ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಜಯಂತಿ ಭಾರತ ಕಂಡ ಶ್ರೇಷ್ಟ ನಾಯಕ

April 14, 2023
12:53 PM

ಏಪ್ರಿಲ್ 14 ರಂದು ಭಾರತದ ಸಂವಿಧಾನ ಶಿಲ್ಪಿ, ಭಾರತ ಕಂಡ ಶ್ರೇಷ್ಠ ನಾಯಕರಲ್ಲಿ ಒಬ್ಬರಾದ ಡಾ.ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನ. ಭಾರತೀಯರ ಪವಿತ್ರ ಗ್ರಂಥವಾದ ದೇಶದ ಆತ್ಮವೆಂದೇ ಕರೆಯಬಹುದಾದ ಸಂವಿಧಾನ ರಚನೆಯ ಹಿಂದಿನ ದೊಡ್ಡ ಶಕ್ತಿ ಡಾ ಬಾಬಾ ಸಾಹೇಬ್ ಅಂಬೇಡ್ಕರ್.

ಅಂಬೇಡ್ಕರ್ ಅವರ ಬದುಕು, ತತ್ವ, ಆದರ್ಶಗಳು ಭಾರತೀಯರ ಪಾಲಿಗೆ ಸಾರ್ವಕಾಲಿಕ ಸಕಾಲಿಕ ಎನ್ನಬಹುದು. ಸಮಾನತೆ, ಪ್ರಗತಿಯ ಕನಸು ಕಂಡ ಮೇರು ನಾಯಕ. ಇವರ ಆದರ್ಶ ಎಲ್ಲರ ಜೀವನಕ್ಕೆ ದಾರಿ. ಬಾಬಾ ಸಾಹೇಬರ ಚಿಂತೆನೆಗಳು ಇಂದಿಗೂ ಯುವಜನೆತೆಗೆ ಸ್ಫೂರ್ತಿ ನೀಡುತ್ತಲೇ ಇದೆ.

ಅಂಬೇಡ್ಕರ್ ಅವರ ಹುಟ್ಟು, ಬಾಲ್ಯ, ವಿದ್ಯಾಭ್ಯಾಸ: ಡಾ. ಭೀಮರಾವ್ ಅಂಬೇಡ್ಕರ್ ಅವರು ಮಧ್ಯಪ್ರದೇಶದ ಮೋವ್‌ನಲ್ಲಿ 1891 ರ ಏಪ್ರಿಲ್ 14 ರಂದು ಜನಿಸಿದರು. ಅವರು 1908ರಲ್ಲಿ ಎಲ್ಫಿನ್ ಸ್ಟೋನ್ ಹೈಸ್ಕೂಲ್‌ನಿಂದ ಮೆಟ್ರಿಕ್ಯೂಲೇಶನ್ ಪಾಸ್ ಮಾಡಿದರು. ಉನ್ನತ ಶಿಕ್ಷಣವನ್ನು ನ್ಯೂಯಾರ್ಕ್ ಕೊಲಂಬಿಯಾ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರವನ್ನು ಅಧ್ಯಯನ ಮಾಡಿದರು.

1927 ರ ಜೂನ್‌ 8 ರಂದು ಕೊಲಂಬಿಯಾ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಡಾಕ್ಟರೇಟ್ ಪದವಿ ಪಡೆದರು. ಅವರು ತಮ್ಮ ಜೀವನದಲ್ಲಿ ಮುಖ್ಯವಾಗಿ ಹೋರಾಟ ನಡೆಸಿದ್ದು ಜಾತಿ ತಾರತಮ್ಯ ಮತ್ತು ಅಸ್ಪೃಶ್ಯತೆ ವಿರುದ್ಧ. 1920 ರಲ್ಲಿ ಬಿ. ಆರ್. ಅಂಬೇಡ್ಕರ್ ಅವರು ‘ಮೂಕನಾಯಕ’ ಎಂಬ ಪತ್ರಿಕೆಯನ್ನು ಆರಂಭಿಸಿದರು. ಸ್ವತಂತ್ರ ಭಾರತದ ಮೊದಲ ಕಾನೂನು ಸಚಿವರಾಗಿ ನೇಮಕಗೊಂಡಿದ್ದರು. ಅಂಬೇಡ್ಕರ್ ಅವರು ಸಂವಿಧಾನ ರಚನೆಯ ಕರಡು ಸಮಿತಿಯ ಅಧ್ಯಕ್ಷರಾಗಿದ್ದರು. ಭಾರತದ ಬೃಹತ್ ಸಂವಿಧಾನಕ್ಕೆ ಅಪಾರ ಕೊಡುಗೆ, ಶ್ರಮ ಹಾಕಿದ್ದ ಇವರನ್ನು ಭಾರತೀಯ ಸಂವಿಧಾನ ಶಿಲ್ಪಿ ಎಂದೇ ಕರೆಯಲಾಗುತ್ತದೆ.

ಅಂಬೇಡ್ಕರ್ ಅವರು ದೆಹಲಿಯ ತಮ್ಮ ನಿವಾಸದಲ್ಲಿ ಡಿಸೆಂಬರ್ 6, 1956 ರಂದು ತಮ್ಮ 65ನೇ ವಯಸ್ಸಿನಲ್ಲಿ ನಿಧನರಾದರು. 1935 ರಲ್ಲಿ ಯೌಲ್ಲ ಸಮ್ಮೇಳನದಲ್ಲಿ ಅಂಬೇಡ್ಕರ್ ರವರು ತಾನೂ ಹಿಂದು ಧರ್ಮದಲ್ಲಿ ಇರುವುದಿಲ್ಲ, ನಾನು ಹಿಂದುವಾಗಿ ಹುಟ್ಟಿದ್ದು ಅನಿಶ್ಚಿತವಾಗಿ, ಆದರೆ ಹಿಂದುವಾಗಿ ಸಾಯುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದರು. “ಹಿಂದೂ ರಾಜ್ ಸತ್ಯವಾದರೆ, ಅದು ಈ ದೇಶಕ್ಕೆ ದೊಡ್ಡ ವಿಪತ್ತಾಗುವುದರಲ್ಲಿ ಸಂದೇಹವಿಲ್ಲ” ಎಂದು ಹೇಳಿದ್ದರು.

ಅವರು ಬೌದ್ಧ ಧರ್ಮದ ಅನುಯಾಯಿಯಾಗಿದ್ದರು. ಅಂಬೇಡ್ಕರ್ ಅವರಿಗೆ 1990 ರಲ್ಲಿ ಭಾರತ ಸರ್ಕಾರ ಮರಣೋತ್ತರ ‘ಭಾರತ ರತ್ನ’ ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror