ಎಲ್ಲೇ ಇದ್ದರೂ ಸ್ವಭಾಷೆ, ಸಂಸ್ಕೃತಿ ಮರೆಯಬೇಡಿ : ರಾಘವೇಶ್ವರ ಶ್ರೀ

August 20, 2025
9:31 PM

ಜಗತ್ತಿನ ಯಾವುದೇ ಕಡೆಗಳಲ್ಲಿ ನೆಲೆಸಿದರೂ ನಮ್ಮ ಭಾಷೆ- ಸಂಸ್ಕೃತಿ, ಸಂಸ್ಕಾರಗಳನ್ನು ಮರೆಯಬಾರದು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀಮಹಾಸ್ವಾಮೀಜಿ ಹೇಳಿದರು.

ಅಶೋಕೆಯಲ್ಲಿ ಸ್ವಭಾಷಾ ಚಾತುಮಾಸ್ಯ ವ್ರತ ಕೈಗೊಂಡಿರುವ ಶ್ರೀಗಳು 42ನೇ ದಿನವಾದ ಬುಧವಾರ ಬ್ರಿಟನ್ (ಯುಕೆ) ವಲಯದ ಶಿಷ್ಯರಿಂದ ಭಿಕ್ಷಾಸೇವೆ ಸ್ವೀಕರಿಸಿ ಆಶೀರ್ವಚನ ಅನುಗ್ರಹಿಸಿದರು.  ಹವ್ಯಕ ಸಮುದಾಯಕ್ಕೆ ವಿಶಿಷ್ಟ ಪರಂಪರೆ ಇದೆ. ಅದನ್ನು ಉಳಿಸಿ ಬೆಳೆಸುವ ಮೂಲಕ ಮುಂದಿನ ಪೀಳಿಗೆಗೆ ಉಳಿಸಿಕೊಂಡು ಹೋಗುವ ಹೊಣೆ ನಮ್ಮೆಲ್ಲರದು ಎಂದು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ WhatsApp Channel   ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…

ಎಲ್ಲೇ ಇದ್ದರೂ ಸ್ವಧರ್ಮದ ಆಚರಣೆ, ಸ್ವಭಾಷೆಯೇ ಶ್ರೇಷ್ಠ. ವ್ಯವಹಾರಕ್ಕೆ ಯಾವುದೇ ಭಾಷೆಗಳನ್ನು ಅನಿವಾರ್ಯವಾಗಿ ಬಳಸಿದರೂ ನಮ್ಮ ಮನೆಯಲ್ಲಿ ಮಾತೃಭಾಷೆಯನ್ನೇ ಬಳಸುವುದನ್ನು ಮರೆಯಬಾರದು. ಭಾಷೆ ಕೇವಲ ಸಂವಹನ ಮಾಧ್ಯಮವಲ್ಲ; ಅದು ನಮ್ಮ ಸಂಸ್ಕೃತಿ- ಪರಂಪರೆಯ ವಾಹಕವೂ ಹೌದು. ಭಾಷೆ ಅಳಿದರೆ ಅದು ಪ್ರತಿನಿಧಿಸುವ ಸಂಸ್ಕೃತಿಯೇ ನಾಶವಾಗುತ್ತದೆ ಎಂದು ಎಚ್ಚರಿಸಿದರು.

ವಿಶ್ವದ ಅತ್ಯಂತ ಪ್ರಾಚೀನ ಭಾಷೆಗಳಲ್ಲೊಂದಾದ ಕನ್ನಡದಲ್ಲಿ ಇಂದು ಬಹಳಷ್ಟು ಅಂಗ್ಲ ಹಾಗೂ ಇತರ ಭಾಷೆಯ ಶಬ್ದಗಳು ತುಂಬಿದ್ದು, ಮರೆತು ಹೋಗಿರುವ ಕನ್ನಡ ಪದಗಳನ್ನು ಮತ್ತೆ ಆಚರಣೆ ತರುವ ಮೂಲಕ ಮುಂದಿನ ಪೀಳಿಗೆಗೆ ಶುದ್ಧ ಭಾಷೆಯನ್ನು ಉಳಿಸಿಹೋಗೋಣ ಎಂದರು.

Advertisement

ಕೇರಳ ಬಿಜೆಪಿ ಉತ್ತರ ವಲಯ ಅಧ್ಯಕ್ಷ ಮತ್ತು ಹಿರಿಯ ವಕೀಲ ಶ್ರೀಕಾಂತ್, ಪ್ರಧಾನ ಕಾರ್ಯದರ್ಶಿ ಸುಧಾನ ಗೋಸಾಡ, ಪಕ್ಷದ ಮುಖಂಡರಾದ ವಿಜಯ ಕುಮಾರ್ ರೈ, ಮಂಜೇಶ್ವರ ಮಂಡಲ ಸಮಿತಿ ಸದಸ್ಯ ಸುಬ್ರಹ್ಮಣ್ಯ ಭಟ್ ನಾಯರ್‌ಪಳ್ಳ ಅವರು ಶ್ರೀಗಳಿಂದ ಆಶೀರ್ವಾದ ಪಡೆದರು. ವಿವಿವಿ ಹಿರಿಯ ಲೋಕಸಂಪರ್ಕಾಧಿಕಾರಿ ಜಿ.ಕೆ.ಹೆಗಡೆ, ಚಾತುರ್ಮಾಸ್ಯ ತಂಡದ ಅರವಿಂದ ಧರ್ಬೆ, ನಿಖಿಲ್, ಪಿಆರ್‍ಓ ಎಂ.ಎನ್.ಮಹೇಶ ಭಟ್ಟ, ಎಂಜಿನಿಯರ್ ವಿಷ್ಣು ಬನಾರಿ, ಸುಚೇತನ ಶಾಸ್ತ್ರಿ ಮತ್ತಿತರರು ಉಪಸ್ಥಿತರಿದ್ದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ WhatsApp Channel   ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಚಿಕಿತ್ಸೆ ಮುಗಿದರೂ ಕ್ಯಾನ್ಸರ್ ಅಪಾಯ ಏಕೆ ಮುಗಿಯುವುದಿಲ್ಲ?
January 7, 2026
11:10 PM
by: ದ ರೂರಲ್ ಮಿರರ್.ಕಾಂ
‌ ಭೂಮಿಗೆ ಬಿದ್ದ ಪ್ಲಾಸ್ಟಿಕ್ ಕರಗುವಂತೆ ಮಾಡಬಹುದು…!, ಇದು ಪ್ಲಾಸ್ಟಿಕ್ ಮಾಲಿನ್ಯಕ್ಕೆ ಪರಿಹಾರವೇ?
January 7, 2026
10:43 PM
by: ದ ರೂರಲ್ ಮಿರರ್.ಕಾಂ
2026 ರಲ್ಲಿ ಕೃಷಿ ಕ್ಷೇತ್ರ ಸ್ಥಿರತೆ , ಆದರೆ ಅಸಮಾನತೆ ಮುಂದುವರಿಕೆ
January 7, 2026
10:14 PM
by: ದ ರೂರಲ್ ಮಿರರ್.ಕಾಂ
ಶಾಖದ ಅಲೆಗಳ ಮುನ್ಸೂಚನೆಗೆ ವಿಜ್ಞಾನಿಗಳಿಂದ ಹೊಸ ಅಧ್ಯಯನ
January 7, 2026
10:04 PM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror