ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

March 28, 2026
11:07 AM
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ ಬೀದಿ ನಾಯಿಗಳ ಆಶ್ರಯ ಕೇಂದ್ರ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗಿದೆ.

ಬೀದಿ ನಾಯಿಗಳ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಜಿಲ್ಲೆಯ ಪ್ರತಿಯೊಂದು ತಾಲೂಕಿನಲ್ಲಿ ಆಶ್ರಯ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಆರೋಗ್ಯ ಇಲಾಖೆಯ ಜಿಲ್ಲಾ ಕಣ್ಗಾವಲು ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ ಮಂಗಳೂರು ತಾಲೂಕಿನಲ್ಲಿ ಇಂತಹ ಆಶ್ರಯ ಕೇಂದ್ರ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದರು.

ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್‌ಗಳು ಬೀದಿ ನಾಯಿಗಳ ನಿಯಂತ್ರಣಕ್ಕಾಗಿ ಜನನ ನಿಯಂತ್ರಣ (ಸ್ಟೆರಿಲೈಸೇಶನ್) ಸೇರಿದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.

ನಾಯಿ ಕಡಿತ, ಹಾವು ಕಡಿತ ಸೇರಿದಂತೆ ತುರ್ತು ಪ್ರಕರಣಗಳಿಗೆ ಅಗತ್ಯವಾದ ಚುಚ್ಚುಮದ್ದು ಹಾಗೂ ಔಷಧಿಗಳನ್ನು ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಸಾಕಷ್ಟು ಸಂಗ್ರಹಿಸಿಡುವಂತೆ ಸೂಚಿಸಲಾಗಿದೆ. ಇಂತಹ ಸಂದರ್ಭಗಳಲ್ಲಿ ಸಾರ್ವಜನಿಕರು ವಿಳಂಬ ಮಾಡದೇ ತಕ್ಷಣ ಚಿಕಿತ್ಸೆ ಪಡೆಯುವುದು ಜೀವ ಉಳಿಸುವಲ್ಲಿ ಪ್ರಮುಖ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನವೀನ್‍ಚಂದ್ರ ನೀಡಿದ ಮಾಹಿತಿ ಪ್ರಕಾರ, 2023ರಲ್ಲಿ 20,487 ನಾಯಿ ಕಡಿತ ಪ್ರಕರಣಗಳು, 2024ರಲ್ಲಿ 20,071 ಪ್ರಕರಣಗಳು ಹಾಗೂ 2025ರಲ್ಲಿ 27,481 ಪ್ರಕರಣಗಳು ವರದಿಯಾಗಿವೆ. 2025 ರಲ್ಲಿ ದಾಖಲಾಗಿದ ಪ್ರಕರಣಗಳಲ್ಲಿ 21,673 ಪ್ರಕರಣಗಳು ಸಾಕು ನಾಯಿಗಳಿಂದ ಹಾಗೂ 5,808 ಪ್ರಕರಣಗಳು ಬೀದಿ ನಾಯಿಗಳಿಂದ ಸಂಭವಿಸಿವೆ. ಕಳೆದ ಮೂರು ವರ್ಷಗಳಲ್ಲಿ ನಾಯಿ ಕಡಿತದಿಂದ ಇಬ್ಬರು ಸಾವನ್ನಪ್ಪಿದ್ದಾರೆ.

ಇಲಿ ಜ್ವರ ಪ್ರಕರಣಗಳು ಕೂಡ ಜಿಲ್ಲೆಯಲ್ಲಿ ಗಮನಾರ್ಹವಾಗಿವೆ. 2023ರಲ್ಲಿ 203, 2024ರಲ್ಲಿ 283, 2025ರಲ್ಲಿ 265 ಪ್ರಕರಣಗಳು ವರದಿಯಾಗಿದ್ದು, 2023 ಮತ್ತು 2024ರಲ್ಲಿ ತಲಾ ಮೂರು ಸಾವುಗಳು ಸಂಭವಿಸಿವೆ.

ಹಾವು ಕಡಿತ ಪ್ರಕರಣಗಳು ಕೂಡ ಹೆಚ್ಚಳ ಕಂಡಿವೆ. 2023ರಲ್ಲಿ 365, 2024ರಲ್ಲಿ 627, 2025ರಲ್ಲಿ 752 ಪ್ರಕರಣಗಳು ದಾಖಲಾಗಿದ್ದು, ಕಳೆದ ಮೂರು ವರ್ಷಗಳಲ್ಲಿ 10 ಮಂದಿ ಸಾವನ್ನಪ್ಪಿದ್ದಾರೆ.

ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಮಾತನಾಡಿ, ಚಿಕಿತ್ಸೆ ಪಡೆಯಲು ವಿಳಂಬವಾಗುವುದು ಗಂಭೀರ ಸಮಸ್ಯೆಗೆ ಕಾರಣವಾಗುತ್ತದೆ. ಆದರೆ, ಇತ್ತೀಚೆಗೆ ಜನರಲ್ಲಿ ಜಾಗೃತಿ ಹೆಚ್ಚುತ್ತಿರುವುದರಿಂದ ತಕ್ಷಣ ಚಿಕಿತ್ಸೆ ಪಡೆಯುವ ಪ್ರಮಾಣ ಹೆಚ್ಚಾಗಿದೆ ಎಂದು ತಿಳಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Dog bite cases in Mangalore district have risen significantly, with over 27,000 cases reported in 2025 alone. In response, the administration has announced stray dog shelters in every taluk along with stronger control measures and awareness initiatives.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ
September 17, 2026
7:20 AM
by: ದ ರೂರಲ್ ಮಿರರ್.ಕಾಂ
25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು
September 16, 2026
11:09 PM
by: ದ ರೂರಲ್ ಮಿರರ್.ಕಾಂ
“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ
September 16, 2026
9:14 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ
September 16, 2026
3:41 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror