ಅರಣ್ಯ ಪ್ರದೇಶದಲ್ಲಿ ದಶಕಗಳ ಹಿಂದಿನಿಂದಲೂ ಸಮರ್ಪಕವಾದ ಭೂದಾಖಲೆಗಳೊಂದಿಗೆ ವಾಸಿಸುತ್ತಿರುವ ಜನರನ್ನು ಒಕ್ಕಲೆಬ್ಬಿಸುವ ಪ್ರಯತ್ನ ಮಾಡದಂತೆ ಅರಣ್ಯಾಧಿಕಾರಿಗಳಿಗೆ ಸಚಿವ ಎನ್. ಚೆಲುವರಾಯಸ್ವಾಮಿ ಸೂಚಿಸಿದ್ದಾರೆ.
ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಗಣಿ ಮತ್ತು ಅರಣ್ಯ ಇಲಾಖೆಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈಗಾಗಲೇ ಸರ್ಕಾರದಿಂದಲೇ ಸ್ಥಳ ಗುರುತಿಸಿ, ಕೆಲವರಿಗೆ ಹಕ್ಕು ಪತ್ರಗಳನ್ನು ನೀಡಲಾಗಿದೆ. ಅಂತಹ ಸ್ಥಳಗಳನ್ನು ಕೈಬಿಟ್ಟು, ಉಳಿದ ಅರಣ್ಯ ಪ್ರದೇಶಗಳನ್ನು ಗುರುತಿಸಿ, ಸರ್ವೆ ನಡೆಸುವಂತೆ ಸಚಿವರು ನಿರ್ದೇಶನ ನೀಡಿದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel