾವಲು..!, ಗಮನ ಸೆಳೆದ ಪ್ರತ್ಯೇಕ ಮೂರು ಘಟನೆಗಳು
September 30, 2026
9:10 PM
by: ದ ರೂರಲ್ ಮಿರರ್.ಕಾಂ
ಹಿಂಗಾರು ಬೆಳೆಗಳಿಗೆ ಕೇಂದ್ರದಿಂದ ಬೆಂಬಲ ಬೆಲೆ ಹೆಚ್ಚಳ
September 30, 2026
8:47 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 30-09-2026 | ಅರಬ್ಬಿ ಸಮುದ್ರದ ಗಾಳಿ ದುರ್ಬಲ… ಕರ್ನಾಟಕದ ಮಳೆಯ ಸ್ವರೂಪ ಬದಲಾಗುತ್ತಾ?
September 30, 2026
8:13 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror