ಊಹಾ ಪತ್ರಿಕೋದ್ಯಮವೇ ಇಂದು ಬೇಕೇ..? – ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

October 2, 2024
11:39 PM

ಗಂಡ ಹೆಂಡತಿ ಜಗಳವನ್ನೇ ಇಡೀ ದಿನ ತೋರಿಸಿದರೆ ಅದು ನೈತಿಕ ಪತ್ರಿಕೋದ್ಯಮನಾ  ಮುಖ್ಯಮಂತ್ರಿ  ಸಿದ್ದರಾಮಯ್ಯ  ವ್ಯಂಗ್ಯವಾಡಿದರು. 

ವಾರ್ತಾ ಮತ್ತು ಸಾರ್ವಜನಿಕ‌ ಸಂಪರ್ಕ‌ ಇಲಾಖೆ ವಾರ್ತಾ ಸೌಧದಲ್ಲಿ ಆಯೋಜಿಸಿದ್ದ ಗಾಂಧಿ ಜಯಂತಿ, ಟೀಯೆಸ್ಸಾರ್, ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ ವಿಜೇತರಿಗೆ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದರು.  ಈಗ ಊಹಾ ಪತ್ರಿಕೋದ್ಯಮದ ಪಿಡುಗು ಹೆಚ್ಚಾಗಿದೆ. ಈ ಊಹಾ ಪತ್ರಿಕೋದ್ಯಮ ಸಮಾಜಕ್ಕೆ ಬೇಕಾ ಎಂದು ಪ್ರಶ್ನಿಸಿದರು.  “ಅವರು ಹಿಂಗೆ ಹೇಳಿದ್ರು, ನೀವೇನು ಹೇಳ್ತೀರಾ?” ಅಂತ ಮುಖಕ್ಕೆ ಮೈ ಹಿಡಿಯೋದೇ ಇವತ್ತಿನ ಪತ್ರಿಕೋದ್ಯಮ ಆಗಿಬಿಟ್ಟಿದೆ. ಇದು ಯಾವ ರೀತಿ ಪತ್ರಿಕೋದ್ಯಮ‌ ನನಗಂತೂ ಅರ್ಥ ಆಗ್ತಾ ಇಲ್ಲ ಎಂದರು.

ಹಿಂದೆಲ್ಲಾ ಪತ್ರಕರ್ತರಿಗೆ ತುಂಬಾ ಘನತೆ ಗೌರವ ಇತ್ತು. ಈಗ ಇದೆಯಾ ಗೊತ್ತಿಲ್ಲ. ಈ ಬಗ್ಗೆ ವಿಶ್ಲೇಷಣೆ ಮಾಡಿದರೆ ಅದನ್ನೇ ದೊಡ್ಡ ವಿವಾದ ಮಾಡಿಬಿಡ್ತಾರೆ. ಹೀಗಾಗಿ ಈ ಊಹಾ ಪತ್ರಿಕೋದ್ಯಮದ ಬಗ್ಗೆ ಹೆಚ್ಚೇನೂ ಹೇಳಲ್ಲ ಎಂದರು.

ಗೋಡ್ಸೆಗಳನ್ನು ನಾವು ಸಹಿಸಬಾರದು. ಗಾಂಧಿಯ ಬಗ್ಗೆ ಸುಳ್ಳು ಪ್ರಚಾರ ಮಾಡಿ ಗೋಡ್ಸೆಯಂಥಾ ಖಳನಾಯಕರನ್ನು ಪೂಜಿಸುವ ದುಷ್ಟ ಶಕ್ತಿಗಳನ್ನು ನಾವು ಸೋಲಿಸಬೇಕಿದೆ ಎಂದರು.   ನಾನು ಮೊದಲ ಬಾರಿ ಮುಖ್ಯಮಂತ್ರಿ ಆದ ಬಳಿಕ 2014 ರಲ್ಲಿ ಮಹಾತ್ಮಗಾಂಧಿ ಸೇವಾ ಪ್ರಶಸ್ತಿಯನ್ನು  ಆರಂಭಿಸಿದೆ. ಗಾಂಧಿ ತತ್ವಗಳನ್ನು ಅನುಸರಿಸುತ್ತಾ, ವಿದ್ಯಾರ್ಥಿಗಳಿಗೆ ಮಾನವೀಯ ಮೌಲ್ಯ ಕಲಿಸುತ್ತಿರುವ ಅತ್ಯಂತ ಅರ್ಹರು ಈ ಬಾರಿಯ ಗಾಂಧಿ ಸೇವಾ ಪ್ರಶಸ್ತಿ ಪಡೆದಿದ್ದಾರೆ ಎಂದು ಶ್ಲಾಘಿಸಿದರು.  ಶಿಕ್ಷಣ ಪಡೆದವರೆಲ್ಲಾ ಮಾನವೀಯತೆ ಇರುವವರು ಎಂದು ಹೇಳಲಾಗುವುದಿಲ್ಲ. ಶಿಕ್ಷಣ ಮನುಷ್ಯರನ್ನು ಮಾನವೀಯಗೊಳಿಸಬೇಕು. ಇಲ್ಲದಿದ್ದರೆ ಅಂತಹ ಶಿಕ್ಷಣಕ್ಕೆ ಮೌಲ್ಯ ಇರುವುದಿಲ್ಲ ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror