ಜೀವಂತ ಪ್ರಮಾಣ ಪತ್ರವನ್ನು ಇ ವಿದ್ಯುನ್ಮಾನ ಆಡಳಿತ ಅಡಿಯಲ್ಲಿ ಕೇಂದ್ರೀಕೃತ ವ್ಯವಸ್ಥೆಯ ಮೂಲಕ ಪಿಂಚಣಿದಾರರ ಮನೆ ಬಾಗಿಲಿಗೆ ಒದಗಿಸಲು ಕ್ರಮ ವಹಿಸಲಾಗಿದೆ ಎಂದು ಖಜಾನೆ ಇಲಾಖೆ ಅಪರ ನಿರ್ದೇಶಕಿ ಡಾ.ಭಾಗ್ಯಲಕ್ಷ್ಮಿ ತಿಳಿಸಿದರು.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಖಜಾನೆ ಇಲಾಖೆ ಮತ್ತು ಭಾರತೀಯ ಅಂಚೆ ಇಲಾಖೆಯ ನಡುವೆ ಆಗಿರುವ ಒಪ್ಪಂದದಂತೆ ಜೀವಂತ ಪ್ರಮಾಣ ಪತ್ರವನ್ನು ಇ ವಿದ್ಯುನ್ಮಾನ ಆಡಳಿತ ಅಡಿಯಲ್ಲಿ ಕೇಂದ್ರೀಕೃತ ವ್ಯವಸ್ಥೆಯ ಮೂಲಕ ಪಿಂಚಣಿದಾರರ ಮನೆ ಬಾಗಿಲಿಗೆ ಸೇವೆ ಒದಗಿಸಲು ಕ್ರಮ ವಹಿಸಲಾಗಿದೆ ಎಂದು ಹೇಳಿದರು. ರಾಜ್ಯದಲ್ಲಿ 5 ಲಕ್ಷಕ್ಕೂ ಹೆಚ್ಚು ಪಿಂಚಣಿದಾರರಿದ್ದು, ಪ್ರತಿ ವರ್ಷ ನವೆಂಬರ್ ಮತ್ತು ಡಿಸೆಂಬರ್ ತಿಂಗಳುಗಳಲ್ಲಿ ಜೀವಂತ ಪ್ರಮಾಣ ಪತ್ರವನ್ನು ಸಲ್ಲಿಸಬೇಕಾಗುತ್ತದೆ.
ಇನ್ನು ಮುಂದೆ ಜೀವಂತ ಪ್ರಮಾಣ ಪತ್ರಗಳನ್ನು ಡಿಜಿಟಲ್ ಆಗಿ ಸಲ್ಲಿಸುವ ವ್ಯವಸ್ಥೆಯನ್ನು ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಒದಗಿಸುತ್ತದೆ. ರಾಜ್ಯ ಸರ್ಕಾರದ ಪಿಂಚಣಿದಾರರಿಗೆ ಈ ಸೇವೆ ವಿಸ್ತರಿಸಲು ಖಜಾನೆ ಇಲಾಖೆ ಮತ್ತು ಭಾರತೀಯ ಅಂಚೆ ಇಲಾಖೆ ಸಹಯೋಗಯೊಂದಿಗೆ ಸೌಲಭ್ಯವನ್ನು ಒದಗಿಸಲು ಉದ್ದೇಶಿಸಲಾಗಿದೆ. ಇ ಜೀವಂತ ಪ್ರಮಾಣ ಪತ್ರ ಪಡೆಯಲು ಪಿಂಚಣಿದಾರರು ತಮ್ಮ ಹೆಸರು, ಪಿಪಿಓ ಸಂಖ್ಯೆ, ಬ್ಯಾಂಕು ಖಾತೆಯ ವಿವರ, ವಿಳಾಸ, ಪಿನ್ ಕೋಡ್ ಆಧಾರ್ ಸಂಖ್ಯೆ, ಮೊಬೈಲು ಸಂಖ್ಯೆಯ ವಿವರಗಳನ್ನು ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕಿಗೆ ಒದಗಿಸಬೇಕು ಎಂದು ಹೇಳಿದ್ದಾರೆ.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…