Advertisement
ಪ್ರಮುಖ

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

Share

ಈಶಾನ್ಯ ರಾಜ್ಯದ ಮೂಲಕ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ಭಾರೀ ಪ್ರಮಾಣದ ವಿದೇಶಿ ಅಡಿಕೆಯನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಗುವಾಹಟಿ ಪ್ರಾದೇಶಿಕ ಘಟಕದ ಅಧಿಕಾರಿಗಳು ನಡೆಸಿದ ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಸುಮಾರು 60,000 ಕೆಜಿ ಅಕ್ರಮ ವಿದೇಶಿ ಅಡಿಕೆ ಜಪ್ತಿ ಮಾಡಿದ್ದಾರೆ. ಈ ಸಂಬಂಧ ಐವರನ್ನು ಬಂಧಿಸಲಾಗಿದೆ ಎಂದು ಹಣಕಾಸು ಸಚಿವಾಲಯ ಶುಕ್ರವಾರ ಮಾಹಿತಿ ನೀಡಿದೆ ಎಂದು ಸುದ್ದಿಸಂಸ್ಥೆ ಪಿಟಿಐ ತಿಳಿಸಿದೆ.

ಗುಪ್ತಚರ ಮಾಹಿತಿಯ ಆಧಾರದ ಮೇಲೆ ಮಿಜೋರಾಂ ಮತ್ತು ಅಸ್ಸಾಂ ರಾಜ್ಯಗಳಲ್ಲಿ ಡಿಆರ್‌ಐ ಅಧಿಕಾರಿಗಳು ವಿಶೇಷ ಕಾರ್ಯಾಚರಣೆ ನಡೆಸಿದ್ದರು. ಪ್ರಾಥಮಿಕ ತನಿಖೆಯಲ್ಲಿ, ಈ ವಿದೇಶೀ ಅಡಿಕೆಗಳನ್ನು ಮ್ಯಾನ್ಮಾರ್-ಮಿಜೋರಾಂ ಗಡಿಯ ಮೂಲಕ ಭಾರತಕ್ಕೆ ಕಳ್ಳಸಾಗಣೆ ಮಾಡಲಾಗಿದೆ ಎಂಬುದು ಬೆಳಕಿಗೆ ಬಂದಿದೆ.

ಒಂದು ಕಾರ್ಯಾಚರಣೆಯಲ್ಲಿ ಅಸ್ಸಾಂ ರೈಫಲ್ಸ್‌ನ 38ನೇ ಬಟಾಲಿಯನ್‌ ಸಹ ಡಿಆರ್‌ಐಗೆ ಸಹಕಾರ ನೀಡಿತ್ತು. ಅಧಿಕಾರಿಗಳು ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಭಾರೀ ಪ್ರಮಾಣದ ಅಕ್ರಮ ಅಡಿಕೆಯನ್ನು ವಶಪಡಿಸಿಕೊಂಡಿದ್ದಾರೆ.

ನೆರೆಯ ದೇಶಗಳಿಂದ ಆಗುತ್ತಿರುವ ಅಕ್ರಮ ಅಡಿಕೆ ಆಮದು ದೇಶೀಯ ಅಡಿಕೆ ಬೆಳೆಗಾರರಿಗೆ ಭಾರೀ ಆರ್ಥಿಕ ಹೊಡೆತ ನೀಡುತ್ತಿದೆ ಎಂದು ಹಣಕಾಸು ಸಚಿವಾಲಯ ಹೇಳಿದೆ. ಗಡಿ ಭಾಗಗಳ ಆರ್ಥಿಕ ಭದ್ರತೆಗೂ ಇದರಿಂದ ಧಕ್ಕೆಯಾಗುತ್ತಿದೆ ಎಂಬ ಆತಂಕ ವ್ಯಕ್ತವಾಗಿದೆ.

ಇತ್ತೀಚಿನ ವರ್ಷಗಳಲ್ಲಿ ಈಶಾನ್ಯ ರಾಜ್ಯಗಳ ಮೂಲಕ ವಿದೇಶೀ ಅಡಿಕೆ ಕಳ್ಳಸಾಗಣೆ ಪ್ರಕರಣಗಳು ಹೆಚ್ಚುತ್ತಿರುವುದು ಗಮನಾರ್ಹವಾಗಿದೆ. ವಿಶೇಷವಾಗಿ ಈಶಾನ್ಯ ರಾಜ್ಯಗಳ ಗಡಿ ಭಾಗಗಳನ್ನು ಬಳಸಿಕೊಂಡು ವಿದೇಶಿ ಅಡಿಕೆ ಭಾರತಕ್ಕೆ ಪ್ರವೇಶಿಸುತ್ತಿದೆ ಎಂಬ ಆರೋಪಗಳು ಹಿಂದಿನಿಂದಲೂ ಕೇಳಿಬರುತ್ತಿವೆ. ಅಡಿಕೆ ಬೆಲೆ ಹಾಗೂ ದೇಶೀಯ ಮಾರುಕಟ್ಟೆ ಮೇಲೆ ಇದರ ಪರಿಣಾಮದ ಬಗ್ಗೆ ಕೃಷಿ ವಲಯದಲ್ಲಿ ಚರ್ಚೆ ನಡೆಯುತ್ತಿದೆ.

ಅಕ್ರಮ ವಿದೇಶಿ ಅಡಿಕೆ ದೇಶೀಯ ಅಡಿಕೆ ಬೆಳೆಗಾರರಿಗೆ ದೊಡ್ಡ ಹೊಡೆತ ನೀಡುತ್ತಿದೆ ಎಂದು ಬೆಳೆಗಾರರು ಆರೋಪಿಸುತ್ತಿದ್ದಾರೆ. ಕಡಿಮೆ ದರದಲ್ಲಿ ಬರುತ್ತಿರುವ ವಿದೇಶಿ ಅಡಿಕೆ ಮಾರುಕಟ್ಟೆ ಬೆಲೆಗೆ ಒತ್ತಡ ತರುತ್ತಿದೆ ಎಂಬ ಮಾತು ಕೃಷಿ ವಲಯದಲ್ಲಿ ಕೇಳಿಬರುತ್ತಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಡಿಆರ್‌ಐ ಅಧಿಕಾರಿಗಳು ಪ್ರಕರಣದ ಕುರಿತು ತನಿಖೆ ಮುಂದುವರಿಸಿದ್ದು, ಈ ಜಾಲದ ಹಿಂದೆ ಇರುವ ಪ್ರಮುಖ ಆರೋಪಿಗಳನ್ನು ಪತ್ತೆಹಚ್ಚಲು ಕ್ರಮ ಕೈಗೊಂಡಿದ್ದಾರೆ.

ಕಳೆದ ಎರಡು ವಾರಗಳಿಂದ ಅಡಿಕೆ ಮಾರುಕಟ್ಟೆಯ ವ್ಯತ್ಯಾಸದ ಬಗ್ಗೆ “ದ ರೂರಲ್‌ ಮಿರರ್.ಕಾಂ” ವಿಶೇಷ ವರದಿ ಪ್ರಕಟ ಮಾಡಿತ್ತು.  ಈ ಮೂಲಕ ಅಕ್ರಮ ಅಡಿಕೆ ಸಾಗಾಟ, ಅಡಿಕೆ ದಾಸ್ತಾನು ಬಗ್ಗೆ ವಿಶೇಷ ವರದಿ ಪ್ರಕಟವಾಗಿತ್ತು. ಅಡಿಕೆ ಬೆಳೆಗಾರರಿಗೆ ಮಾಹಿತಿ ಹಾಗೂ ಜಾಗೃತಿಗೆ ಪ್ರಯತ್ನ ಮಾಡಿತ್ತು. ಇದೀಗ ಅಕ್ರಮ ಆಮದು ಸುದ್ದಿಗಳ ಖಚಿತವಾಗಿದೆ. ಹಿಂದಿನ ಸುದ್ದಿಗಳ ಲಿಂಕ್‌ ಇಲ್ಲಿದೆ………

 

The Directorate of Revenue Intelligence (DRI), Guwahati Regional Unit, seized around 60,000 kg of smuggled foreign supari in two major operations conducted in the Northeast region. Officials suspect the arecanut was illegally brought into India through border routes. The seizure has raised concerns among Indian arecanut growers over the impact of cheap foreign imports on domestic market prices.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

₹1.65 ಲಕ್ಷದ ಐಫೋನ್‌ಗಾಗಿ ಬೆಳಗ್ಗೆಯಿಂದಲೇ ಸರದಿ..! ಬೆಂಗಳೂರಿನಿಂದ ಮುಂಬೈವರೆಗೆ ಕಂಡ ‘ಐಫೋನ್‌ ಕ್ರೇಜ್’

₹1.65 ಲಕ್ಷದಿಂದ ಬೆಲೆ ಆರಂಭವಾಗುವ ಐಫೋನ್‌ 18 ಪ್ರೊ ಖರೀದಿಗಾಗಿ ದೇಶದ ಹಲವು…

9 hours ago

ಹವಾಮಾನ ವರದಿ | 21-09-2026 | ಕರಾವಳಿಯಲ್ಲಿ ಜೋರು ಮಳೆಯ ಸಾಧ್ಯತೆ ಕಡಿಮೆ

ಅರಬ್ಬಿ ಸಮುದ್ರದ ಕಡೆಯಿಂದ ಬೀಸುವ ಗಾಳಿಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮುನ್ಸೂಚನೆಯಲ್ಲಿದ್ದಷ್ಟು…

1 day ago

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…

2 days ago

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ

ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…

2 days ago

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

3 days ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

3 days ago