ಭಾರತದ 15 ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು |

July 21, 2022
10:19 PM

ಅಖಂಡ ಭಾರತದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಅವರು ಆಯ್ಕೆಯಾಗಿದ್ದಾರೆ.

ದ್ರೌಪದಿ ಮುರ್ಮು ಅವರು  ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಮುರ್ಮು ಅವರ ವಿರುದ್ಧ ಕಾಂಗ್ರೆಸ್‌ ನೇತೃತ್ವದ ಯುಪಿಎ ಅಭ್ಯರ್ಥಿಯಾಗಿ ಮಾಜಿ ಸಚಿವರಾಗಿದ್ದ ಯಶವಂತ್‌ ಸಿನ್ಹಾ ಅವರು ನಾಮಪತ್ರ ಸಲ್ಲಿಸಿ ಕಣಕ್ಕೆ ಇಳಿದಿದ್ದರು.

ದ್ರೌಪದಿ ಮುರ್ಮು ಅವರು ಮೊದಲ ಬುಡಕಟ್ಟು ಮಹಿಳಾ ರಾಷ್ಟ್ರಪತಿಯಾಗಿದ್ದಾರೆ. 1958 ಜೂನ್‌ 20ರಂದು ಜನಿಸಿದ ಮುರ್ಮು ಅವರಿಗೆ ಒರ್ವ ಮಗಳು ಇದ್ದಾರೆ. ಒಡಿಶಾದ ಮಯೂರ್ ಭಂಜ್ ಜಿಲ್ಲೆಯ ಬೈದಪೋಸಿ ಗ್ರಾಮದ ಸಂತಾಲಿ ಬುಡಕಟ್ಟು ಗ್ರಾಮದಲ್ಲಿ ಜನಿಸಿದ ಮುರ್ಮ ಅವರು ಬುಡಕಟ್ಟು ಜನಾಂಗದಿಂದ ಬಹಳ ಕಷ್ಟದ ಪರಿಸರದಲ್ಲಿ ಶಿಕ್ಷಣ ಪೂರೈಸಿ ಅದಮ್ಯ ಚೇತನವಾಗಿ ಬೆಳೆದು ಬಂದವರು. ದ್ರೌಪದಿ 1997ರಲ್ಲಿ ಕೌನ್ಸಿಲರ್ ಆಗಿ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದ್ದರು. 2015 ರಿಂದ 2021 ರವರೆಗೆ ಜಾಖಂಡ್‌ ರಾಜ್ಯದ ಗವರ್ನರ್‌ ಆಗಿದ್ದ ದ್ರೌಪದಿ ಮುರ್ಮು ಅವರು ಎನ್‌ಡಿಎಯಿಂದ ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದರು. ರಾಷ್ಟ್ರಪತಿ ಚುನಾವಣೆಗೆ ಜುಲೈ 18ರಂದು ಮತದಾನ ನಡೆದಿತ್ತು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ
October 15, 2026
10:10 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror