ಮಂಗಳೂರು ಜಿಲ್ಲೆಯ ಪ್ರತಿಯೊಂದು ಗ್ರಾಮಕ್ಕೂ ಗುಣಮಟ್ಟದ ಶುದ್ಧ ಕುಡಿಯುವ ನೀರನ್ನು ಪೂರೈಸಬೇಕು. ಗ್ರಾಮೀಣ ಪ್ರದೇಶಗಳಿಗೆ ಸರಬರಾಜಾಗುವ ಎಲ್ಲಾ ಕುಡಿಯುವ ನೀರಿನ ಮೂಲಗಳ ಗುಣಮಟ್ಟವನ್ನು ನಿಯಮಿತವಾಗಿ ಪರೀಕ್ಷಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ್ ಕಾರ್ಬಾರಿ ಸೂಚಿಸಿದ್ದಾರೆ.
ಅವರು ಗುರುವಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳಿಂದ ಕಲುಷಿತ ನೀರು ಪೂರೈಕೆಯಾಗುತ್ತಿರುವ ಬಗ್ಗೆ ದೂರುಗಳು ಬಂದಲ್ಲಿ, ತಕ್ಷಣ ಸಮಸ್ಯೆ ಬಗೆಹರಿಸಲು ಸಂಬಂಧಿಸಿದ ಅಧಿಕಾರಿಗಳು ಗ್ರಾಮ ಪಂಚಾಯತ್ ಪಿಡಿಒಗಳಿಗೆ ಅಗತ್ಯ ನಿರ್ದೇಶನ ನೀಡಬೇಕು ಎಂದು ಅವರು ಹೇಳಿದರು. ಅಶುದ್ಧ ನೀರಿನ ಪೂರೈಕೆ ಬಗ್ಗೆ ದೂರುಗಳು ಬಂದರೂ ನಿರ್ಲಕ್ಷ್ಯ ವಹಿಸಿದರೆ, ಸಂಬಂಧಿಸಿದ ಪಿಡಿಒಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಸಿದರು.
ಜಲಜೀವನ್ ಮಿಷನ್ ಅಡಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿ, ಅವುಗಳನ್ನು ಶೀಘ್ರ ಪೂರ್ಣಗೊಳಿಸುವಂತೆ ಸೂಚಿಸಿದರು. ಜೊತೆಗೆ ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಗಳನ್ನು ಪ್ರತೀ ತಿಂಗಳು ಕಡ್ಡಾಯವಾಗಿ ನಡೆಸಬೇಕು ಎಂದರು.
ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲಿನ ನೀರಿನ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸಬೇಕು. ಪ್ರತಿಯೊಂದು ಕುಡಿಯುವ ನೀರಿನ ಮೂಲದಿಂದ ಕಡ್ಡಾಯವಾಗಿ ನೀರಿನ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆ ನಡೆಸಬೇಕು ಎಂದು ಸಿಇಒ ಸ್ಪಷ್ಟ ನಿರ್ದೇಶನ ನೀಡಿದರು. ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…
ಅಡಿಕೆ ಬೆಳೆಗಾರ ಇಂದು ಕೇವಲ ಬೆಳೆಗಾರನಲ್ಲ. ಅವನು ಹವಾಮಾನ ಬದಲಾವಣೆ, ರೋಗದ ಸಮಸ್ಯೆ,…
ಕೇಂದ್ರ ಕೃಷಿ ಸಚಿವಾಲಯವು ಜನವರಿ 23, 2026ರವರೆಗಿನ ರಬಿ ಬೆಳೆ(ಚಳಿಗಾಲದ ಬಿತ್ತನೆ) ಬಿತ್ತನೆಯ…
ದೇಶದಲ್ಲಿನ ಕೃಷಿ ಬೆಳೆಗಳಿಗೆ ಅಗತ್ಯವಾದ ಪೋಷಕಾಂಶ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ರಸಗೊಬ್ಬರ ವಲಯವು ದೇಶೀಯ…
ಹಿಮಾಲಯವನ್ನು ಶುದ್ಧ ಮತ್ತು ಸುರಕ್ಷಿತ ವಾತಾವರಣದ ಪ್ರತೀಕವೆಂದುಕೊಂಡಿದ್ದರೂ, ಜಾಗತಿಕ ಹವಾಮಾನ ಬದಲಾವಣೆ ಹಾಗೂ…
ರಾಜಸ್ಥಾನದಲ್ಲಿ ಕೃಷಿ ಆಧಾರಿತ ಕೈಗಾರಿಕೆಗಳನ್ನು ಉತ್ತೇಜಿಸುವ ಮೂಲಕ ರೈತರ ಭವಿಷ್ಯವನ್ನು ಸಂಪೂರ್ಣವಾಗಿ ಬದಲಾಯಿಸಬಹುದು…