ಇನ್ನೊಮ್ಮೆ ಎಚ್ಚರ | ಕುಕ್ಕೆಯಲ್ಲಿ ಪ್ಲಾಸ್ಟಿಕ್‌ ಎಸೆಯಬೇಡಿ – ದಂಡ ಖಚಿತ..!

October 24, 2025
7:13 AM

ಪ್ರವಾಸಿಗರೇ, ಯಾತ್ರಿಕರೇ ಎಚ್ಚರ ಇರಲಿ. ಕುಕ್ಕೆ ಸುಬ್ರಹ್ಮಣ್ಯದ ಆಸುಪಾಸು ಹಾಗೂ ಕುಮಾರಧಾರಾ ನದಿಗೆ ತ್ಯಾಜ್ಯ, ಪ್ಲಾಸ್ಟಿಕ್ ಎಸೆದರೆ‌ ದಂಡ ಖಚಿತ. ಕೆಲವು ದಿನಗಳ ಹಿಂದೆ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ನದಿಗೆ ತ್ಯಾಜ್ಯ ಎಸೆದು ತೆರಳಿದ ಪ್ರವಾಸಿಗರನ್ನು ಪತ್ತೆ ಹಚ್ಚಿ ಬೆಂಗಳೂರಿನಿಂದಲೇ ದಂಡ ಪಾವತಿ ಮಾಡಿಸಿರುವ ಘಟನೆ ನಡೆದಿದೆ.

ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಂದಿದ್ದ ಯಾತ್ರಾರ್ಥಿಗಳು ತೀರ್ಥಕ್ಷೇತ್ರ ಭೇಟಿ ಮುಗಿಸಿ ವಾಪಾಸ್  ಬೆಳಗ್ಗೆ ಕಾರಿನಲ್ಲಿ ಮರಳಿ ಹೋಗುವಾಗ ತ್ಯಾಜ್ಯದ ಕಟ್ಟನ್ನು ನದಿಗೆ ಎಸೆದು ಹೋಗಿದ್ದರು. ಇದನ್ನು ಗಮನಿಸುತ್ತಿದ್ದ ಸ್ಥಳೀಯರು ಮೊಬೈಲ್‌ನಲ್ಲಿ ಚಿತ್ರೀಕರಿಸಿ ಪಂಚಾಯತ್‌ಗೆ ದೂರು ಸಲ್ಲಿಸಿದ್ದರು. ಪಂಚಾಯತ್ ಅಧಿಕಾರಿಗಳು ವೀಡಿಯೋವನ್ನು ಪೊಲೀಸರಿಗೆ ಹಸ್ತಾಂತರಿಸಿದ್ದು, ಅವರು ವಾಹನ ನೋಂದಣಿ ಸಂಖ್ಯೆಯ ಆಧಾರದಲ್ಲಿ ವಾಹನದ ಮಾಲಕರನ್ನು ಪತ್ತೆಹಚ್ಚಿದರು.  ವಾಹನವು ಬೆಂಗಳೂರಿನ ಮುರಳಿ ಎಂಬವರಿಗೆ ಸೇರಿತ್ತು.  ಪಂಚಾಯತ್‌ನಿಂದ ಅವರನ್ನು ಸಂಪರ್ಕಿಸಿ 5,000 ರೂ. ದಂಡ ಪಾವತಿಸುವಂತೆ ಸೂಚಿಸಿತು. ಮುರಳಿ ಅವರು ಕ್ಷಮೆ ಯಾಚಿಸಿದ ಬಳಿಕ ದಂಡದ ಮೊತ್ತವನ್ನು 2,000 ರೂ.ಗೆ ಇಳಿಸಲಾಯಿತು. ಬಳಿಕ ಅವರು ಆನ್‌ಲೈನ್ ಮೂಲಕ ದಂಡ ಪಾವತಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ
September 13, 2026
9:08 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?
September 13, 2026
12:16 PM
by: ಸಾಯಿಶೇಖರ್ ಕರಿಕಳ
ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು
September 13, 2026
8:13 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror