ಭಿಕ್ಷೆ ಬೇಡಿ ಉಳಿದ ಒಂದು ಲಕ್ಷ ರೂ. ಬಪ್ಪನಾಡು ದೇವಸ್ಥಾನಕ್ಕೆ ದೇಣಿಗೆ ನೀಡಿದ ವೃದ್ಧೆ

Advertisement
Advertisement

ದೇವಸ್ಥಾನದ ಸುತ್ತಮುತ್ತ ಪ್ರದೇಶಗಳಲ್ಲಿ ಭಿಕ್ಷೆ ಬೇಡಿ ಉಳಿದ ಒಂದು ಲಕ್ಷ ರೂಪಾಯಿ ಹಣವನ್ನು ವೃದ್ಧೆಯೊಬ್ಬರು ಬಪ್ಪನಾಡು ದೇವಸ್ಥಾನಕ್ಕೆ ದೇಣಿಗೆಯಾಗಿ ನೀಡಿ ಮಾದರಿಯಾಗಿದ್ದಾರೆ.

Advertisement

80 ಹರೆಯದ ವೃದ್ಧೆ ಇಲ್ಲಿ ತನಕ ಭಿಕ್ಷೆ ಬೇಡಿ ಬಂದಿರುವ ಹಣದಲ್ಲಿ ವಿವಿಧ ದೇವಸ್ಥಾನಗಳಿಗೆ ಸುಮಾರು 9 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ 80ರ ವೃದ್ಧೆ ಅಶ್ವತ್ಥಮ್ಮ ಈ ಮಾದರಿ ಕೆಲಸ ಮಾಡಿದವರು.

Advertisement
Advertisement

ಸೋಮವಾರ ಮಂಗಳೂರಿನ ಹೊರವಲಯದ ಮೂಲ್ಕಿಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಾಲಯಕ್ಕೆ ಆಗಮಿಸಿ ದೇವಸ್ಥಾನದ ಅನ್ನದಾನಕ್ಕೆ 1 ಲಕ್ಷ ರೂಪಾಯಿ ದೇಣಿಗೆಯಾಗಿ ನೀಡಿದ್ದಾರೆ. ದೇಣಿಗೆ ಸ್ವೀಕರಿಸಿದ ಬಳಿಕ ದೇವಳದ ಅರ್ಚಕ ನರಸಿಂಹ ಭಟ್‌ ಅವರು ಅಶ್ವತ್ಥಮ್ಮ ಅವರಿಗೆ ಪ್ರಸಾದ ನೀಡಿ ಹರಸಿದರು.

ಆಡಳಿತ ಮೊಕ್ತೇಸರರಾದ ಮನೋಹರ್‌ ಶೆಟ್ಟಿ ದೇವಳದ ವತಿಯಿಂದ ಗೌರವಿಸಿದರು. ಅರ್ಚಕ ಪ್ರಸಾದ್‌ ಭಟ್‌, ಅಕೌಂಟೆಂಟ್‌ ಶಿವಶಂಕರ್‌ ವರ್ಮ, ಕಾರ್ತಿಕ್‌ ಕೋಟ್ಯಾನ್‌ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Advertisement

Be the first to comment on "ಭಿಕ್ಷೆ ಬೇಡಿ ಉಳಿದ ಒಂದು ಲಕ್ಷ ರೂ. ಬಪ್ಪನಾಡು ದೇವಸ್ಥಾನಕ್ಕೆ ದೇಣಿಗೆ ನೀಡಿದ ವೃದ್ಧೆ"

Leave a comment

Your email address will not be published.


*