ಇಂದಿನಿಂದ ಮೂರು ದಿನಗಳ ಕಾಲ ನಡೆಯುವ ತುರ್ತು ವಿಧಾನಸಭಾ ಅಧಿವೇಶನದ ನಂತರ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ತುರ್ತು ಅಧಿವೇಶನದಲ್ಲಿ ಎಲ್ಲ ಹೊಸ ಶಾಸಕರು ಪ್ರತಿಜ್ಞಾ ವಿಧಿ ಸ್ವೀಕರಿಸಲಿದ್ದಾರೆ. ಇದಾದ ಬಳಿಕ ಮುಖ್ಯಮಂತ್ರಿಗಳು ದೆಹಲಿಗೆ ಹೋಗಿ ವರಿಷ್ಠರೊಂದಿಗೆ ಚರ್ಚಿಸಿ ಸಂಪುಟ ವಿಸ್ತರಣೆಯ ಬಗ್ಗೆ ಹಾಗೂ ಸಚಿವರಿಗೆ ಖಾತೆಗಳ ಹಂಚಿಕೆಯ ಬಗ್ಗೆಯೂ ತೀರ್ಮಾನ ಕೈಗೊಳ್ಳುತ್ತಾರೆ ಕಾನೂನು ಪ್ರಕಾರ ಮೇ 24ರೊಳಗೆ ಹಳೆಯ ಸರ್ಕಾರ ವಿಸರ್ಜನೆ ಆಗಬೇಕು. ಹಾಗಾಗಿ ಮೇ 22ರಿಂದ 24ರವರೆಗೆ ನಡೆಯುವ ತುರ್ತು ವಿಧಾನಸಭಾ ಅಧಿವೇಶನದಲ್ಲಿ ಈ ಕಾರ್ಯ ಆಗಲಿದೆ ಎಂದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel