ಈ ಬಾರಿ ವರುಣ ಬಹಳ ವಿಳಂಬವಾಗಿ ಎಂಟ್ರಿ ಕೊಡುವ ಮುನ್ಸೂಚನೆ ಕಾಣಿಸುತ್ತಿದೆ. ಜೂನ್ 4 ಕ್ಕೆ ಕೇರಳಕ್ಕೆ ಪ್ರವೇಶವಾಗಬೇಕಿದ್ದ ಮುಂಗಾರು ಇನ್ನು ಪತ್ತೆಯಾಗಿಲ್ಲ. ಆದರೆ ಮುಂಗಾರು ಪೂರ್ವ ಮಳೆ ಕರಾವಳಿಯ ಕೆಲ ಭಾಗಗಳಲ್ಲಿ ಸುರಿದರು, ಸೆಕೆ ಹೆಚ್ಚಿಸಿದ್ದು ಬಿಟ್ಟರೆ ಹೆಚ್ಚಿನ ಪ್ರಯೋಜನವೇನು ಆಗಿಲ್ಲ. ಈಗ ರಾಜ್ಯಕ್ಕೆ ಮುಂಗಾರು ಆಗಮನ ವಿಳಂಬವಾದ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೀರಿನ ಬವಣೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಮನೆ, ಕಚೇರಿ, ಶಾಲಾ-ಕಾಲೇಜುಗಳಲ್ಲಿ ನೀರಿನ ಕೊರತೆ ಉಂಟಾಗಿ ತೊಂದರೆಯಾಗಿದೆ.
ಇನ್ನು ಈಗಷ್ಟೇ ಶಾಲಾ-ಕಾಲೇಜುಗಳು ಆರಂಭವಾಗಿದ್ದು ನೀರಿನ ಕೊರತೆಯಿಂದ ಮಕ್ಕಳಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ನೀರಿನ ಸಮಸ್ಯೆ ಉದ್ಭವವಾದುದರಿಂದ ಜಿಲ್ಲೆಯ ಕೆಲ ಖಾಸಗಿ ಶಿಕ್ಷಣ ಸಂಸ್ಥೆಗಳು ರಜೆ ಘೋಷಣೆ ಮಾಡಿವೆ. ಇನ್ನು ಕೆಲವೆಡೆ ಶಿಕ್ಷಣ ಸಂಸ್ಥೆಗಳು ಅರ್ಧ ದಿನ ತರಗತಿ ನಡೆಸುತ್ತಿವೆ. ಕಾಲೇಜು ವಿದ್ಯರ್ಥಿಗಳಿಗೆ ಆನ್ ಲೈನ್ ಮೂಲಕ ಪಾಠಗಳನ್ನು ಮಾಡಲಾಗುತ್ತಿದೆ.
ವಿಶೇಷವಾಗಿ ಮಂಗಳೂರು ಉತ್ತರ ಹಾಗೂ ದಕ್ಷಿಣ ವಲಯದ ಶಾಲೆಗಳಿಗೂ ನೀರಿನ ಕೊರೆತೆ ಕಾಣಿಸಿಕೊಂಡಿದ್ದು, ಇಲಾಖೆಯ ಪ್ರಕಾರ ಮೂಲ್ಕಿ ಮೂರು ಶಾಲೆಗಳಿಗೆ ಮತ್ತು ವಿಟ್ಲದ ಒಂದು ಶಾಲೆಯಲ್ಲಿ ವಾರಕ್ಕೊಂದು ಬಾರಿ ಮಾತ್ರ ನೀರು ಪೂರೈಕೆಯಾಗುತ್ತಿದೆ. ಇದರಿಂದ ಮಕ್ಕಳಿಗೆ ಸಾಕಷ್ಟು ಸಮಸ್ಯೆಯಾಗುತ್ತಿದೆ.
ಇನ್ನೊಂದಡೆ ಪಿಯುಸಿ ಹಾಗೂ ಪದವಿ ತರಗತಿಗಳು ಕೂಡ ಆರಂಭವಾಗಿದ್ದು, ಪ್ರಮುಖ ಹಾಸ್ಟೆಲ್‌ಗಳಲ್ಲಿ ನೀರಿನ ಸಮಸ್ಯೆಗಳು ಕಾಣಿಸಿಕೊಂಡಿದೆ. ನಗರದ ಪ್ರಮುಖ ವಿದ್ಯಾಸಂಸ್ಥೆಯಲ್ಲಿ ದಿನವೊಂದಕ್ಕೆ 10 ಟ್ಯಾಂಕರ್ ನೀರನ್ನು ಪೂರೈಕೆ ಮಾಡಿಕೊಂಡು ಪರಿಸ್ಥಿತಿ ಸುಧಾರಣೆ ಮಾಡುವ ಕಾರ‍್ಯವಾಗುತ್ತಿದೆ.
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…
ರಾಜ್ಯದಲ್ಲಿ ತುಮಕೂರು, ಚಿತ್ರದುರ್ಗ, ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಹೆಚ್ಚಾಗಿ ಹುಣಸೆಹಣ್ಣು ಬೆಳೆಯಲಾಗುತ್ತಿದೆ. ಈ…