ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೋಣಿಗಲ್ ಬಳಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಅವೈಜ್ಞಾನಿಕ ಕಾಮಗಾರಿ ಕಾರಣದಿಂದ ನಿರ್ಮಾಣವಾಗಿದ್ದ ಕೃತಕ ಕೆರೆಯ ಕಟ್ಟೆ ಗುರುವಾರ ಬೆಳಗ್ಗೆ ಒಡೆದಿದೆ. ಹೀಗಾಗಿ ಅಪಾರ ಪ್ರಮಾಣದ ಕೃಷಿ ಹಾನಿ ಸಂಭವಿಸಿದೆ. ರಸ್ತೆಯ ಅಂಚಿಗೆ ಸದ್ಯ ಯಾವುದೇ ಅಪಾಯವಿಲ್ಲದಿದ್ದರೂ ಇನ್ನಷ್ಟು ಮಣ್ಣು ಕುಸಿದರೆ ಅಪಾಯವಾಗುವ ಸಾಧ್ಯತೆ ಇದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಚತುಷ್ಫಥ ರಸ್ತೆ ಕಾಮಗಾರಿ ನಿರ್ಮಾಣದ ಸಂದರ್ಭ ಮಣ್ಣು ರಾಶಿ ಹಾಕಲಾಗಿತ್ತು. ಆದರೆ ಮೋರಿ ಅಳವಡಿಕೆ ಮಾಡದ ಕಾರಣ ಕೃತಕ ಕೆರೆ ನಿರ್ಮಾಣವಾಗಿತ್ತು. ಇದೀಗ ನೀರಿನ ಒತ್ತಡಕ್ಕೆ ಕೆರೆ ಕಟ್ಟೆ ಒಡೆದಿದೆ. ಕಾಫಿ, ಭತ್ತ, ಅಡಿಕೆ ಕೃಷಿಗೆ ಹಾನಿಯಾಗಿದೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…