Advertisement
ಸುದ್ದಿಗಳು

ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಕಡ್ಡಾಯ : ಜಿ.ಪಂ ಸಿಇಒ ಸೂಚನೆ

Share

ಮಂಗಳೂರು ಜಿಲ್ಲೆಯ ಪ್ರತಿಯೊಂದು ಗ್ರಾಮಕ್ಕೂ ಗುಣಮಟ್ಟದ ಶುದ್ಧ ಕುಡಿಯುವ ನೀರನ್ನು ಪೂರೈಸಬೇಕು. ಗ್ರಾಮೀಣ ಪ್ರದೇಶಗಳಿಗೆ ಸರಬರಾಜಾಗುವ ಎಲ್ಲಾ ಕುಡಿಯುವ ನೀರಿನ ಮೂಲಗಳ ಗುಣಮಟ್ಟವನ್ನು ನಿಯಮಿತವಾಗಿ ಪರೀಕ್ಷಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ್ ಕಾರ್ಬಾರಿ ಸೂಚಿಸಿದ್ದಾರೆ.

ಅವರು ಗುರುವಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳಿಂದ ಕಲುಷಿತ ನೀರು ಪೂರೈಕೆಯಾಗುತ್ತಿರುವ ಬಗ್ಗೆ ದೂರುಗಳು ಬಂದಲ್ಲಿ, ತಕ್ಷಣ ಸಮಸ್ಯೆ ಬಗೆಹರಿಸಲು ಸಂಬಂಧಿಸಿದ ಅಧಿಕಾರಿಗಳು ಗ್ರಾಮ ಪಂಚಾಯತ್ ಪಿಡಿಒಗಳಿಗೆ ಅಗತ್ಯ ನಿರ್ದೇಶನ ನೀಡಬೇಕು ಎಂದು ಅವರು ಹೇಳಿದರು. ಅಶುದ್ಧ ನೀರಿನ ಪೂರೈಕೆ ಬಗ್ಗೆ ದೂರುಗಳು ಬಂದರೂ ನಿರ್ಲಕ್ಷ್ಯ ವಹಿಸಿದರೆ, ಸಂಬಂಧಿಸಿದ ಪಿಡಿಒಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಸಿದರು.

ಜಲಜೀವನ್ ಮಿಷನ್ ಅಡಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿ, ಅವುಗಳನ್ನು ಶೀಘ್ರ ಪೂರ್ಣಗೊಳಿಸುವಂತೆ ಸೂಚಿಸಿದರು. ಜೊತೆಗೆ ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಗಳನ್ನು ಪ್ರತೀ ತಿಂಗಳು ಕಡ್ಡಾಯವಾಗಿ ನಡೆಸಬೇಕು ಎಂದರು.

ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲಿನ ನೀರಿನ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸಬೇಕು. ಪ್ರತಿಯೊಂದು ಕುಡಿಯುವ ನೀರಿನ ಮೂಲದಿಂದ ಕಡ್ಡಾಯವಾಗಿ ನೀರಿನ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆ ನಡೆಸಬೇಕು ಎಂದು ಸಿಇಒ ಸ್ಪಷ್ಟ ನಿರ್ದೇಶನ ನೀಡಿದರು.  ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?

ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…

2 hours ago

ಹಲಸಿನಂತೆಯೇ ಕಾಣುವ ಈ ಹಣ್ಣು ನಿಮಗೆ ಗೊತ್ತೇ?

ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್‌…

3 hours ago

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮಹಿಳೆಯರ ಓಟಕ್ಕೆ ಚಿನ್ನದ ಹೊಳಪು – 4×400 ಮೀ. ರಿಲೇಯಲ್ಲಿ ಭರ್ಜರಿ ಗೆಲುವು

ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ 3:29.69 ಸಮಯದೊಂದಿಗೆ ಚಿನ್ನ…

3 hours ago

ಕಾಳುಮೆಣಸು ಮಾರುಕಟ್ಟೆಯಲ್ಲಿ ಏನಾಗುತ್ತಿದೆ?

ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…

13 hours ago

ಹವಾಮಾನ ವರದಿ | 29-09-2026 | ಅ.6 ರವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ

ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…

13 hours ago

ಕೃಷಿ ವೆಚ್ಚ ಕಡಿಮೆ ಮಾಡಲು ಇಲ್ಲಿ ರೈತರ ಹೊಸ ಹೆಜ್ಜೆ…

ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಚಿತ್ರಕೂಟದ…

18 hours ago