ಹಳ್ಳಿ ಹಳ್ಳಿಗಳ ದಿನಸಿ ಅಂಗಡಿ ಸೇರಿದಂತೆ ಎಲ್ಲಿ ಬೇಕಾದರು ಮದ್ಯ ಮಾರಾಟಕ್ಕೆ ಅನುಮತಿ ನೀಡುವ ನೀಚಗೇಡಿತನದ ಕೆಲಸವನ್ನು ಮಾಡಲು ಹೊರಟಿದೆ ಕಾಂಗ್ರೆಸ್ ಸರ್ಕಾರ. ಇದನ್ನು ವಿರೋಧಿಸಿ ಇಂದು “ನೂತನ ರಾಜ್ಯ ಸರಕಾರ ಮಹಿಳೆಯರಿಗೆ ಕೆಲವು ಗ್ಯಾರಂಟಿ ಯೋಜನೆಗಳ ಮೂಲಕ ಖುಷಿ ನೀಡಿತ್ತು. ಆದರೆ ಇದೀಗ ಆ ಖುಷಿಯನ್ನು ಹೊಸ ಮದ್ಯದಂಗಡಿಗಳಿಗೆ ಪರವಾನಿಗೆ ನೀಡುವ ಮೂಲಕ ಕಸಿಯಲು ಹೊರಟಿರುವುದು ಆಘಾತಕಾರಿ” ಎಂದು ದ.ಕ. ಜಿಲ್ಲೆಯ ಮದ್ಯನಿಷೇಧ ಆಂದೋಲನದಡಿ ಜಿಲ್ಲೆಯ ವಿವಿಧ ಸಂಘಟನೆಗಳ ಮಹಿಳಾ ಪ್ರತಿನಿಧಿಗಳು ರಾಜ್ಯ ಸರಕಾರಕ್ಕೆ ಭಾವನಾತ್ಮಕ ಮನವಿ ಮಾಡಿದ್ದಾರೆ.
ಮಂಗಳೂರಿನ ಪುರಭವನದ ಸಮೀಪದ ರಾಜಾಜೀ ಪಾರ್ಕ್‌ನಲ್ಲಿ ನಡೆದ ಜಿಲ್ಲಾ ಮಟ್ಟದ ಗಾಂಧಿ ಜಯಂತಿ ಕಾರ್ಯಕ್ರಮದ ಸಂದರ್ಭ ಮಹಿಳಾ ಹೋರಾಟಗಾರರ ಗುಂಪೊಂದು ಜಿಲ್ಲಾ ಮಟ್ಟದ ಅಧಿಕಾರಿಗಳ ಮೂಲಕ ರಾಜ್ಯ ಸರಕಾರಕ್ಕೆ ಮನವಿಯನ್ನು ಸಲ್ಲಿಸಿತು. ”ಯಾವುದೇ ಸರಕಾರ ಮದ್ಯ ಮಾರಾಟದಿಂದ ಬರುವ ಆದಾಯವನ್ನು ಕಲ್ಯಾಣ ಕಾರ್ಯಕ್ರಮಗಳಿಗೆ ಬಳಸುವುದು ಅಪರಾಧ ಎಂದು ಗಾಂಧೀಜಿ ಹೇಳಿದ್ದರು. ಆದರೆ ಸರಕಾರ ಅಕ್ರಮ ಮದ್ಯ ಮಾರಾಟ ತಡೆಗಟ್ಟಲು 600 ಗ್ರಾಮ ಪಂಚಾಯತ್ ಸೇರಿದಂತೆ 1000 ಹೊಸ ಮದ್ಯದಂಗಡಿಗೆ ಪರವಾನಿಗೆ ನೀಡುವ ಪ್ರಸ್ತಾವನೆ ಮುಂದಿಟ್ಟಿರುವುದು ತಿಳಿದು ಆಘಾತಗೊಂಡಿದ್ದೇವೆ” ಎಂದು ಮದ್ಯ ನಿಷೇಧ ಆಂದೋಲನ, ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ, ಯುವ ಮುನ್ನಡೆ ಮಂಗಳೂರು, ಪ್ರಜ್ಞಾ ಸಲಹಾ ಕೇಂದ್ರ, ಕರಾವಳಿ ಲೇಖಕಿಯರ ವಾಚಕಿಯರ ಸಂಘ, ಮಹಿಳಾ ದೌರ್ಜನ್ಯ ವಿರೋಧಿ ವೇದಿಕೆ, ಕರ್ನಾಟಕ ರಾಜ್ಯ ರೈತ ಸಂಘಗಳನ್ನು ಒಳಗೊಂಡ ಪ್ರತಿನಿಧಿಗಳು ಮನವಿಯಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.
ಮದ್ಯ ನಿಷೇಧ ಆಂದೋಲನದ ಮಹಿಳೆಯರು 2015ರಿಂದಲೂ ಹೈಕೋರ್ಟ್‌ನ ಆದೇಶದಂತೆ ಅಕ್ರಮ ಮದ್ಯ ಮಾರಾಟ ನಿಲ್ಲಿಸಲು ಕ್ರಮ ಕೈಗೊಳ್ಳಬೇಕು. ಅಕ್ರಮ ಮಾರಾಟಗಾರರ ಮೇಲೆ ಕಠಿಣ ಕ್ರಮ ವಹಿಸಬೇಕು. ಕರ್ನಾಟಕ ಪಂಚಾಯತ್‌ರಾಜ್ ಕಾನೂನಿನ ಅನ್ವಯ (73ನೆ ತಿದ್ದುಪಡಿ) ಗ್ರಾಮಸಭೆಗೆ ಪರಮಾಧಿಕಾರ ನೀಡುವ ಆದೇಶ ಹೊರಡಿಸಬೇಕು. ಮಹಾರಾಷ್ಟ್ರ, ಹರಿಯಾಣ ರಾಜ್ಯಗಳಂತೆ ಶೇ. 10ರಷ್ಟು ಮಹಿಳೆಯರು ಆಯಾ ಪಂಚಾಯತ್ ವ್ಯಾಪ್ತಿಯಲ್ಲಿ ಮದ್ಯ ಮಾರಾಟಕ್ಕೆ ಪರವಾನಿಗೆ ನೀಡಬಾರದು ಎಂಬುದಾಗಿ ಗ್ರಾಮ ಸಭೆಯಲ್ಲಿ ನಿರ್ಧರಿಸಿದ್ದಲ್ಲಿ ಆ ಠರಾವನ್ನು ಸರಕಾರ ಎತ್ತಿ ಹಿಡಿಯಬೇಕು ಎಂಬ ತಮ್ಮ ಹಕ್ಕೊತ್ತಾಯವನ್ನು ಪುನರುಚ್ಚರಿಸುತ್ತಿದ್ದೇವೆ. ಮಾತ್ರವಲ್ಲದೆ ಸರಕಾರ ಹೊರತಾಗಿ ಮದ್ಯದಂಗಡಿಗಳಿಗೆ ಪರವಾನಿಗೆ ನೀಡುವ, ಮಾಲ್ ಸೂಪರ್ ಮಾರುಕಟ್ಟೆಗಳಲ್ಲಿ ಹಾಗೂ ಆನ್‌ಲೈನ್ ಮಾರಾಟ ಮಾಡುವ ಪ್ರಸ್ತಾವನೆ ಕೈಬಿಡಬೇಕು” ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
– ಅಂತರ್ಜಾಲ ಮಾಹಿತಿ
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…