ವ್ಯಾಪ್ತಿ ಮೀರಿ ಕಬ್ಬು ಕಟಾವು ಮಾಡಬಾರದು | ಮಂಡ್ಯ ರೈತರಿಗೆ ಜಿಲ್ಲಾಧಿಕಾರಿ ಎಚ್ಚರಿಕೆ

August 30, 2024
11:18 AM

ಮಂಡ್ಯ(Mandya) ಜಿಲ್ಲೆಯಲ್ಲಿರುವ ಎಲ್ಲಾ ಸಕ್ಕರೆ ಕಾರ್ಖಾನೆಗಳು(Sugarcane Industry) ಮ್ಯಾಪಿಂಗ್ ಆಗಿರುವ ಪ್ರದೇಶವನ್ನು ಹೊರತುಪಡಿಸಿ ಬೇರೆ ಪ್ರದೇಶದ ಕಬ್ಬನ್ನು ಕಟಾವು(Sugar cane crop) ಮಾಡಬಾರದು. ಈ ಕುರಿತಂತೆ ಈಗಾಗಲೇ ಎಚ್ಚರಿಕೆ ನೀಡಲಾಗಿದೆ. ಇದೇ ಮರುಕಳಿಸಿದರೆ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಜಿಲ್ಲಾಧಿಕಾರಿ(DC) ಡಾ ಕುಮಾರ ಅವರು ಎಚ್ಚರಿಕೆ  ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಮಂಡ್ಯ ಜಿಲ್ಲೆಯ 2024 ನೇ ಸಾಲಿನ ಸಕ್ಕರೆ ಕಾರ್ಖಾನೆಗಳ ಪ್ರಗತಿ ಪರಿಶೀಲನೆ ಹಾಗೂ ಇತರೆ ವಿಷಯಗಳ ಬಗ್ಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 2024 – 25 ನೇ ಸಾಲಿನ ಸಕ್ಕರೆ ಕಾರ್ಖಾನೆಗೆ ಸಂಬಂಧಿಸಿದಂತೆ ಈಗಾಗಲೇ ಜಿಲ್ಲೆಯಲ್ಲಿರುವ 5 ಸಕ್ಕರೆ ಕಾರ್ಖಾನೆಗಳಲ್ಲಿ ಕಬ್ಬು ಅರೆಯುವ ಪ್ರಕ್ರಿಯೆ ನಡೆಯುತ್ತಿದೆ. ಕಾರ್ಖಾನೆಗಳು ತಮ್ಮ ವ್ಯಾಪ್ತಿ ಮೀರಿ ಕಬ್ಬನ್ನು ಖರೀದಿ ಮಾಡುತ್ತಿರುವ ಬಗ್ಗೆ ಸಾಕಷ್ಟು ದೂರು ಕೇಳಿ ಬರುತ್ತಿವೆ ಎಂದರು.

Advertisement
Advertisement

ಜಿಲ್ಲೆಯ 5 ಸಕ್ಕರೆ ಕಾರ್ಖಾನೆಗಳು ಒಗ್ಗೂಡಿ ಸಾಮರಸ್ಯದಿಂದ ಕಾರ್ಯ ನಿರ್ವಹಿಸಿ. ಜೊತೆಗೆ ರೈತರಿಗೆ ಸಕಾಲದಲ್ಲಿ ಎಫ್‌ಆರ್‌ಪಿ ಪ್ರಕಾರವೇ 14 ದಿನದೊಳಗಾಗಿ ಕಬ್ಬು ಖರೀದಿ ವೆಚ್ಚವನ್ನು ಪಾವತಿಸಿ ಎಂದರು. ಮಂಡ್ಯ ಜಿಲ್ಲೆಗೆ ಹೊರ ಜಿಲ್ಲೆಯಿಂದ ಕಬ್ಬು ಕಟಾವು ಮಾಡಲು ಬರುವ ಕೂಲಿ ಕಾರ್ಮಿಕರಿಗೆ ಮೂಲಭೂತ ಸೌಕರ್ಯವನ್ನು ಕಲ್ಪಿಸುವುದು ಕಾರ್ಖಾನೆಯ ಮಾಲೀಕರ ಕರ್ತವ್ಯವಾಗಿದ್ದು, ಅವರಿಗೆ ಮೂಲಭೂತ ವ್ಯವಸ್ಥೆ ಕಲ್ಪಿಸಿ ಎಂದರು. ಮೈಶುಗರ್ ಸಕ್ಕರೆ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಡಾ: ಹೆಚ್ ಎಲ್ ನಾಗರಾಜು ಅವರು ಮಾತನಾಡಿ ಮೈಶುಗರ್ ಸಕ್ಕರೆ ಕಾರ್ಖಾನೆ ಸರ್ಕಾರಿ ಸೌಮ್ಯದ ಕಾರ್ಖಾನೆಯಾಗಿದ್ದು, ಸೇವಾ ವಲಯದಲ್ಲಿ ಕಾರ್ಯ ನಿರ್ವಹಿಸಲಾಗುತ್ತಿದೆ.

ಸೆಪ್ಟೆಂಬರ್ ಅಂತ್ಯದೊಳಗೆ 2.50 ಲಕ್ಷ ಟನ್ ಕಬ್ಬು ಅರೆಯುವ ಗುರಿ ಹೊಂದಲಾಗಿದೆ. ಈ ಕಬ್ಬು ಅರಿದ ನಂತರ ಉಳಿದರೆ ಮೈಶುಗರ್ ವ್ಯಾಪ್ತಿಯ ಕಬ್ಬನ್ನು ಬೇರೆ ಆಸಕ್ತ ಕಬ್ಬು ಕಾರ್ಖಾನೆಗೆ ನೀಡಲಾಗುವುದು ಎಂದರು. ಇದಕ್ಕೆ ಪ್ರತಿಕ್ರಯಿಸಿದ ಜಿಲ್ಲಾಧಿಕಾರಿಗಳು ಐ.ಸಿ.ಎಲ್, ಚಾಮ್ ಶುಗರ್ ಸೇರಿದಂತೆ ಬೇರೆ ಕಾರ್ಖಾನೆಯ ಕಬ್ಬು ಜಟಾವು ಕಾರ್ಮಿಕರು ಒಟ್ಟು 100 ಬ್ಯಾಚನ್ನು 15 ದಿನಗಳ ಕಾಲ ಮೈಶುಗರ್ ಕಬ್ಬು ಕಟಾವಿಗೆ ನಿಯೋಜಿಸಿಕೊಡುವಂತೆ ತಿಳಿಸಿದರು.

ಸಭೆಯಲ್ಲಿ ಶ್ರೀ ಚಾಮುಂಡೇಶ್ವರಿ ವಿದ್ಯುತ್  ಸರಬರಾಜು ನಿಗಮ ನಿಯಮಿತ ಅಧ್ಯಕ್ಷ ಹಾಗೂ ಶ್ರೀರಂಗಪಟ್ಟಣದ ಶಾಸಕ ಎ ಬಿ ರಮೇಶ್ ಬಂಡಿಸಿದ್ದೇಗೌಡ, ಮೈಸೂರು ಸಕ್ಕರೆ ಕಂಪನಿ ನಿಯಮಿತದ ಅಧ್ಯಕ್ಷ ಸಿ ಡಿ ಗಂಗಾಧರ,ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶೇಖ್ ತನ್ವಿರ್ ಆಸೀಫ್, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ಕೃಷ್ಣಕುಮಾರ್ ಇನ್ನಿತರರು ಉಪಸ್ಥಿತರಿದ್ದರು.

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ |29.05.2025 | ಮೇ.31ರಿಂದ ಮಳೆ ಪ್ರಮಾಣ ಕಡಿಮೆ
May 29, 2025
2:42 PM
by: ಸಾಯಿಶೇಖರ್ ಕರಿಕಳ
ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ
May 29, 2025
7:40 AM
by: The Rural Mirror ಸುದ್ದಿಜಾಲ
ಭಾರತ್ ಮುನ್ಸೂಚನಾ ವ್ಯವಸ್ಥೆ | ಭಾರತದಿಂದ ವಿಶ್ವದ ಅತ್ಯಂತ ನಿಖರವಾದ ಹವಾಮಾನ ಮಾದರಿಗೆ ಚಾಲನೆ | ಸಣ್ಣ ಪ್ರಮಾಣದ ಹವಾಮಾನ ಸ್ಥಿತಿಗತಿಗಳ ನಿಖರವಾದ ಮಾಹಿತಿ ಲಭ್ಯ|
May 29, 2025
7:37 AM
by: ದ ರೂರಲ್ ಮಿರರ್.ಕಾಂ
ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ
May 29, 2025
7:22 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group