ಪಿಂಚಣಿದಾರರ ಮನೆ ಬಾಗಿಲಿಗೆ ಒದಗಿಸಲು ಕ್ರಮ |

December 30, 2022
8:29 PM

ಜೀವಂತ ಪ್ರಮಾಣ ಪತ್ರವನ್ನು ಇ ವಿದ್ಯುನ್ಮಾನ ಆಡಳಿತ ಅಡಿಯಲ್ಲಿ ಕೇಂದ್ರೀಕೃತ ವ್ಯವಸ್ಥೆಯ ಮೂಲಕ ಪಿಂಚಣಿದಾರರ ಮನೆ ಬಾಗಿಲಿಗೆ ಒದಗಿಸಲು ಕ್ರಮ ವಹಿಸಲಾಗಿದೆ ಎಂದು ಖಜಾನೆ ಇಲಾಖೆ ಅಪರ ನಿರ್ದೇಶಕಿ ಡಾ.ಭಾಗ್ಯಲಕ್ಷ್ಮಿ ತಿಳಿಸಿದರು.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಖಜಾನೆ ಇಲಾಖೆ ಮತ್ತು ಭಾರತೀಯ ಅಂಚೆ ಇಲಾಖೆಯ ನಡುವೆ ಆಗಿರುವ ಒಪ್ಪಂದದಂತೆ ಜೀವಂತ ಪ್ರಮಾಣ ಪತ್ರವನ್ನು ಇ ವಿದ್ಯುನ್ಮಾನ ಆಡಳಿತ ಅಡಿಯಲ್ಲಿ ಕೇಂದ್ರೀಕೃತ ವ್ಯವಸ್ಥೆಯ ಮೂಲಕ ಪಿಂಚಣಿದಾರರ ಮನೆ ಬಾಗಿಲಿಗೆ ಸೇವೆ ಒದಗಿಸಲು ಕ್ರಮ ವಹಿಸಲಾಗಿದೆ ಎಂದು ಹೇಳಿದರು. ರಾಜ್ಯದಲ್ಲಿ 5 ಲಕ್ಷಕ್ಕೂ ಹೆಚ್ಚು ಪಿಂಚಣಿದಾರರಿದ್ದು, ಪ್ರತಿ ವರ್ಷ ನವೆಂಬರ್ ಮತ್ತು ಡಿಸೆಂಬರ್ ತಿಂಗಳುಗಳಲ್ಲಿ ಜೀವಂತ ಪ್ರಮಾಣ ಪತ್ರವನ್ನು ಸಲ್ಲಿಸಬೇಕಾಗುತ್ತದೆ.

ಇನ್ನು ಮುಂದೆ ಜೀವಂತ ಪ್ರಮಾಣ ಪತ್ರಗಳನ್ನು ಡಿಜಿಟಲ್ ಆಗಿ ಸಲ್ಲಿಸುವ ವ್ಯವಸ್ಥೆಯನ್ನು ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಒದಗಿಸುತ್ತದೆ. ರಾಜ್ಯ ಸರ್ಕಾರದ ಪಿಂಚಣಿದಾರರಿಗೆ ಈ ಸೇವೆ ವಿಸ್ತರಿಸಲು ಖಜಾನೆ ಇಲಾಖೆ ಮತ್ತು ಭಾರತೀಯ ಅಂಚೆ ಇಲಾಖೆ ಸಹಯೋಗಯೊಂದಿಗೆ ಸೌಲಭ್ಯವನ್ನು ಒದಗಿಸಲು ಉದ್ದೇಶಿಸಲಾಗಿದೆ. ಇ ಜೀವಂತ ಪ್ರಮಾಣ ಪತ್ರ ಪಡೆಯಲು ಪಿಂಚಣಿದಾರರು ತಮ್ಮ ಹೆಸರು, ಪಿಪಿಓ ಸಂಖ್ಯೆ, ಬ್ಯಾಂಕು ಖಾತೆಯ ವಿವರ, ವಿಳಾಸ, ಪಿನ್ ಕೋಡ್ ಆಧಾರ್ ಸಂಖ್ಯೆ, ಮೊಬೈಲು ಸಂಖ್ಯೆಯ ವಿವರಗಳನ್ನು ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕಿಗೆ ಒದಗಿಸಬೇಕು ಎಂದು ಹೇಳಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬರಗಾಲದಲ್ಲೂ ಬೆಳೆ ಉಳಿಸಿದ ಸಾವಯವ ಕೃಷಿ – ಸಾವಯವ ಕೃಷಿ ಅಬ್ಬರಿಸಿ ಬರುವುದಿಲ್ಲ- ಮುಗ್ಗರಿಸಿ ಬೀಳುವುದಿಲ್ಲ..!
October 12, 2026
7:30 AM
by: ಮಹೇಶ್ ಪುಚ್ಚಪ್ಪಾಡಿ
ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ
October 11, 2026
10:37 AM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ
October 11, 2026
10:24 AM
by: ದ ರೂರಲ್ ಮಿರರ್.ಕಾಂ
ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ
October 10, 2026
2:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror