ದೇವಸ್ಥಾನದ ಸುತ್ತಮುತ್ತ ಪ್ರದೇಶಗಳಲ್ಲಿ ಭಿಕ್ಷೆ ಬೇಡಿ ಉಳಿದ ಒಂದು ಲಕ್ಷ ರೂಪಾಯಿ ಹಣವನ್ನು ವೃದ್ಧೆಯೊಬ್ಬರು ಬಪ್ಪನಾಡು ದೇವಸ್ಥಾನಕ್ಕೆ ದೇಣಿಗೆಯಾಗಿ ನೀಡಿ ಮಾದರಿಯಾಗಿದ್ದಾರೆ.
80 ಹರೆಯದ ವೃದ್ಧೆ ಇಲ್ಲಿ ತನಕ ಭಿಕ್ಷೆ ಬೇಡಿ ಬಂದಿರುವ ಹಣದಲ್ಲಿ ವಿವಿಧ ದೇವಸ್ಥಾನಗಳಿಗೆ ಸುಮಾರು 9 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ 80ರ ವೃದ್ಧೆ ಅಶ್ವತ್ಥಮ್ಮ ಈ ಮಾದರಿ ಕೆಲಸ ಮಾಡಿದವರು.
ಸೋಮವಾರ ಮಂಗಳೂರಿನ ಹೊರವಲಯದ ಮೂಲ್ಕಿಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಾಲಯಕ್ಕೆ ಆಗಮಿಸಿ ದೇವಸ್ಥಾನದ ಅನ್ನದಾನಕ್ಕೆ 1 ಲಕ್ಷ ರೂಪಾಯಿ ದೇಣಿಗೆಯಾಗಿ ನೀಡಿದ್ದಾರೆ. ದೇಣಿಗೆ ಸ್ವೀಕರಿಸಿದ ಬಳಿಕ ದೇವಳದ ಅರ್ಚಕ ನರಸಿಂಹ ಭಟ್ ಅವರು ಅಶ್ವತ್ಥಮ್ಮ ಅವರಿಗೆ ಪ್ರಸಾದ ನೀಡಿ ಹರಸಿದರು.
ಆಡಳಿತ ಮೊಕ್ತೇಸರರಾದ ಮನೋಹರ್ ಶೆಟ್ಟಿ ದೇವಳದ ವತಿಯಿಂದ ಗೌರವಿಸಿದರು. ಅರ್ಚಕ ಪ್ರಸಾದ್ ಭಟ್, ಅಕೌಂಟೆಂಟ್ ಶಿವಶಂಕರ್ ವರ್ಮ, ಕಾರ್ತಿಕ್ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.
ಅಡುಗೆಯ ಮಾಪಕಗಳು ಒಂದೊಂದು ಮನೆಗೆ ಒಂದೊಂದು ರೀತಿ ಇರುತ್ತವೆ. ಅವುಗಳ ಕಡೆಗೆ ನಿಗಾ…
ದೇವರ ದರ್ಶನಕ್ಕೆ ಗಂಟೆಗಟ್ಟಲೆ ಕಾಯುವ ಭಕ್ತರ ದಂಡನ್ನು ನೋಡಿದಾಗ ಹಿಂದೂ ಧರ್ಮಕ್ಕೆ ಯಾವ…
ಕೇಂದ್ರ ಪುರಸ್ಕೃತ ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ಜಾನುವಾರುಗಳಿಗೆ ವಿಮಾ ಸೌಲಭ್ಯ ನೀಡುವ…
ಏ 10 ರಿಂದ ಶ್ರೀ ದೇವರ ಪೇಟೆ ಸವಾರಿ ಆರಂಭಗೊಂಡು ಏ 18ರ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ . 9535156490
ಯಾವುದೇ ಕಾರಣಕ್ಕೂ ಬಗರ್ ಹುಕುಂ ರೈತರನ್ನು ಒಕ್ಕಲೆಬ್ಬಿಸದಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕೇಂದ್ರ…