ಪ್ರವಾಸಿಗರೇ, ಯಾತ್ರಿಕರೇ ಎಚ್ಚರ ಇರಲಿ. ಕುಕ್ಕೆ ಸುಬ್ರಹ್ಮಣ್ಯದ ಆಸುಪಾಸು ಹಾಗೂ ಕುಮಾರಧಾರಾ ನದಿಗೆ ತ್ಯಾಜ್ಯ, ಪ್ಲಾಸ್ಟಿಕ್ ಎಸೆದರೆ ದಂಡ ಖಚಿತ. ಕೆಲವು ದಿನಗಳ ಹಿಂದೆ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ನದಿಗೆ ತ್ಯಾಜ್ಯ ಎಸೆದು ತೆರಳಿದ ಪ್ರವಾಸಿಗರನ್ನು ಪತ್ತೆ ಹಚ್ಚಿ ಬೆಂಗಳೂರಿನಿಂದಲೇ ದಂಡ ಪಾವತಿ ಮಾಡಿಸಿರುವ ಘಟನೆ ನಡೆದಿದೆ.
ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಂದಿದ್ದ ಯಾತ್ರಾರ್ಥಿಗಳು ತೀರ್ಥಕ್ಷೇತ್ರ ಭೇಟಿ ಮುಗಿಸಿ ವಾಪಾಸ್ ಬೆಳಗ್ಗೆ ಕಾರಿನಲ್ಲಿ ಮರಳಿ ಹೋಗುವಾಗ ತ್ಯಾಜ್ಯದ ಕಟ್ಟನ್ನು ನದಿಗೆ ಎಸೆದು ಹೋಗಿದ್ದರು. ಇದನ್ನು ಗಮನಿಸುತ್ತಿದ್ದ ಸ್ಥಳೀಯರು ಮೊಬೈಲ್‌ನಲ್ಲಿ ಚಿತ್ರೀಕರಿಸಿ ಪಂಚಾಯತ್‌ಗೆ ದೂರು ಸಲ್ಲಿಸಿದ್ದರು. ಪಂಚಾಯತ್ ಅಧಿಕಾರಿಗಳು ವೀಡಿಯೋವನ್ನು ಪೊಲೀಸರಿಗೆ ಹಸ್ತಾಂತರಿಸಿದ್ದು, ಅವರು ವಾಹನ ನೋಂದಣಿ ಸಂಖ್ಯೆಯ ಆಧಾರದಲ್ಲಿ ವಾಹನದ ಮಾಲಕರನ್ನು ಪತ್ತೆಹಚ್ಚಿದರು. ವಾಹನವು ಬೆಂಗಳೂರಿನ ಮುರಳಿ ಎಂಬವರಿಗೆ ಸೇರಿತ್ತು. ಪಂಚಾಯತ್‌ನಿಂದ ಅವರನ್ನು ಸಂಪರ್ಕಿಸಿ 5,000 ರೂ. ದಂಡ ಪಾವತಿಸುವಂತೆ ಸೂಚಿಸಿತು. ಮುರಳಿ ಅವರು ಕ್ಷಮೆ ಯಾಚಿಸಿದ ಬಳಿಕ ದಂಡದ ಮೊತ್ತವನ್ನು 2,000 ರೂ.ಗೆ ಇಳಿಸಲಾಯಿತು. ಬಳಿಕ ಅವರು ಆನ್‌ಲೈನ್ ಮೂಲಕ ದಂಡ ಪಾವತಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ…
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…