ಡಾ.ಡಿ.ವೀರೇಂದ್ರ ಹೆಗ್ಗಡೆ ರಾಜ್ಯಸಭೆಗೆ ನಾಮನಿರ್ದೇಶನ | ಅಡಿಕೆ ಬೆಳೆಗಾರರಿಗೆ ಸಂದ ಗೌರವ – ಕ್ಯಾಂಪ್ಕೋ ಅಧ್ಯಕ್ಷರಿಂದ ಅಭಿನಂದನೆ |

July 7, 2022
5:35 PM

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಾಗೂ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರಿಗೆ ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಕ್ಯಾಂಪ್ಕೋ ಸಂಸ್ಥೆಯ ಹಿರಿಯ ಸದಸ್ಯರೂ ಹಾಗೂ ARDF ಅಧ್ಯಕ್ಷರಾಗಿ ಸಂಸ್ಥೆಯ ಮಾರ್ಗದರ್ಶಕರೂ ಆಗಿರುವ ಡಾ.ಹೆಗ್ಗಡೆ ಅವರುರಾಜ್ಯಸಭೆಗೆ ನಾಮನಿರ್ದೆಶನಗೊಂಡಿರುವುದು ಸಮಸ್ತ ಅಡಿಕೆ ಬೆಳೆಗಾರರಿಗೆ ಸಂತಸ ತಂದಿದೆ ಮತ್ತು ಈ ಗೌರವ  ಎಲ್ಲಾ ಅಡಿಕೆ ಬೆಳೆಗಾರರಿಗೆ ಸಂದಿದೆ ಎಂದು ಕಿಶೋರ್‌ ಕುಮಾರ್‌ ಕೊಡ್ಗಿ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

ಕೆಲ ದಿನಗಳ ಹಿಂದೆ ಪ್ರಧಾನಮಂತ್ರಿಗಳಿಗೆ ಪತ್ರ ಬರೆದು ಅಡಿಕೆ ಆಮದು ತಡೆ ಮತ್ತು ಅಡಿಕೆಗೆ ಕನಿಷ್ಟಆಮದು ಬೆಲೆಯನ್ನು 360 ರೂಪಾಯಿಗೆ ನಿಗದಿಪಡಿಸಬೇಕು ಹಾಗೂ ಅಡಿಕೆ ಬೆಳೆ ಸಂಶೋಧನೆಗೆ ಅನುವು ಮಾಡಿಕೊಡಬೇಕೆಂದು ಆಗ್ರಹಿಸಿದ್ದರು. ಈಗ ರಾಜ್ಯಸಭೆಯಲ್ಲಿ ಅಡಿಕೆ ಬೆಳೆಗಾರರ ಧ್ವನಿಯಾಗಿ ನಮ್ಮ ಕೃಷಿಕರ ಶಕ್ತಿಯಾಗಿ ಡಾ. ಹೆಗ್ಗಡೆಯವರು ಇರುವುದು ನಮಗೆಲ್ಲರಿಗೂ ಹೆಮ್ಮೆ. ಹೀಗಾಗಿ ಸಮಸ್ತ ಕ್ಯಾಂಪ್ಕೋ ಸದಸ್ಯರ ಮತ್ತು ಅಡಿಕೆ ಬೆಳೆಗಾರರ ಪರವಾಗಿ ಅಭಿನಂದನೆ ಸಲ್ಲಿಸುತ್ತಿದ್ದೇವೆ ಎಂದು ಕ್ಯಾಂಪ್ಕೋ ಅಧ್ಯಕ್ಷರು ತಿಳಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror