ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಗೆ ಅಧಿಕೃತವಾಗಿ ಸೇರ್ಪಡೆಗೊಂಡರು. ಕಾಂಗ್ರೆಸ್ ತತ್ವ ಮತ್ತು ಸಿದ್ಧಾಂತವನ್ನು ಮೆಚ್ಚಿ ಪಕ್ಷಕ್ಕೆ ಸೇರ್ಪಡೆಗೊಂಡಿರುವುದಾಗಿ ಹೇಳಿದ್ದಾರೆ. ಈ ಸಂದರ್ಭದಲ್ಲಿ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ಧ್ವಜ ನೀಡುವ ಮೂಲಕ ಅವರನ್ನು ಸ್ವಾಗತಿಸಿದರು. ಮಧು ಬಂಗಾರಪ್ಪ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಹಾಜರಿದ್ದರು.
‘ಇಂದು ಗೀತಾ ಕಾಂಗ್ರೆಸ್ ಪಕ್ಷ ಸೇರಿ, ನಾಳೆಯಿಂದ ಸೊರಬದಲ್ಲಿ ಪ್ರಚಾರಕ್ಕೆ ತೆರಳುತ್ತಾರೆ. ಅವರ ಜೊತೆ ನಾನೂ ತೆರಳುತಿದ್ದೇನೆ. ಸೊರಬದಲ್ಲಿ ಮಧು ಹಾಗೂ ಅವರ ಮಾವ ಭೀಮ ನಾಯಕ್ ಸಿರಸಿಯಲ್ಲಿ ಚುನಾವಣೆಗೆ ಸ್ಪರ್ಧಿಸುತಿದ್ದಾರೆ. ಇಬ್ಬರೂ ಗೆಲ್ಲಲಿ ಎಂದು ಹಾರೈಸುತ್ತೇನೆ’ ಎಂದು ಚಿತ್ರನಟ ಶಿವರಾಜ್ ಕುಮಾರ್ ಹೇಳಿದರು.
ಮುಂದುವರೆದು ಮಾತನಾಡಿದ ಶಿವರಾಜ್ ಕುಮಾರ್, ‘ಬಂಗಾರಪ್ಪ ಅವರ ಮಕ್ಕಳಾದ ಮಧು ಹಾಗೂ ಗೀತಾರಿಗೆ ರಾಜಕೀಯ ಹೇಳಿಕೊಡೊದು ಬೇಡ. ತಾಯಿ ಹೋದ ಬಳಿಕ ಎರಡು ವರ್ಷದಿಂದ ಶಕ್ತಿ ಧಾಮದ ಪ್ರೆಸಿಡೆಂಟ್ ಆಗಿದ್ದಾರೆ ಗೀತೆ. ಮಕ್ಕಳಿಗೆ ಸ್ಕಿಲ್ ಡೆವಲಪ್ಮೆಂಟ್ ಮಾಡುತಿದ್ದಾರೆ. ಸುತ್ತಮುತ್ತ ಫ್ರೀ ಬೇಕಿಂಗ್ ಕ್ಯಾಂಪ್ ಮಾಡಿ ಅವೇರ್ ನೆಸ್ ಕೂಡ ಮಾಡಿದ್ದಾರೆ. ಸಮಾಜಮುಖಿ ಕೆಲಸಗಳ ಬಗ್ಗೆ ಅವರಿಗೆ ಆಸಕ್ತಿ ಇದೆ’ ಎಂದು ಹೇಳಿದರು.
ಗೀತಾ ಶಿವರಾಜ್ ಕುಮಾರ್ ರ ಕಿರಿಯ ಸಹೋದರ ಮಧು ಬಂಗಾರಪ್ಪ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಸ್ವತಃ ಸಹೋದರ ಕುಮಾರ್ ಬಂಗಾರಪ್ಪ ಅವರ ವಿರುದ್ಧವೇ ಸೊರಬ ಕ್ಷೇತ್ರದಲ್ಲಿ ಅಖಾಡಕ್ಕೆ ಇಳಿದಿದ್ದಾರೆ. ಕಿರಿಯ ಸಹೋದರನನ್ನು ಬೆಂಬಲಿಸುವುದಕ್ಕಾಗಿ ಗೀತಾ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…