ಗಂಡ ಹೆಂಡತಿ ಜಗಳವನ್ನೇ ಇಡೀ ದಿನ ತೋರಿಸಿದರೆ ಅದು ನೈತಿಕ ಪತ್ರಿಕೋದ್ಯಮನಾ ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವಾರ್ತಾ ಸೌಧದಲ್ಲಿ ಆಯೋಜಿಸಿದ್ದ ಗಾಂಧಿ ಜಯಂತಿ, ಟೀಯೆಸ್ಸಾರ್, ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ ವಿಜೇತರಿಗೆ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದರು. ಈಗ ಊಹಾ ಪತ್ರಿಕೋದ್ಯಮದ ಪಿಡುಗು ಹೆಚ್ಚಾಗಿದೆ. ಈ ಊಹಾ ಪತ್ರಿಕೋದ್ಯಮ ಸಮಾಜಕ್ಕೆ ಬೇಕಾ ಎಂದು ಪ್ರಶ್ನಿಸಿದರು. “ಅವರು ಹಿಂಗೆ ಹೇಳಿದ್ರು, ನೀವೇನು ಹೇಳ್ತೀರಾ?” ಅಂತ ಮುಖಕ್ಕೆ ಮೈ ಹಿಡಿಯೋದೇ ಇವತ್ತಿನ ಪತ್ರಿಕೋದ್ಯಮ ಆಗಿಬಿಟ್ಟಿದೆ. ಇದು ಯಾವ ರೀತಿ ಪತ್ರಿಕೋದ್ಯಮ ನನಗಂತೂ ಅರ್ಥ ಆಗ್ತಾ ಇಲ್ಲ ಎಂದರು.
ಹಿಂದೆಲ್ಲಾ ಪತ್ರಕರ್ತರಿಗೆ ತುಂಬಾ ಘನತೆ ಗೌರವ ಇತ್ತು. ಈಗ ಇದೆಯಾ ಗೊತ್ತಿಲ್ಲ. ಈ ಬಗ್ಗೆ ವಿಶ್ಲೇಷಣೆ ಮಾಡಿದರೆ ಅದನ್ನೇ ದೊಡ್ಡ ವಿವಾದ ಮಾಡಿಬಿಡ್ತಾರೆ. ಹೀಗಾಗಿ ಈ ಊಹಾ ಪತ್ರಿಕೋದ್ಯಮದ ಬಗ್ಗೆ ಹೆಚ್ಚೇನೂ ಹೇಳಲ್ಲ ಎಂದರು.
ಗೋಡ್ಸೆಗಳನ್ನು ನಾವು ಸಹಿಸಬಾರದು. ಗಾಂಧಿಯ ಬಗ್ಗೆ ಸುಳ್ಳು ಪ್ರಚಾರ ಮಾಡಿ ಗೋಡ್ಸೆಯಂಥಾ ಖಳನಾಯಕರನ್ನು ಪೂಜಿಸುವ ದುಷ್ಟ ಶಕ್ತಿಗಳನ್ನು ನಾವು ಸೋಲಿಸಬೇಕಿದೆ ಎಂದರು. ನಾನು ಮೊದಲ ಬಾರಿ ಮುಖ್ಯಮಂತ್ರಿ ಆದ ಬಳಿಕ 2014 ರಲ್ಲಿ ಮಹಾತ್ಮಗಾಂಧಿ ಸೇವಾ ಪ್ರಶಸ್ತಿಯನ್ನು ಆರಂಭಿಸಿದೆ. ಗಾಂಧಿ ತತ್ವಗಳನ್ನು ಅನುಸರಿಸುತ್ತಾ, ವಿದ್ಯಾರ್ಥಿಗಳಿಗೆ ಮಾನವೀಯ ಮೌಲ್ಯ ಕಲಿಸುತ್ತಿರುವ ಅತ್ಯಂತ ಅರ್ಹರು ಈ ಬಾರಿಯ ಗಾಂಧಿ ಸೇವಾ ಪ್ರಶಸ್ತಿ ಪಡೆದಿದ್ದಾರೆ ಎಂದು ಶ್ಲಾಘಿಸಿದರು. ಶಿಕ್ಷಣ ಪಡೆದವರೆಲ್ಲಾ ಮಾನವೀಯತೆ ಇರುವವರು ಎಂದು ಹೇಳಲಾಗುವುದಿಲ್ಲ. ಶಿಕ್ಷಣ ಮನುಷ್ಯರನ್ನು ಮಾನವೀಯಗೊಳಿಸಬೇಕು. ಇಲ್ಲದಿದ್ದರೆ ಅಂತಹ ಶಿಕ್ಷಣಕ್ಕೆ ಮೌಲ್ಯ ಇರುವುದಿಲ್ಲ ಎಂದರು.
ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಕೊಡಗಿನ…
ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿದ ಮಂಗಳೂರಿನ ರೆಮೋನಾ ಪಿರೇರಾ,…
ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆಯಾಗಿದ್ದು, ಕೃಷಿಕರ ಹಿತದೃಷ್ಟಿಯಿಂದ ಕೇಂದ್ರ…
ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ-…
ರಾಜ್ಯದೆಲ್ಲೆಡೆ ಇಂದು ನಾಗರಪಂಚಮಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ…
ಕೊಪ್ಪಳ ಜಿಲ್ಲೆಯಲ್ಲಿ ಜುಲೈ ಅಂತ್ಯದವರಿಗೆ 2 ಲಕ್ಷ ಹೆಕ್ಟೇರ್ ಪ್ರದೇಶದ ಬಿತ್ತನೆಯ ಗುರಿ…