ನಾಮಪತ್ರ ಸಲ್ಲಿಕೆಗೆ ಎರಡೇ ದಿನ ಬಾಕಿ ಉಳಿದಿದೆ. ಹೀಗಾಗಿ ಚುನಾವಣಾ ಕಣ ರಂಗೇರುತ್ತಿದ್ದು ಪದ್ಮನಾಭನಗರದ ಕಾಂಗ್ರೆಸ್ ಅಭ್ಯರ್ಥಿ ಯಾರು ಎನ್ನುವುದು ದೊಡ್ಡ ಪ್ರಶ್ನೆಯಾಗಿದೆ.ಕಾಂಗ್ರೆಸ್ ಈಗಾಗಲೇ ರಘುನಾಥ್ ನಾಯ್ಡು, ಅವರಿಗೆ ಫಾರಂ ಬಿ ನೀಡಿದೆ. ಆದರೆ ಈಗ ಬಿ ಫಾರಂಗೆ ತಡೆ ಹಿಡಿಯಲಾಗಿದ್ದು ಹಾಲಿ ಶಾಸಕ ಅಶೋಕ್‌ಗೆ ಠಕ್ಕರ್ ನೀಡಲು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಶಾಸಕ ಡಿಕೆ ಸುರೇಶ್ ಸ್ಪರ್ಧೆ ಮಾಡುತ್ತಾರಾ ಎನ್ನುವುದು ಸದ್ಯದ ಕುತೂಹಲ.
ಕನಕಪುರದಲ್ಲಿ ಬಿಜೆಪಿ ಅಚ್ಚರಿ ಎಂಬಂತೆ ಡಿಕೆ ಶಿವಕುಮಾರ್ ವಿರುದ್ಧ ಅಶೋಕ್ ಅವರನ್ನು ನಿಲ್ಲಿಸಿದೆ. ರಾಮನಗರದಲ್ಲಿ ಸಂಘಟನೆ ದೃಷ್ಟಿಯಿಂದ ಬಲಿಷ್ಠ ಅಭ್ಯರ್ಥಿ ಹಾಕಿದರೆ ಮುಂದೆ ಬಿಜೆಪಿಗೆ ಲಾಭ ಎಂಬ ದೃಷ್ಟಿಯಿಂದ ಅಶೋಕ್ ಅವರನ್ನು ಕಣಕ್ಕೆ ಇಳಿಸಿದೆ.
ಅಶೋಕ್ ಅವರನ್ನು ಕನಕಪುರದಲ್ಲಿ ಕಣಕ್ಕೆ ಇಳಿಸಿದ ಬೆನ್ನಲ್ಲೇ ಪದ್ಮನಾಭನಗರದಲ್ಲಿ ಅಶೋಕ್‌ಗೆ ಠಕ್ಕರ್ ನೀಡಲು ಡಿಕೆ ಸುರೇಶ್ ಅವರನ್ನು ಇಳಿಸಲಾಗುತ್ತದೆ ಎಂಬ ವದಂತಿ ಕೇಳಿ ಬಂದಿತ್ತು. ಈ ಮಾತಿಗೆ ಆರಂಭದಲ್ಲಿ ಡಿಕೆ ಸುರೇಶ್, ನಾನು ರಾಜ್ಯ ರಾಜಕೀಯಕ್ಕೆ ಬರುವುದಿಲ್ಲ. ಲೋಕಸಭಾ ಸದಸ್ಯನಾಗಿ ಇರುತ್ತೇನೆ ಎಂದು ಹೇಳಿದ್ದರು. ಆದರೆ ರಘುನಾಥ್ ನಾಯ್ಡು ಅವರಿಗೆ ನೀಡಿದ್ದ ಬಿ ಫಾರಂ ತಡೆ ಹಿಡಿದ ಪರಿಣಾಮ ಕಾಂಗ್ರೆಸ್ ಅಭ್ಯರ್ಥಿ ಯಾರು ಎನ್ನುವ ಪ್ರಶ್ನೆ ಎದುರಾಗಿದೆ.
ಪದ್ಮನಾಭನಗರದ ಅಭ್ಯರ್ಥಿ ರಘುನಾಥ್ ನಾಯ್ಡು ಡಿ.ಕೆ.ಸುರೇಶ್ ಬಂದು ಸ್ಪರ್ಧೆ ಮಾಡಿದರೆ ನಾನು ಸ್ಥಾನ ಬಿಟ್ಟುಕೊಡಲು ರೆಡಿ ಎಂದಿದ್ದಾರೆ. ಈ ಎಲ್ಲಾ ಬೆಳವಣಿಗೆಗಳು ಸಂಸದ ಡಿ.ಕೆ.ಸುರೇಶ್ ಪದ್ಮನಾಭನಗರದಿಂದ ಸ್ಪರ್ಧೆ ಮಾಡ್ತಾರಾ ಎಂಬ ಅನುಮಾನ ಮೂಡಿಸುವಂತಿದೆ. ಪದ್ಮನಾಭನಗರ ಸ್ಪರ್ಧೆಗೆ ಸಂಬಂಧಿಸಿದಂತೆ ಎದ್ದಿರುವ ಎಲ್ಲಾ ಅಂತೆ ಕಂತೆ ಸುದ್ದಿಗಳಿಗೆ ಇಂದೇ ತೆರೆ ಬೀಳಲಿದೆ.
ರಾಮನಗರ ಜಿಲ್ಲೆಯಲ್ಲಿ ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…
ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…
ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…
ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ ಪೂರೈಕೆಯಾಗಿದ್ದು,…
ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…
ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ ಸುಮಾರು…