ನವಿ ಮುಂಬೈನ ಜವಾಹರಲಾಲ್ ನೆಹರು ಪೋರ್ಟ್ ನಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) 32.31 ಕೋಟಿ ಮೌಲ್ಯದ 371 ಟನ್ ಅಡಿಕೆಯನ್ನು ವಶಪಡಿಸಿಕೊಂಡಿದೆ. ಕಳ್ಳಸಾಗಣಿಕೆಯ ಮೂಲಕ ಈ ಅಡಿಕೆ ಮುಂಬಯಿಗೆ ಬಂದಿತ್ತು.
ಕಂಟೈನರ್‌ಗಳಲ್ಲಿ ಕ್ಯಾಲ್ಸಿಯಂ ನೈಟ್ರೇಟ್ ಎಂದು ನಮೂದಾಗಿತ್ತು. ಗುಪ್ತಚರ ಮಾಹಿತಿಯ ಮೇರೆಗೆ ಇಲಾಖಾ ಅಧಿಕಾರಿಗಳು ತಪಾಸಣೆ ನಡೆಸಿದ್ದರು, ಈ ಸಂದರ್ಭ ತೆರಿಗೆ ತಪ್ಪಿಸಿ , ತಪ್ಪು ಮಾಹಿತಿ ನೀಡಿ ಅಡಿಕೆಯನ್ನು ದೇಶಕ್ಕೆ ಆಮದು ಮಾಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ.14 ಕಂಟೈನರ್‌ಗಳಲ್ಲಿ ಅಡಿಕೆ ಕಳ್ಳಸಾಗಾಣಿಕೆ ಆಗಿತ್ತು
ಕಳೆದ ತಿಂಗಳು ಕೂಡಾ ಡಿಆರ್‌ಐ ಅಕ್ರಮ ಅಡಿಕೆ ಕಳ್ಳಸಾಗಣಿಕೆಯನ್ನು ಪತ್ತೆ ಮಾಡಿತ್ತು. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 50 ಮೆಟ್ರಿಕ್ ಟನ್ ಕಳ್ಳಸಾಗಣೆ ಅಡಿಕೆಗಳನ್ನು ವಶಪಡಿಸಿಕೊಂಡಿದೆ. ಇದು ಸುಮಾರು ₹ 4.43 ಕೋಟಿ ಎಂದು ಅಂದಾಜಿಸಲಾಗಿದೆ. . ದುಬೈ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್‌ನಿಂದ ಕ್ಯಾಲ್ಸಿಯಂ ನೈಟ್ರೇಟ್ ಮತ್ತು ಜಿಪ್ಸಮ್ ಪೌಡರ್ ಹೆಸರಿನಲ್ಲಿ ಅಡಿಕೆಗಳನ್ನು ಕಳ್ಳಸಾಗಣೆ ಮಾಡಲಾಗಿತ್ತು.
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…