ಅಧಿಕೃತವಾಗಿ ಕಾಂಗ್ರೆಸ್ ಸೇರಿದ ದೊಡ್ಮನೆ ಸೊಸೆ ಗೀತಾ ಶಿವರಾಜ್ ಕುಮಾರ್

April 28, 2023
1:22 PM

ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್  ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಗೆ  ಅಧಿಕೃತವಾಗಿ ಸೇರ್ಪಡೆಗೊಂಡರು. ಕಾಂಗ್ರೆಸ್ ತತ್ವ ಮತ್ತು ಸಿದ್ಧಾಂತವನ್ನು ಮೆಚ್ಚಿ ಪಕ್ಷಕ್ಕೆ ಸೇರ್ಪಡೆಗೊಂಡಿರುವುದಾಗಿ ಹೇಳಿದ್ದಾರೆ. ಈ ಸಂದರ್ಭದಲ್ಲಿ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ಧ್ವಜ ನೀಡುವ ಮೂಲಕ ಅವರನ್ನು ಸ್ವಾಗತಿಸಿದರು. ಮಧು ಬಂಗಾರಪ್ಪ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಹಾಜರಿದ್ದರು.

 ‘ಇಂದು ಗೀತಾ ಕಾಂಗ್ರೆಸ್ ಪಕ್ಷ ಸೇರಿ, ನಾಳೆಯಿಂದ ಸೊರಬದಲ್ಲಿ ಪ್ರಚಾರಕ್ಕೆ ತೆರಳುತ್ತಾರೆ. ಅವರ ಜೊತೆ ನಾನೂ ತೆರಳುತಿದ್ದೇನೆ. ಸೊರಬದಲ್ಲಿ ಮಧು ಹಾಗೂ ಅವರ ಮಾವ ಭೀಮ ನಾಯಕ್ ಸಿರಸಿಯಲ್ಲಿ ಚುನಾವಣೆಗೆ ಸ್ಪರ್ಧಿಸುತಿದ್ದಾರೆ. ಇಬ್ಬರೂ ಗೆಲ್ಲಲಿ ಎಂದು ಹಾರೈಸುತ್ತೇನೆ’ ಎಂದು ಚಿತ್ರನಟ ಶಿವರಾಜ್ ಕುಮಾರ್ ಹೇಳಿದರು.

ಮುಂದುವರೆದು ಮಾತನಾಡಿದ ಶಿವರಾಜ್ ಕುಮಾರ್, ‘ಬಂಗಾರಪ್ಪ ಅವರ ಮಕ್ಕಳಾದ ಮಧು ಹಾಗೂ ಗೀತಾರಿಗೆ ರಾಜಕೀಯ ಹೇಳಿಕೊಡೊದು ಬೇಡ. ತಾಯಿ ಹೋದ ಬಳಿಕ ಎರಡು ವರ್ಷದಿಂದ ಶಕ್ತಿ ಧಾಮದ ಪ್ರೆಸಿಡೆಂಟ್ ಆಗಿದ್ದಾರೆ ಗೀತೆ. ಮಕ್ಕಳಿಗೆ ಸ್ಕಿಲ್ ಡೆವಲಪ್ಮೆಂಟ್ ಮಾಡುತಿದ್ದಾರೆ. ಸುತ್ತಮುತ್ತ ಫ್ರೀ ಬೇಕಿಂಗ್ ಕ್ಯಾಂಪ್ ಮಾಡಿ ಅವೇರ್ ನೆಸ್ ಕೂಡ ಮಾಡಿದ್ದಾರೆ. ಸಮಾಜಮುಖಿ ಕೆಲಸಗಳ ಬಗ್ಗೆ ಅವರಿಗೆ ಆಸಕ್ತಿ ಇದೆ’ ಎಂದು ಹೇಳಿದರು.

ಗೀತಾ ಶಿವರಾಜ್ ಕುಮಾರ್ ರ ಕಿರಿಯ ಸಹೋದರ ಮಧು ಬಂಗಾರಪ್ಪ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಸ್ವತಃ ಸಹೋದರ ಕುಮಾರ್ ಬಂಗಾರಪ್ಪ ಅವರ ವಿರುದ್ಧವೇ ಸೊರಬ ಕ್ಷೇತ್ರದಲ್ಲಿ ಅಖಾಡಕ್ಕೆ ಇಳಿದಿದ್ದಾರೆ. ಕಿರಿಯ ಸಹೋದರನನ್ನು ಬೆಂಬಲಿಸುವುದಕ್ಕಾಗಿ ಗೀತಾ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ
ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ
October 16, 2026
3:13 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ
October 16, 2026
2:48 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror