MIRROR FOCUS

ರಾಜ್ಯದಲ್ಲಿ ಮಂಕಿ ಪಾಕ್ಸ್ ಆತಂಕ ಬೇಡ | ಮಂಕಿ ಫಾಕ್ಸ್ ತಡೆಗೆ ಅಗತ್ಯ ಕ್ರಮ | ವಿಮಾನ ನಿಲ್ದಾಣ ಸೇರಿ ಹಲವೆಡೆ ಮುನ್ನೆಚ್ಚರಿಕೆ | ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಆಫ್ರಿಕಾ ಖಂಡದಲ್ಲಿ ಮಂಕಿ ಪಾಕ್ಸ್ ಆತಂಕ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆಯು ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಿದೆ. ಆದರೂ, ಈ ಸೋಂಕು ಭಾರತದಲ್ಲಿ ಹರಡುವ ಅಪಾಯ ಕಡಿಮೆ. ಹೀಗಾಗಿ ಯಾರೊಬ್ಬರು ಆತಂಕಕ್ಕೆ ಒಳಗಾಗಬಾರದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಹೇಳಿದ್ದಾರೆ.…..ಮುಂದೆ ಓದಿ….

Advertisement

ರಾಜ್ಯದಲ್ಲಿ ಮಂಕಿ ಫಾಕ್ಸ್ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಬೆಂಗಳೂರಿನಲ್ಲಿ ಸಭೆ  ನಡೆಸಿದರು. ಸೋಂಕನ್ನು ಎದುರಿಸಲು ರಾಜ್ಯ ಸರ್ಕಾರ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ-ಎನ್ಸಿಡಿಸಿ ಇದರ ಹರಡುವಿಕೆ ಅಪಾಯದ ಮೌಲ್ಯಮಾಪನ ನಡೆಸುತ್ತಿದೆ. ಒಂದು ವೇಳೆ ಪ್ರಕರಣಗಳಿದ್ದರೆ ತಕ್ಷಣವೇ ಎಚ್ಚರಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸೋಂಕು ಪರೀಕ್ಷಿಸುವ ಸೌಲಭ್ಯವಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಆಸ್ಪತ್ರೆಯಲ್ಲಿ 50 ಹಾಸಿಗೆಗಳ ಹಾಗೂ 5 ಐಸಿಯು ಘಟಕಗಳ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಸಚಿವರು ಹೇಳಿದರು. ರಾಜ್ಯದಲ್ಲಿ ಮಂಕಿ ಫಾಕ್ಸ್ ತಡೆಗಟ್ಟಲು ಎಲ್ಲಾ ಅಗತ್ಯ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳಲಾಗಿದೆ. ವಿಮಾನ ನಿಲ್ದಾಣ, ಬಂದರು ಸೇರಿದಂತೆ ಮತ್ತಿತರ ಕಡೆ ಬಿಗಿ ಕ್ರಮ ಕೈಗೊಳ್ಳಲಾಗಿದೆ. ಹೀಗಾಗಿ ಜನರಿಗೆ ಈ ಸೋಂಕಿನ ಬಗ್ಗೆ ಭಯ ಬೇಡ ಎಂದು ಹೇಳಿದರು.ದೇಶದಲ್ಲಿ ಇದುವರೆಗೂ ಮಂಕಿ ಫಾಕ್ಸ್ ಕಂಡುಬಂದಿಲ್ಲ. ಒಂದು ವೇಳೆ ಪ್ರಕರಣಗಳು ಕಂಡುಬಂದರೆ ಆರಂಭದ ಹಂತದಲ್ಲೇ ಯಾವೆಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದರು.

Victoria Hospital in Bangalore is equipped with an infection testing facility. In a proactive step, the hospital has arranged for 50 beds and 5 ICU units, as stated by the Minister of Medical Education, Dr. Sharanprakash Patil.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ | 3570 ಟನ್ ಕಟ್ಟಡ ತ್ಯಾಜ್ಯ ತೆರವು

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಎರಡು…

8 hours ago

ಇಂದು ಶೂನ್ಯ  ನೆರಳಿನ ದಿನ | ಪಿಲಿಕುಳದಲ್ಲಿ  ಪ್ರಾತ್ಯಕ್ಷಿಕೆ

ಎಪ್ರಿಲ್ 24 ರಂದು ಮಧ್ಯಾಹ್ನ ನಿಮ್ಮ ನೆರಳನ್ನು ಕಾಣಲಾಗುವುದಿಲ್ಲ.  ಏಕೆಂದರೆ ಈಗ ಕರ್ಕಾಟಕ…

8 hours ago

ಬದುಕು ಕಲಿಸುವ ಪಾಠಗಳು

ಹಂಚಿ ತಿನ್ನುವ ಅಭ್ಯಾಸ ರೂಡಿ ಇಲ್ಲವಾದರೂ ಸಂಸಾರಿಯಾದ ಕೂಡಲೇ ಎಲ್ಲವೂ ಬದಲಾಗುತ್ತದೆ. ಆ…

8 hours ago

82 ವರ್ಷಗಳ ಬಳಿಕ ಅಕ್ಷಯ ತೃತೀಯ ದಿನವೇ 3 ಅಪರೂಪದ ಯೋಗಗಳ ನಿರ್ಮಾಣ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

8 hours ago

ಪ್ರಕೃತಿ ಸೌಂದರ್ಯ ಮತ್ತು ಧಾರ್ಮಿಕತೆ ಮೇಳೈಸಿದ ಸ್ಥಳ ನಾಕೂರುಗಯ | ಭಕ್ತಿ ಪ್ರಕೃತಿಗಳ ಸಂಗಮ

ಸಕಲಜೀವಿಗಳ ಆಡುಂಬೊಲ ನಮ್ಮೀ  ಪ್ರಕೃತಿ. ಪ್ರಕೃತಿಯೊಡಲು ನಮ್ಮತಾಯ ಮಡಿಲು. ಪ್ರಕೃತಿಯು ಕೆಲವೆಡೆ ರುದ್ರರಮಣೀಯ;…

8 hours ago

ಕೂಡಿಟ್ಟ ಆಸ್ತಿ ಮನೆಯಲ್ಲೇ ನಡೀತು ಕುಸ್ತಿ

ಹಕ್ಕಿಗಳು ಮರಿಗಳಿಗೆ ಹಾರಲು ಕಲಿಸುತ್ತವೆ. ಒಮ್ಮೆ ಹಾರಲು ಬಂತೆಂದರೆ ಗೂಡು ಬಿಟ್ಟು ಹಾರುತ್ತವೆ…

17 hours ago