ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕುಡಿಯುವ ನೀರು, ಬೇಸಿಗೆ ಸಮಸ್ಯೆ ಹಾಗೂ ಮಳೆಗಾಲವನ್ನು ಎದುರಿಸಲು ಅಗತ್ಯ ಸಿದ್ಧತೆಗಳ ಕುರಿತು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಸಭೆ ನಡೆಸಲಾಯಿತು.
ಸದ್ಯ ಅಣೆಕಟ್ಟುಗಳಲ್ಲಿ ಸದ್ಯ ನೀರಿನ ಸಂಗ್ರಹ ಉತ್ತಮವಾಗಿದ್ದು, ಮಳೆಯೂ ಬರುತ್ತಿರುವುದರಿಂದ ಕುಡಿಯುವ ನೀರಿನ ಅಭಾವ ತಲೆದೋರದಿದರೂ, ಮುಂದಿನ ಎರಡು ತಿಂಗಳ ಅವಧಿಯಲ್ಲಿ ಯಾವುದೇ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಅಧಿಕಾರಿಗಳಿಗೆ ದಿನೇಶ್ ಗುಂಡೂರಾವ್ ಸೂಚನೆ ನೀಡಿದರು. ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಿರುವ ಕಾರಣ ಜಲಮೂಲಗಳಲ್ಲಿ ಬೇಸಿಗೆಯ ನೀರಿನ ಪೂರೈಕೆಗೆ ಅಗತ್ಯ ನೀರಿನ ಸಂಗ್ರಹವಿದೆ. ಮೇ ತಿಂಗಳಲ್ಲೇ ಮುಂಗಾರು ಆರಂಭವಾಗುವ ನಿರೀಕ್ಷೆ ಇರುವ ಕಾರಣ ನೀರಿನ ಸಮಸ್ಯೆ ಎದುರಾಗಬಹುದು ಎಂದು ಮುಲ್ಲೈ ಮುಗಿಲನ್ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಆಂದನ್, ಶಾಸಕ ಆಶೋಕ ಕುಮಾರ್ ರೈ, ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಶಿವಮೊಗ್ಗದಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ಸಂದರ್ಭದಲ್ಲಿ ಜನಿವಾರ ಧರಿಸಿದ ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಿಸಿದ…
ಕಳೆದ ಎರಡು ದಿನಗಳಿಂದ ದಾವಣಗೆರೆ ಜಿಲ್ಲೆಯ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗುತ್ತಿದ್ದು, ತೋಟಗಾರಿಕೆ…
ಮಲೆನಾಡು-ಕರಾವಳಿ ಸೇರಿದಂತೆ ರಾಜ್ಯದ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಹಲಸಿನ ಕಾಯಿ ದೋಸೆ ಹಿಟ್ಟಿನ ಪಡ್ಡು ಮಾಡುವ ವಿಧಾನ : ದೋಸೆ ಹಿಟ್ಟು,…
19.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…