ಮಹೇಂದ್ರ ಏಂಡ್ ಮಹೇಂದ್ರ ಕಂಪೆನಿಯ ಹೊಸ ಮಾದರಿಯ 6 ಕಾರು ಧರ್ಮಸ್ಥಳಕ್ಕೆ ಕೊಡುಗೆ

August 4, 2025
7:26 AM

ದೇಶದ ಪ್ರತಿಷ್ಠಿತ ಮಹೇಂದ್ರ ಏಂಡ್ ಮಹೇಂದ್ರ ಕಂಪೆನಿಯು ನೂತನವಾಗಿ ತಯಾರಿಸಿದ ಹೊಸ ಮಾದರಿಯ ಬಿ.ಇ. :6 ಕಾರನ್ನು ಉತ್ಪಾದನಾ ವಿಭಾಗದ ಮುಖ್ಯಸ್ಥರಾದ ವಿನಯ್‌ಖಾನೋಲ್ಕರ್ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಕೊಡುಗೆಯಾಗಿ ಅರ್ಪಿಸಿದರು.

ಹೊಸ ಮಾದರಿಯ ವಾಹನ ತಯಾರಾದ ಕೂಡಲೆ ಅದನ್ನು ಕಾಣಿಕೆಯಾಗಿ ಧರ್ಮಸ್ಥಳಕ್ಕೆ ಅರ್ಪಿಸುವುದು ತಮ್ಮ ಕಂಪೆನಿಯ ಸಂಪ್ರದಾಯವಾಗಿದೆ. ಇದರಿಂದ ಕಂಪೆನಿ ಉನ್ನತ ಪ್ರಗತಿ ಸಾಧಿಸಿದೆ ಎಂದು ಹೊಸ ಕಾರಿನ ಕೀಯನ್ನು ಹೆಗ್ಗಡೆಯವರಿಗೆ ಹಸ್ತಾಂತರಿಸಿದ ಕಂಪೆನಿಯ ಉತ್ಪದನಾ ವಿಭಾಗದ ಮುಖ್ಯಸ್ಥ ವಿನಯ್ ಖಾನೋಲ್ಕರ್ ತಿಳಿಸಿದರು.

ಕಂಪೆನಿಯ ಉದಾರ ಕೊಡುಗೆಯನ್ನು ಸ್ವೀಕರಿಸಿದ ಹೆಗ್ಗಡೆಯವರು ಕಂಪೆನಿಯು ಈ ಹಿಂದೆ ತಯಾರಿಸಿದ ಹೊಸ ಮಾದರಿಯ ವಾಹನಗಳನ್ನು ಪ್ರಥಮವಾಗಿ ಧರ್ಮಸ್ಥಳಕ್ಕೆ ಅರ್ಪಿಸಿದ್ದು, ಇದು ಅವರ ಮೂರನೆ ಕೊಡುಗೆಯಾಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಇವರ ವಾಹನಗಳನ್ನು ಬಳಸಿಕೊಳ್ಳುತ್ತೇವೆ. ದೇಶದ ಪ್ರತಿಷ್ಠಿತ ಮಹೇಂದ್ರ ಕಂಪೆನಿಯ ವಾಹನಗಳು ಯಾವುದೇ ಸಮಸ್ಯೆಗಳಿಲ್ಲದೆ ಉತ್ತಮ ಸೇವೆ ನೀಡುತ್ತಿವೆ. ದೇಶದ ಸೇನೆಯ ವಿಭಾಗಕ್ಕೂ ಅವರು ವಾಹನಗಳನ್ನು ಪೂರೈಸುತ್ತಿದ್ದು, ತನ್ಮೂಲಕ ದೇಶಸೇವೆಗೂ ಉತ್ತಮ ಸೇವೆ ನೀಡುತ್ತಿದ್ದಾರೆ ಎಂದು ಹೇಳಿ ಹೆಗ್ಗಡೆಯವರು ಕಂಪೆನಿಯ ವ್ಯವಹಾರದಲ್ಲಿ ಉತ್ತರೋತ್ತರ ಪ್ರಗತಿಯನ್ನು ಸಾಧಿಸಲಿ ಎಂದು ಹಾರೈಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ
October 9, 2026
7:53 AM
by: ದ ರೂರಲ್ ಮಿರರ್.ಕಾಂ
ಬೇವು ಲೇಪಿತ ಯೂರಿಯಾ ಬಳಕೆಯಿಂದ ಕೃಷಿ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ
October 9, 2026
7:27 AM
by: ದ ರೂರಲ್ ಮಿರರ್.ಕಾಂ
ಮನೆ ಎಂದರೆ ಗೋಡೆಗಳಲ್ಲ , ನೆಮ್ಮದಿಯನ್ನು ಕಟ್ಟುವ ಜೀವನಕಲೆ
October 9, 2026
7:14 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ
October 8, 2026
9:27 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror