ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ವಿವಿದೆಡೆ ಅಡಿಕೆ ಬೆಳೆ ಕಾಡುತ್ತಿರುವ ಹಳದಿ ಎಲೆ ರೋಗಕ್ಕೆ ಸಂಬಂಧಿಸಿದಂತೆ ಈಗಾಗಲೇ ಸರ್ಕಾರದ ಗಮನ ಸೆಳೆದಿದ್ದೇನೆ ಮತ್ತೊಮ್ಮೆ ಸರ್ಕಾರಕ್ಕೆ ಮನವಿ ಮಾಡಿ ಸೂಕ್ತ ಕ್ರಮ ಕೈಗೊಳ್ಳಲು ಮನವಿ ಮಾಡಲಾಗುವುದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.
ಅವರು ಸುಳ್ಯದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಜನಜಾಗೃತಿ ವೇದಿಕ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಗಾಂಧಿ ಜಯಂತಿ ಸಂಭ್ರಮಾಚರಣೆಯ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.ಅಡಿಕ ಎಲೆ ಹಳದಿ ರೋಗದ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆಯಲಾಗಿತ್ತು, ಅದಕ್ಕೆ ಉತ್ತರವೂ ಬ೦ದಿದೆ. ಮುಂದೆ ಹೇಗೆ ಏನು ಎಂಬುದರ ಬಗ್ಗೆ ಮತ್ತೊಮ್ಮೆ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ಹೇಳಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel