ಡಾಕ್ಟರೇಟ್ ಪದವಿ ಪಡೆದ ಪುತ್ತೂರಿನ ವಿವೇಕಾನಂದ ಪ್ರಾಧ್ಯಾಪಕಿ ವಿದ್ಯಾ ಎಸ್

October 3, 2024
12:58 PM
ವಿದ್ಯಾ ಎಸ್‌ ಅವರಿಗೆ "ಕರ್ನಾಟಕದ ಹವ್ಯಕ ಸಮುದಾಯ: ಒಂದು ಸಮಾಜಶಾಸ್ತ್ರೀಯ ಅಧ್ಯಯನ" ಎಂಬ ವಿಷಯದ ಕುರಿತು ಮಂಡಿಸಿದ ಸಂಶೋಧನಾ ಮಹಾಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿಯನ್ನು‌ ನೀಡಿದೆ.

ವಿದ್ಯಾ ಎಸ್ ಅವರು ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದ ಕಲಾ ವಿಭಾಗದ ಡೀನ್ ಮತ್ತು ಸಮಾಜಶಾಸ್ತ್ರ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನಾ ವಿಭಾಗದ ಮುಖ್ಯಸ್ಥರೂ ಹಿರಿಯ ಪ್ರಾಧ್ಯಾಪಕರೂ ಆದ ಪ್ರೊಫೆಸರ್ ಡಾ. ಗುರುಲಿಂಗಯ್ಯ ಅವರ ಮಾರ್ಗದರ್ಶನದಲ್ಲಿ “ಕರ್ನಾಟಕದ ಹವ್ಯಕ ಸಮುದಾಯ: ಒಂದು ಸಮಾಜಶಾಸ್ತ್ರೀಯ ಅಧ್ಯಯನ” ಎಂಬ ವಿಷಯದ ಕುರಿತು ಮಂಡಿಸಿದ ಸಂಶೋಧನಾ ಮಹಾಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿಯನ್ನು ನೀಡಿದೆ.

ಸುಮಾರು ಹದಿನಾಲ್ಕು ವರ್ಷಗಳಿಂದ ಪುತ್ತೂರಿನ ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ ) ದಲ್ಲಿ ಸಮಾಜಶಾಸ್ತ್ರ ಸಹಾಯಕ ಪ್ರಾಧ್ಯಾಪಕಿಯಾಗಿ ವಿಭಾಗದ ಮುಖ್ಯಸ್ಥೆಯಾಗಿ ಸೇವೆ ಸಲ್ಲಿಸುತ್ತಿರುವ ಇವರು ಬಾಹುಬಲಿ ಪ್ರಾಕೃತ ವಿದ್ಯಾಪೀಠ (ರಿ) ದಿಂದ ಸಂಚಾಲಿತ ರಾಷ್ಟ್ರೀಯ ಪ್ರಾಕೃತ ಅಧ್ಯಯನ ಮತ್ತು ಸಂಶೋಧನಾ ಸಂಸ್ಥೆ ನಡೆಸಿದ 2017-18 ನೇ ಸಾಲಿನ ಪ್ರಾಕೃತ ಡಿಪ್ಲೊಮ ಪರೀಕ್ಷೆಯಲ್ಲಿ ನಾಲ್ಕನೆಯ ರಯಾಂಕ್ ಗಳಿಸಿರುತ್ತಾರೆ. ಈಕೆ ಮಂಗಳೂರು ನಿವಾಸಿಯಾಗಿದ್ದು ಸುಳ್ಯ ತಾಲ್ಲೂಕಿನ ಬಾಳುಗೋಡು ಗ್ರಾಮದ ಮಾನಡ್ಕದ ಶೇಡಿಗುಮ್ಮೆ ಪುರುಷೋತ್ತಮ ಭಟ್ ಹಾಗೂ ಇಂದಿರಾ ದಂಪತಿಗಳ ಪುತ್ರಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 24-09-2026 | ಸೆ.29ರಿಂದ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ
September 24, 2026
1:40 PM
by: ಸಾಯಿಶೇಖರ್ ಕರಿಕಳ
ತ್ರಿಪುರಾದಲ್ಲಿ ರಬ್ಬರ್‌ ಏಕಬೆಳೆ ಕೃಷಿಗೆ ಬ್ರೇಕ್‌? ಹೆಬ್ಬೇವು, ಅಗ್ರೋಫಾರೆಸ್ಟ್ರಿಯತ್ತ ಗಮನ
September 24, 2026
7:23 AM
by: ದ ರೂರಲ್ ಮಿರರ್.ಕಾಂ
ವಿಶ್ವದ ಶೇ.79ರಷ್ಟು ನದಿಗಳಲ್ಲಿ ಆಮ್ಲಜನಕ ಕುಸಿತ- ಉಷ್ಣವಲಯದ ನದಿಗಳಿಗೆ ಹೆಚ್ಚು ಅಪಾಯ
September 23, 2026
9:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-09-2026 | ಸೆ.30 ರಿಂದ ಮತ್ತೆ ಬದಲಾಗಲಿದೆ ಹವಾಮಾನ..!
September 23, 2026
1:58 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror