ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಅವರು ಚಿತ್ರವೊಂದರಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಎಸ್.ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ‘ವೀರ ಕಂಬಳ’ ಸಿನಿಮಾ ಚಿತ್ರೀಕರಣ ಭರದಿಂದ ಸಾಗಿದೆ. ಈ ಸಿನಿಮಾದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆಯವರು ಅತಿಥಿ ಪಾತ್ರದಲ್ಲಿ ನಟಿಸುತ್ತಿದ್ದಾರೆ.
ತುಳುನಾಡಿನ ಹೆಮ್ಮೆಯ ಕಂಬಳ ಸ್ಪರ್ಧೆಯನ್ನು ಕೇಂದ್ರವಾಗಿಟ್ಟುಕೊಂಡು ಈ ಸಿನಿಮಾವನ್ನು ನಿರ್ಮಾಣ ಮಾಡಲಾಗುತ್ತಿದೆ. ಕನ್ನಡ ಮಾತ್ರವಲ್ಲದೇ ತೆಲುಗು, ತಮಿಳು, ಹಿಂದಿ ಹಾಗೂ ತುಳು ಭಾಷೆಗಳಲ್ಲಿ ‘ವೀರ ಕಂಬಳ’ ಸಿನಿಮಾ ತೆರೆಗೆ ಬರಲಿದೆ. ಇನ್ನೂ ತುಳು ಭಾಷೆಯಲ್ಲಿ ‘ಬಿರ್ದ್‌ದ ಕಂಬಳ’ ಹೆಸರಿನಲ್ಲಿ ಸಿನಿಮಾ ಮೂಡಿ ಬರ್ತಿದೆ. 7 ವರ್ಷಗಳ ಕಾಲ ಸಂಶೋಧನೆ ನಡೆಸಿ ಸಿನಿಮಾದ ಕಥೆ, ಚಿತ್ರಕಥೆ ಹೆಣೆಯಲಾಗಿದೆ.
“ವೀರ ಕಂಬಳ” ಸಿನಿಮಾಕ್ಕೆ ಅರುಣ್ ರೈ ತೋಡಾರ್ ಬಂಡವಾಳ ಹೂಡುತ್ತಿದ್ದಾರೆ. ಧರ್ಮಸ್ಥಳದ ಧರ್ಮಾಧಿಕಾರಿಗಳಾದ ವೀರೇಂದ್ರ ಹೆಗ್ಗಡೆ ಬಣ್ಣ ಹಚ್ಚಿ ಚಿತ್ರೀಕರಣದಲ್ಲಿ ಭಾಗಿ ಆಗಿದ್ದಾರೆ. ಅವರು ಮೇಕಪ್ ಹಾಕಿಕೊಳ್ಳುತ್ತಿರುವ ಫೋಟೊ ವೈರಲ್ ಆಗಿದೆ.
ತುಳುನಾಡಿನ ಪ್ರಸಿದ್ಧ ರಂಗಭೂಮಿ ಕಲಾವಿದರ ಜೊತೆಗೆ ಪ್ರಕಾಶ್ ರಾಜ್, ಆರ್ಮುಗ ರವಿಶಂಕರ್ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದಾರೆ.
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…