ಚುನಾವಣೆ ಹೊತ್ತಿನಲ್ಲೇ ಕನಕಪುರ ಬಂಡೆ ಡಿಕೆಶಿಗೆ ಶಾಕ್ | CBI ತನಿಖೆಗೆ ಕೋರ್ಟ್ ಅಸ್ತು |

April 20, 2023
7:31 PM

ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಈ ಹೊತ್ತಿನಲ್ಲೇ ಡಿಕೆಶಿಗೆ ಹೈಕೋರ್ಟ್ ಶಾಕ್ ನೀಡಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸರ್ಕಾರದ ಆದೇಶ ಪ್ರಶ್ನಿಸಿ ಡಿ.ಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸರ್ಕಾರದ ಆದೇಶ ಪ್ರಶ್ನಿಸಿದ್ದ ಡಿಕೆಶಿ, ಸಿಬಿಐ ತನಿಖೆಗೆ ವಹಿಸಿರುವ ಸರ್ಕಾರದ ಆದೇಶ ಸರಿಯಲ್ಲ ಎಂದು ಅರ್ಜಿ ಸಲ್ಲಿಸಿದ್ದರು. ಈ ಕುರಿತು ಪರ ವಿರೋಧ ವಾದ ಮಂಡಿಸಲಾಗಿತ್ತು. ವಾದ ವಿವಾದಗಳನ್ನು ಆಲಿಸಿದ ನಂತರ ನ್ಯಾಯಮೂರ್ತಿ ನಟರಾಜನ್ ಅವರಿದ್ದ ಏಕಸದಸ್ಯ ಪೀಠ ಅರ್ಜಿಯನ್ನು ವಜಾಗೊಳಿಸಿದೆ.

2019 ರಲ್ಲಿ ಬಿ.ಎಸ್ ಯಡಿಯೂರಪ್ಪ ಸರ್ಕಾರ ಡಿಕೆಶಿ ವಿರುದ್ಧದ ತನಿಖೆಗೆ ಅನುಮತಿ ನೀಡಿತ್ತು. ಆಗ ರಾಜ್ಯ ಸರ್ಕಾರದ ಅನುಮತಿ ಮೇರೆಗೆ ಸಿಬಿಐ ಎಫ್‌ಐಆರ್ ದಾಖಲಿಸಿತ್ತು. ಈ ಪ್ರಕರಣದ ಆಧಾರದ ಮೇರೆಗೆ ನಟರಾಜನ್ ಅವರಿದ್ದ ಪೀಠ ಡಿಕೆಶಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.

ಏನಿದು ಅಕ್ರಮ ಆಸ್ತಿ ಗಳಿಕೆ ಕೇಸ್? : ಈ ಹಿಂದೆ ಡಿಕೆಶಿ `ತಾನೊಬ್ಬ ಕೃಷಿಕ, ಕೃಷಿಯಿಂದಲೇ ನನಗೆ ಆದಾಯ ಬರುತ್ತಿದೆ’ ಎಂಬ ಹೇಳಿಕೆ ನೀಡಿದ ಬಳಿಕ ಆಸ್ತಿಯನ್ನು ಸಿಬಿಐ ಮೌಲ್ಯಮಾಪನ ಮಾಡಿತ್ತು. ಡಿಕೆಶಿಯ ಆದಾಯದ ಮೂಲ ಬೆನ್ನತ್ತಿದ್ದ ಸಿಬಿಐ, ಯಾವ ಬೆಳೆ ಬೆಳೆಯುತ್ತಾರೆ? ತೋಟದಿಂದ ಎಷ್ಟು ವರ್ಷದಿಂದ ಫಲ ಬರುತ್ತಿದೆ? ಎಷ್ಟು ಲಾಭ ಬರುತ್ತಿದೆ? ಎಷ್ಟು ವರ್ಷದಿಂದ ವಾಣಿಜ್ಯ ಬೆಳೆ ಬೆಳೆಯುತ್ತಿದ್ದಾರೆ? ಜಮೀನು ಖರೀದಿಸಿದ್ದು ಯಾವಾಗ ಎಂಬ ಬಗ್ಗೆ ದಾಖಲೆಗಳನ್ನು ವಶಕ್ಕೆ ಪಡೆದಿತ್ತು. ಅಷ್ಟೇ ಅಲ್ಲದೇ ಕೃಷಿ ಭೂಮಿಗೆ ಸಂಬಂಧಿಸಿದ ಕಳೆದ 10 ವರ್ಷದ ಪಹಣಿಯನ್ನು ಪಡೆಯಲಾಗಿತ್ತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror