ಒಮಿಕ್ರಾನ್ ಅಬ್ಬರದ ಹಿನ್ನಲೆಯಿಂದಾಗಿ ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆಯನ್ನು ಮುಂದೂಡುವ ಸಾಧ್ಯತೆ ಇದೆ ಎಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ. “ಕೂ” ಮೂಲಕ ತನ್ನ ಅಭಿಪ್ರಾಯವನ್ನು ಸುಬ್ರಮಣಿಯನ್ ಸ್ವಾಮಿ ಹಂಚಿಕೊಂಡಿದ್ದಾರೆ.
ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶರು ಮುಂದಿನ ವರ್ಷದ ಚುನಾವಣೆಯನ್ನು ನಿಲ್ಲಿಸಲು ಪರಿಗಣಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿರುವ ಹಿನ್ನಲೆಯಲ್ಲಿ ಸುಬ್ರಮಣಿಯನ್ ಸ್ವಾಮಿ ಅವರ ಹೇಳಿಕೆಯು ಮಹತ್ವವನ್ನು ಪಡೆದುಕೊಂಡಿದೆ.
ರೂಪಾಂತಾರಿ ಓಮಿಕ್ರಾನ್‌ನ ಪರಿಣಾಮ ಲಾಕ್‌ಡೌನ್ ಮತ್ತು ಉತ್ತರ ಪ್ರದೇಶದಲ್ಲಿ ರಾಷ್ಟ್ರಪತಿ ಆಳ್ವಿಕೆಯ ಅಡಿಯಲ್ಲಿ ಚುನಾವಣೆಯನ್ನು ಸೆಪ್ಟೆಂಬರ್‌ಗೆ ಮುಂದೂಡಲಾಗುತ್ತದೆ. ಈ ವರ್ಷದ ಆರಂಭದಲ್ಲಿ ನೇರವಾಗಿ ಮಾಡಲು ಸಾಧ್ಯವಾಗದ್ದನ್ನು ಮುಂದಿನ ವರ್ಷದ ಆರಂಭದಲ್ಲಿ ಪರೋಕ್ಷವಾಗಿ ಮಾಡಬಹುದು ಎಂದು ಕೂ ಆಪ್‌ನ ಮೂಲಕ ಅಭಿಪ್ರಾಯ ಹಂಚಿಕೊಂಡಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel