ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಡಾ.ಪುರುಷೋತ್ತಮ ಬಿಳಿಮಲೆ ಅವರು ಪ್ರಾಧಿಕಾರದ ಮುಖ್ಯ ಕಚೇರಿಯಲ್ಲಿ ಗುರುವಾರ ಅಧಿಕಾರ ಸ್ವೀಕರಿಸಿದರು.
ರಾಜ್ಯ ಸರ್ಕಾರವು ಮಾರ್ಚ್ 16,2024 ರಂದು ಡಾ. ಪುರುಷೋತ್ತಮ ಬಿಳಿಮಲೆ ಅವರನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಿತ್ತು.
ಅಧಿಕಾರ ಸ್ವೀಕರಿಸಿದ ಬಳಿಕ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಡಾ.ಪುರುಷೋತ್ತಮ ಬಿಳಿಮಲೆ ಅವರು ಎಲ್ಲ ವಲಯಗಳಲ್ಲೂ ಕನ್ನಡ ಬಳಕೆ ಮತ್ತು ಅನುಷ್ಟಾನಕ್ಕಾಗಿ ಹಾಗೂ ಕನ್ನಡದ ಸಾರ್ವಭೌಮತೆಯನ್ನು ಎತ್ತಿ ಹಿಡಿಯಲು ಪ್ರಾಧಿಕಾರ ನಿರಂತರವಾಗಿ ಶ್ರಮಿಸಲಿದೆ ಎಂದು ತಿಳಿಸಿದ್ದಾರೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಟ್ವಿಟ್ಟರ್ ಖಾತೆ(ಎಕ್ಸ್) ನಲ್ಲಿ ತಿಳಿಸಿದ್ದಾರೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel